ಬೆಟಗೇರಿ: ಮೊಟ್ಟ ಮೊದಲ ಮಹಾಕಾವ್ಯ ರಚಿಸಿದ್ದರಿಂದ ಮಹರ್ಷಿ ವಾಲ್ಮೀಕಿಯನ್ನು ಆದಿಕವಿ ಎಂದು ಕರೆಯಲಾಗುತ್ತದೆ. ಒಬ್ಬ ಕ್ರೂರ ವ್ಯಕ್ತಿಯು ಮಹಾನ್ ಖುಷಿಯಾಗಿ ಪರಿವರ್ತನೆಯಾದ ಪವಾಡಕ್ಕೆ ವಾಲ್ಮೀಕಿ ಜೀವನವೇ ಸಾಕ್ಷಿ ಎಂದು ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ ಹೇಳಿದರು.
ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಅ.7ರಂದು ನಡೆದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ವಾಲ್ಮೀಕಿ ಭಾವ ಚಿತ್ರಕ್ಕೆ ಪೊಜೆ, ಪುಷ್ಪಾರ್ಪನೆ ನೆರವೇರಿಸಿ ಮಾತನಾಡಿ, ಮಹರ್ಷಿ ವಾಲ್ಮೀಕಿ ಒಬ್ಬ ಶ್ರೇಷ್ಠ ಖುಷಿ ಮತ್ತು ಕವಿಯಾಗಿದ್ದರು. ಮಹರ್ಷಿ ವಾಲ್ಮೀಕಿ ತೋರಿದ ಬೆಳಕಿನ ದಾರಿಯಲ್ಲಿ ನಾವೆಲ್ಲರೂ ಸಾಗಬೇಕಿದೆ ಎಂದರು.
ಶಾಲೆಯ ಎಸ್‍ಡಿಎಮ್‍ಸಿ ಅಧ್ಯಕ್ಷ ರಾಮಣ್ಣ ನೀಲಣ್ಣವರ, ಶಿಕ್ಷಕರಾದ ವೈ.ಎಂ.ವಗ್ಗರ, ಗಣಪತಿ ಭಾಗೋಜಿ, ಮಂಜುನಾಥ ಸವತಿಕಾಯಿ, ಆನಂದ ಬಡಿಗೇರ, ನಾಗರಾಜ ಅರಳಿಮಟ್ಟಿ, ಸಿರಾಜ ಅಹ್ಮದ ಜಿಡ್ಡಿಮನಿ, ಮಂಜು ದಾವಣಿ, ಮಲ್ಹಾರಿ ಪೋಳ, ಎಸ್‍ಡಿಎಮ್‍ಸಿ ಸದಸ್ಯರು, ಶಿಕ್ಷಕರು, ಸಿಬಂ್ಬದಿ ವರ್ಗ, ವಿದ್ಯಾರ್ಥಿಗಳು ಇದ್ದರು.
ಗ್ರಾಮ ಪಂಚಾಯ್ತಿ: ಬೆಟಗೇರಿ ಗ್ರಾಮ ಪಂಚಾಯತಿಯಲ್ಲಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಅ.7ರಂದು ನಡೆಯಿತು. ಸ್ಥಳೀಯ ಗ್ರಾಮ ಪಂಚಾಯ್ತಿ ಪಿಡಿಒ ಎಮ್.ಎಲ್.ಯಡ್ರಾಂವಿ ವಾಲ್ಮೀಕಿ ಭಾವ ಚಿತ್ರಕ್ಕೆ ಪೂಜೆ, ಪುಷ್ಪಾರ್ಪನೆ ನೆರವೇರಿಸಿದರು. ಗ್ರಾಪಂ ಅಧ್ಯಕ್ಷೆ ಯಲ್ಲವ್ವ ಚಂದರಗಿ, ಗ್ರಾಪಂ ಮಾಜಿ ಅಧ್ಯಕ್ಷ ಲಕ್ಷ್ಮಣ ಚಂದರಗಿ, ಕಾರ್ಯದರ್ಶಿ ಎಮ್.ಪಿ.ತಳವಾರ, ಕರ ವಸೂಲಿಗಾರ ಸುರೇಶ ಬಾಣಸಿ, ಬಸವರಾಜ ಪಣದಿ, ವಿಠಲ ಚಂದರಗಿ, ಮುತ್ತೆಪ್ಪ ವಡೇರ, ಶಿವಾನಂದ ಐದುಡ್ಡಿ, ಈರಣ್ಣ ದಂಡಿನ, ಮೇಳೆಪ್ಪ ಹರಿಜನ, ಶಿವಾನಂದ ತೋಟಗಿ, ಗ್ರಾಪಂ ಸದಸ್ಯರು, ಸಿಬ್ಬಂದಿ, ಗ್ರಾಮಸ್ಥರು ಇದ್ದರು.
ಪ್ರಾಥಮಿಕ ಕನ್ನಡ ಶಾಲೆ: ಸ್ಥಳೀಯ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮತ್ತು ಹೆಣ್ಣು ಮಕ್ಕಳ ಶಾಲೆಯಲ್ಲಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಅ.7ರಂದು ನಡೆಯಿತು. ಪ್ರಧಾನ ಗುರು ವೈ.ಸಿ. ಶೀಗಿಹಳ್ಳಿ ವಾಲ್ಮೀಕಿ ಭಾವ ಚಿತ್ರಕ್ಕೆ ಪೊಜೆ, ಪುಷ್ಪಾರ್ಪನೆ ನೆರವೇರಿಸಿದರು. ಎಸ್.ಬಿ.ಸನದಿ, ಉಭಯ ಶಾಲೆಗಳ ಎಸ್‍ಡಿಎಮ್‍ಸಿ ಅಧ್ಯಕ್ಷರು, ಸದಸ್ಯರು, ಶಿಕ್ಷಕರು, ಮಕ್ಕಳು, ಇತರರು ಇದ್ದರು.