Breaking News
Home / ಬೆಳಗಾವಿ / ರಾಜ್ಯ ಮಟ್ಟದ ಕವಿಗೋಷ್ಠಿಗೆ ಬಾಳೇಶ ಫಕ್ಕೀರಪ್ಪನವರ ಆಯ್ಕೆ

ರಾಜ್ಯ ಮಟ್ಟದ ಕವಿಗೋಷ್ಠಿಗೆ ಬಾಳೇಶ ಫಕ್ಕೀರಪ್ಪನವರ ಆಯ್ಕೆ

Spread the love

ಬೆಟಗೇರಿ:ಗೋಕಾಕ ತಾಲೂಕಿನ ಗೋಸಬಾಳ ಗ್ರಾಮದ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಆಂಗ್ಲ ಭಾಷಾ ಶಿಕ್ಷಕ, ಉದಯೋನ್ಮುಖ ಬರಹಗಾರ ಬಾಳೇಶ ಬಸವರಾಜ ಫಕ್ಕೀರಪ್ಪನವರ(ತಡಕೋಡ)ಅವರು ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ಇದೇ ನ.23 ರಂದು ಬೈಲಹೊಂಗಲ ಪಟ್ಟಣದ ಚನ್ನಮ್ಮ ಸಮಾಧಿ ರಸ್ತೆಯಲ್ಲಿರುವ ಗಣಾಚಾರಿ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ನಡೆಯುವ ರಾಜ್ಯ ಮಟ್ಟದ ಕವಿಗೋಷ್ಠಿಗೆ ಆಯ್ಕೆಯಾಗಿದ್ದಾರೆ ಎಂದು ಕವಿಗೋಷ್ಠಿಯ ಮುಖ್ಯ ಸಂಯೋಜಕ, ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಮೋಹನ ಬಸನಗೌಡ ಪಾಟೀಲ ತಿಳಿಸಿದ್ದಾರೆ.

ರಾಜ್ಯ ಮಟ್ಟದ ಕವಿಗೋಷ್ಠಿಗೆ ಆಯ್ಕೆಗೊಂಡ ಬಾಳೇಶ ಫಕ್ಕೀರಪ್ಪನವರು ವೃತ್ತಿಯಲ್ಲಿ ಪ್ರಾಥಮಿಕ ಶಾಲೆಯ ಆಂಗ್ಲಭಾಷಾ ಶಿಕ್ಷಕರಾದರೂ ಕನ್ನಡ ಸಾಹಿತ್ಯದ ಅಪಾರ ಒಲವು ಹೊಂದಿದ್ದಾರೆ. ಹಲವಾರು ಕಥೆ, ಕವನ, ಶಾಲಾ ಗೀತೆ ಚುಟುಕುಗಳನ್ನು ಬರೆದಿದ್ದಾರೆ. ಉತ್ತಮ ವಾಗ್ಮಿಯೂ ಆಗಿರುವ ಬಾಳೇಶರವರು ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ತಿನ, ಧಾರವಾಡದ ಕರ್ನಾಟಕ ವಿದ್ಯಾವರ್ದಕ ಸಂಘದ ಹಾಗೂ ಕೇಂದ್ರ ಬಸವ ಸಮಿತಿ ಬಸವ ಪಥ ಸದಸ್ಯರು ಆಗಿ ಸೇವೆ ಸಲ್ಲಿಸುತ್ತಿದ್ದಾರೆ.
ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಮೋಹನ ಪಾಟೀಲ, ಚಿಕ್ಕೋಡಿ ಶೈಕ್ಷಣೀಕ ಜಿಲ್ಲೆಯ ಅಖಿಲ ಕರ್ನಾಟಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸಿದ್ರಾಮ ಲೋಕನ್ನವರ, ಗೋಕಾಕ ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷೆ ಭಾರತಿ ಮದಭಾವಿ, ಗೋಸಬಾಳ ಎಸ್.ಡಿ.ಎಮ್.ಸಿ ಅಧ್ಯಕ್ಷ ಶಂಕರಯ್ಯ ಮಠದ, ಸದಸ್ಯರು, ಶಾಲೆಯ ಶಿಕ್ಷಕರು, ಅತಿಥಿ ಶಿಕ್ಷಕರು, ಶಿಕ್ಷಣಪ್ರೇಮಿಗಳು, ಸಾಹಿತ್ಯಾಭಿಮಾನಿಗಳು, ಸ್ಥಳೀಯರು ರಾಜ್ಯ ಮಟ್ಟದ ಕವಿಗೋಷ್ಠಿಗೆ ಆಯ್ಕೆಯಾದ ಶಿಕ್ಷಕ ಬಾಳೇಶ ಫಕ್ಕೀರಪ್ಪನವರ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.


Spread the love

About inmudalgi

Check Also

ಸಾಲುಮರದ ತಿಮ್ಮಕ್ಕಳಿಗೆ ಶ್ರದ್ಧಾಂಜಲಿ ಅರ್ಪಣೆ: ಪರಿಸರಕ್ಕೆ ಸಾಲುಮರದ ತಿಮ್ಮಕ್ಕಳ ಕೊಡುಗೆ ಅಪಾರ

Spread the love ಮೂಡಲಗಿ: ಮೂಡಲಗಿಯಲ್ಲಿ ವೃಕ್ಷಮಾತೆ ಸಾಲುಮರದ ತಿಮ್ಮಕ್ಕಳ ನಿಧನಕ್ಕೆ ಮೂಡಲಗಿಯ ನಿಸರ್ಗ ಫೌಂಡೇಶನ, ಯುವ ಜೀವನ ಸೇವಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ