Breaking News
Home / ಬೆಳಗಾವಿ / ಶಾಲಾ ಮಕ್ಕಳಲ್ಲಿ ಶಿಕ್ಷಕರು ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಬೇಕು: ಎಮ್.ಬಿ.ನಾಯ್ಕರ

ಶಾಲಾ ಮಕ್ಕಳಲ್ಲಿ ಶಿಕ್ಷಕರು ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಬೇಕು: ಎಮ್.ಬಿ.ನಾಯ್ಕರ

Spread the love

ಬೆಟಗೇರಿ:ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಶಾಲಾ ಮಕ್ಕಳು ಪಾಲ್ಗೊಳ್ಳಬೇಕು, ಇಂದಿನ ಯುಗದಲ್ಲಿ ಶಾಲಾ ಮಕ್ಕಳು ಪುಸ್ತಕ ಓದುವ ಹವ್ಯಾಸ ಬೆಳಸಿಕೊಳ್ಳಬೇಕು ಎಂದು ಗೋಕಾಕ ತಾಲೂಕಿನ ಬೆಟಗೇರಿ ಸಿಆರ್‍ಪಿ ಎಮ್.ಬಿ.ನಾಯ್ಕರ ಹೇಳಿದರು.
ಗೋಕಾಕ ತಾಲೂಕಿನ ಬೆಟಗೇರಿ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮತ್ತು ಹೆಣ್ಣು ಮಕ್ಕಳ ಶಾಲೆಯಲ್ಲಿ ಇತ್ತೀಚೆಗೆ ನಡೆದ ಬೆಟಗೇರಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಲೋತ್ಸವ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿದ ಬಳಿಕ ಮುಖ್ಯಅತಿಥಿಗಳಾಗಿ ಮಾತನಾಡಿ, ಶಾಲಾ ಮಕ್ಕಳಲ್ಲಿ ಶಿಕ್ಷಕರು ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಬೇಕು ಎಂದರು.
ಸ್ಥಳೀಯ ಹೆಣ್ಣು ಮಕ್ಕಳ ಶಾಲೆಯ ಮುಖ್ಯೋಪಾಧ್ಯಯ ವೈ.ಸಿ. ಶೀಗಿಹಳ್ಳಿ ಅಧ್ಯಕ್ಷತೆ, ಸ್ಥಳೀಯ ವೇದಮೂರ್ತಿ ಈರಯ್ಯ ಹಿರೇಮಠ ಸಾನಿಧ್ಯ ವಹಿಸಿ, ಬೆಟಗೇರಿ ಗ್ರಂಥಾಲಯ ಮೇಲ್ವಿಚಾರಕ ಬಸವರಾಜ ಪಣದಿ ಅತಿಥಿಗಳಾಗಿ ಮಾತನಾಡಿದರು. ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದವರನ್ನು ಈ ವೇಳೆ ಸತ್ಕರಿಸದ ನಂತರ ಬೆಟಗೇರಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಲೋತ್ಸವದ ವಿವಿಧ ಕಾರ್ಯಕ್ರಮಗಳು ನಡೆದವು.
ಗ್ರಾಪಂ ಮಾಜಿ ಅಧ್ಯಕ್ಷ ಲಕ್ಷ್ಮಣ ಚಂದರಗಿ, ಗೋಸಬಾಳ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಯ ಸಿದ್ರಾಮ ಲೋಕನ್ನವರ, ಬಿ.ಬಿ.ಕಿವಟಿ, ದುಂಡಪ್ಪ ಕಂಬಿ, ಸಿದ್ಧಾರೂಢ ವಡೇರ, ಈರಣ್ಣ ಬಳಿಗಾರ, ಅಶೋಕ ಕೋಣಿ, ಗುಳಪ್ಪ ಪಣದಿ, ಮಲ್ಲಿಕಾರ್ಜುನ ನೀಲಣ್ಣವರ, ಎಸ್.ಬಿ. ಸನದಿ, ಬಿ.ಎ.ಕೋಟಿ, ವಿಶ್ವನಾಥ ಶೀಗಿಹಳ್ಳಿ, ಸ್ಥಳೀಯ ಉಭಯ ಶಾಲೆಯ ಎಸ್‍ಡಿಎಮ್‍ಸಿ ಸದಸ್ಯರು, ಶಿಕ್ಷಕರು, ಅತಿಥಿ ಶಿಕ್ಷಕರು, ಪಾಲಕರು, ಉಭಯ ಶಾಲಾ ಮಕ್ಕಳು, ಮತ್ತೀತರರು ಇದ್ದರು.


Spread the love

About inmudalgi

Check Also

ನೂತನವಾಗಿ ನಿರ್ಮಿಸಿರುವ ನಾಡ ಕಚೇರಿಯನ್ನು ಉದ್ಘಾಟಿಸಿದ ಯುವ ಮುಖಂಡ ಸರ್ವೋತ್ತಮ ಜಾರಕಿಹೊಳಿ

Spread the love *ಕೌಜಲಗಿ.* (ತಾ.ಗೋಕಾಕ) ಕೌಜಲಗಿ ಭಾಗದ ಸಾರ್ವಜನಿಕರಿಗೆ ಆಡಳಿತಾತ್ಮಕವಾಗಿ ಅನುಕೂಲವಾಗಲು ನಾಡ ಕಚೇರಿಯನ್ನು ಸ್ವಂತ ಕಚೇರಿಯಲ್ಲಿ ಕಾರ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ