
ಬೆಟಗೇರಿ:ಭಾರತ ಸಂವಿಧಾನವು ಭಾರತೀಯ ಪ್ರಜಾಪ್ರಭುತ್ವ ಭದ್ರ ಬುನಾದಿಯಾಗಿದೆ. ನಮ್ಮ ಸಂವಿಧಾನ ಸಾಮಾಜಿಕ ನ್ಯಾಯ ಮತ್ತು ಸಮಾನತೆಯನ್ನು ಎತ್ತಿಹಿಡಿದಿದೆ ಎಂದು ಬೆಟಗೇರಿ ವಿವಿಡಿ ಸರಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ ಹೇಳಿದರು.
ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರಕಾರಿ ಪ್ರೌಢ ಶಾಲೆಯಲ್ಲಿ ನ.26ರಂದು ಸಂವಿಧಾನ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಭಾರತದ ಸಂವಿಧಾನ ಜಗತ್ತಿನಲ್ಲಿಯೇ ಶ್ರೇಷ್ಠ ಲಿಖಿತ ಸಂವಿಧಾನವಾಗಿದೆ ಎಂದರು.
ಸ್ಥಳೀಯ ಪ್ರೌಢ ಶಾಲೆಯ ಅತಿಥಿಶಿಕ್ಷಕ ಮಂಜುನಾಥ ಸವತಿಕಾಯಿ ಕಾರ್ಯಕ್ರಮದಲ್ಲಿ ಭಾರತ ಸಂವಿಧಾನ ಕುರಿತು ಮಾತನಾಡಿದರು. ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಭಾವ ಚಿತ್ರಕ್ಕೆ ಪೂಜಾ ಸಮರ್ಪನೆ ನೆರವೇರಿಸಿದ ಬಳಿಕ ಶಾಲಾ ಮಕ್ಕಳಿಗೆ ಸಿಹಿ ವಿತರಿಸಲಾಯಿತು.
ಸ್ಥಳೀಯ ಪ್ರೌಢ ಶಾಲೆಯ ಸಹಶಿಕ್ಷಕರಾದ ಈರಣ್ಣ ಪಟಗುಂದಿ, ಪ್ರಕಾಶ ಕುರಬೇಟ, ರಾಕೇಶ ನಡೋಣಿ, ಶುಭಾ.ಬಿ., ಗಣಪತಿ ಭಾಗೋಜಿ, ಭಾಗ್ಯಶ್ರೀ ನಾಯಕ, ಸಿರಾಜಅಹಮ್ಮದ ಜಿಡ್ಡಿಮನಿ, ಸೌಮ್ಯಾಶ್ರೀ ಗಂಗಾ, ಕಿರಣ ಕಮತ, ಸವಿತಾ ಜೋಗಿ, ಆನಂದ ಬಡಿಗೇರ, ಶ್ರೀಲಕ್ಷ್ಮಿ ಕಾಶಪ್ಪನವರ, ಸಹ ಶಿಕ್ಷಕರು, ಅತಿಥಿಶಿಕ್ಷಕರು, ಸಿಬ್ಬಂದಿವರ್ಗ, ವಿದ್ಯಾರ್ಥಿಗಳು ಇದ್ದರು.
IN MUDALGI Latest Kannada News