*ಪೋಲಿಯೋ ಮುಕ್ತ ರಾಷ್ಟ್ರ ನಿರ್ಮಿಸಲು ಪ್ರತಿಯೊಂದು ಮಗುವಿಗೆ ಪೋಲಿಯೋ ಲಸಿಕೆ ಅವಶ್ಯ : ಜಿಲ್ಲಾಧ್ಯಕ್ಷ ಸಿದ್ದಣ್ಣ ದುರದುಂಡಿ*
ಮೂಡಲಗಿ : ಐದು ವರ್ಷದ ಒಳಗಿನ ಎಲ್ಲಾ ಮಕ್ಕಳಿಗೆ ಪಲ್ಸ್ ಪೋಲಿಯೋ ಹನಿ ಕಡ್ಡಾಯವಾಗಿ ಹಾಕಿಸಿ ಪೋಲಿಯೋ ಮುಕ್ತ ರಾಷ್ಟ್ರ ನಿರ್ಮಾಣ ಮಾಡಲು ಪ್ರತಿಯೊಬ್ಬರು ಕೈ ಜೋಡಿಸಬೇಕು ಎಂದು ಜೈ ಕರ್ನಾಟಕ ಗ್ರಾಮೀಣ ಅಭಿವೃದ್ಧಿ ಸಂಘದ ಅಧ್ಯಕ್ಷರಾದ ಸಿದ್ದಣ್ಣ ದುರದುಂಡಿ ಹೇಳಿದರು.

ಹಳ್ಳೂರ ಗ್ರಾಮದ ಶ್ರೀ ಹನುಮಾನ್ ದೇವಸ್ಥಾನದಲ್ಲಿ ಹಮ್ಮಿಕೊಂಡಿದ್ದ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಮಗುವಿಗೆ ಪೋಲಿಯೋ ಲಸಿಕೆ ಹಾಕುವುದರ ಮೂಲಕ ಚಾಲನೆ ನೀಡಿ ಮಾತನಾಡಿ ರಾಜ್ಯದಾದ್ಯಂತ “ಪೋಲಿಯೋ ಲಸಿಕಾ ಅಭಿಯಾನ” ಪ್ರಾರಂಭವಾಗಿದೆ ಹತ್ತಿರದ ಸರಕಾರಿ ಆಸ್ಪತ್ರೆಗಳಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಹಾಗೂ ತಮ್ಮ ತಮ್ಮ ಬೂತ್‌ಗಳಲ್ಲಿ ನಿಮ್ಮ ಮಗುವಿಗೆ 2 ಹನಿ ಪೋಲಿಯೋ ಲಸಿಕೆ ಹಾಕಿಸಿ ಆ ಮಗು ಸದೃಢ ಮತ್ತು ಆರೋಗ್ಯಕರ ಜೀವನ ನಡೆಸಲು ಪ್ರತಿಯೊಬ್ಬರೂ ಜಾಗೃತಿ ಮೂಡಿಸಬೇಕು ಎಂದರು.

ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ವಾಸಂತಿ ತೇರದಾಳ ಮಾತನಾಡಿ ಪೋಲಿಯೋ ಮುಕ್ತ ಕರ್ನಾಟಕಕ್ಕಾಗಿ ನಮ್ಮದೊಂದು ಹೆಜ್ಜೆಯಾದಿಗೆ ಇಂದಿನಿಂದ ನಾಲ್ಕು ದಿನಗಳವರೆಗೆ 0-5 ವರ್ಷದ ಎಲ್ಲಾ ಮಕ್ಕಳಿಗೆ ಸಮಯ ಬೆಳಗ್ಗೆಯಿಂದ ಸಂಜೆಯವರೆಗೆ ಕಾರ್ಯಕ್ರಮ ಇರುತ್ತದೆ ಇದರ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕು ಎಂದು ಹೇಳಿದರು.
ಹಳ್ಳೂರ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ನೀಲವ್ವ ಹೊಸಟ್ಟಿ, ಮಾಜಿ ಉಪಾಧ್ಯಕ್ಷರಾದ ಜಯಶ್ರೀ ಮರ್ಜಿ, ತಾಲೂಕು ಪಂಚಾಯಿತಿ ಮಾಜಿ ಸದಸ್ಯರಾದ ಸವಿತಾ ಡಬ್ಬಣ್ಣವರ, ಮಲ್ಲಪ್ಪ ಹೊಸಟ್ಟಿ, ಅಭಿಷೇಕ್ ಕುಲಕರ್ಣಿ, ವತ್ಸಲಾ ಹಿರೇಮಠ, ರಾಜಶ್ರೀ ಕುಲಕರ್ಣಿ, ಸರೋಜಿನಿ ಮುಗಳಖೋಡ, ಯಮನವ್ವ ಶಹಾಪೂರ, ಕವಿತಾ ಗೌಡವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಅಂಗನವಾಡಿ ಕಾರ್ಯಕರ್ತರು ಮುಂತಾದವರು ಉಪಸ್ಥಿತರಿದ್ದರು ಅಂಗನವಾಡಿ ಕಾರ್ಯಕರ್ತರು.
IN MUDALGI Latest Kannada News
