ತಮ್ಮ ಮಗುವಿಗೆ ತಪ್ಪದೇ ಪೋಲಿಯೊ ಹನಿ ಹಾಕಿಸಿ : ಲಕ್ಷ್ಮಣ ಚಂದರಗಿ
ಬೆಟಗೇರಿ:ನಿಮ್ಮ ಮನೆಯಲ್ಲಿರುವ ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೊ ಹನಿ ತಪ್ಪದೇ ಹಾಕಿಸಿ ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯತ ಮಾಜಿ ಅಧ್ಯಕ್ಷ ಲಕ್ಷ್ಮಣ ಚಂದರಗಿ ಹೇಳಿದರು.
ಗೋಕಾಕ ತಾಲೂಕಿನ ಬೆಟಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ರವಿವಾರ ಡಿ.21ರಂದು ನಡೆದ ಪಲ್ಸ್ ಪೋಲಿಯೊ ಹನಿ ಹಾಕುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ತಮ್ಮ ಮಕ್ಕಳಿಗೆ ಪೋಲಿಯೊ ಹನಿ ಸುರಕ್ಷಿತವಾಗಿದ್ದು, ಪೋಲಿಯೊ ಹನಿ ಹಾಕಿಸಿ, ಪೋಲಿಯೊ ಮುಕ್ತ ಸಮಾಜ ನಿರ್ಮಾಣಕ್ಕೆÉ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದರು.
ಗೋಕಾಕ ತಾಲೂಕಿನ ಬೆಟಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯ ಎಲ್ಲಾ ಹಳ್ಳಿಗಳ ಸ್ಥಳೀಯ ನಾಗರಿಕರು ತಮ್ಮ ಮನೆಯಲ್ಲಿರುವ ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕಿಸಿಕೊಳ್ಳಬೇಕು. ಸ್ಥಳೀಯರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಎಂದು ಗೋಕಾಕ ತಾಲೂಕಿನ ಬೆಟಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸರಸ್ವತಿ ತಂಬಾಕೆ ತಿಳಿಸಿದರು.
ಸ್ಥಳೀಯ ಗ್ರಾಪಂ ಕಾರ್ಯದರ್ಶಿ ಮಾರುತಿ ತಳವಾರ, ಬಸವರಾಜ ಪಣದಿ, ಪಿಎಚ್‍ಸಿ ಆಯುಷ ವೈದ್ಯಾಧಿಕಾರಿ ರಷ್ಮೀ ಹುಂಡೆಕರ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಅರ್ಜುನ ಕರಾಟೆ, ಅಕ್ಷತಾ ಗಿವಾರಿ, ಅಂಜನಾ ಬಡಿಗೇರ, ಲಕ್ಷ್ಮೀ ಬಳಿಗಾರ, ಮಾಲಾ ದೇಯಣ್ಣವರ, ಭಾರತಿ ಅಜ್ಜನಕಟ್ಟಿ, ಸಕೂಬಾಯಿ ಕಂಬಾರ, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ, ಮತ್ತಿತರರು ಇದ್ದರು.
IN MUDALGI Latest Kannada News