Breaking News
Home / ಬೆಳಗಾವಿ / ಯುವ ಸಾಧಕ ಹಣಮಂತ ಮದಣ್ಣವರ ಗೆ ರಾಜ್ಯ ಯುವ ಪ್ರಶಸ್ತಿ ಪ್ರಧಾನ

ಯುವ ಸಾಧಕ ಹಣಮಂತ ಮದಣ್ಣವರ ಗೆ ರಾಜ್ಯ ಯುವ ಪ್ರಶಸ್ತಿ ಪ್ರಧಾನ

Spread the love

ಮೂಡಲಗಿ : ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದಿಂದ ಕೊಡಮಾಡುವ ರಾಜ್ಯ ಯುವ ಪ್ರಶಸ್ತಿಯನ್ನು ಅಮೆಚೂರ್ ಕಬಡ್ಡಿ ಅಸೋಸಿಷನ್ ಮೂಡಲಗಿ ತಾಲೂಕ ಅಧ್ಯಕ್ಷ ಹಣಮಂತ ಮದಣ್ಣವರ ಅವರಿಗೆ ನೀಡಿ ಗೌರವಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಮಣ್ಯ ಪಂಜು ದೇವಸ್ಥಾನದ ಸಭಾಂಗಣದಲ್ಲಿ ಇತ್ತೀಚೆಗೆ ಸ್ವಾಮಿ ವಿವೇಕಾನಂದ ಜಯಂತಿಯ ಪ್ರಯುಕ್ತ ನಡೆದ ಯುವ ಸಮ್ಮೇಳನ ಮತ್ತು ರಾಜ್ಯ ಯುವ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಹಣಮಂತ ಮದಣ್ಣವರ ಅವರಿಗೆ ಪ್ರಶಸ್ತಿಯನ್ನು ಪುತ್ತೂರು ಶಾಸಕಿ ಭಾಗೀರಥಿ, ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ರಾಜ್ಯಾಧ್ಯಕ್ಷ ಡಾ.ಬಾಲಾಜಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಸುರೇಶ್ ರೈ ಸೂಡಿಮುಳ್ಳು, ಬೆಳಗಾವಿ ಜಿಲ್ಲಾಧ್ಯಾಕ್ಷ ಸಿದ್ದಣ್ಣ ದುರದುಂಡಿ ಅವರು ಪ್ರಶಸ್ತಿ ಪ್ರಧಾನ ಮಾಡಿದರು.

ಕಳೆದ 18 ವರ್ಷಗಳಿಂದ ಗ್ರಾಮೀಣ ಕ್ರೀಡೆ, ಕಬ್ಬಡ್ಡಿ, ವಾಲಿಬಾಲ್, ಥ್ರೋಬಾಲ್ ಹಲವಾರು ಕ್ರೀಡೆಗಳನ್ನು ಏರ್ಪಡಿಸಿ, ಕಲೆ, ಸಾಹಿತ್ಯ, ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ನಿರಂತರ ಯುವ ಸಂಘಟನೆ, ಸಮಾಜ ಸೇವಾ ಕಾರ್ಯವನ್ನು ಪರಿಗಣಿಸಿ ಹನಮಂತ ಮದನ್ನವರ ಗೆ 26 ನೇ ಸಾಲಿನ ರಾಜ್ಯ ಯುವ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ.

ರಾಜ್ಯದ 31 ಜಿಲ್ಲೆಯ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರನ್ನು ಗುರುತಿಸಿ, ಗೌರವಿಸಲಾಗಿದ್ದು ಬೆಳಗಾವಿ ಜಿಲ್ಲೆಯಿಂದ ಅಮೆಚೂರ್ ಕಬಡ್ಡಿ ಅಸೋಸಿಯನ ಮೂಡಲಗಿ ತಾಲೂಕ ಅಧ್ಯಕ್ಷ ಹಣಮಂತ ಮದಣ್ಣವರ ಪ್ರಶಸ್ತಿ ಪಡೆದುಕೊಂಡ ಅವರಿಗೆ ಹಲವಾರು ಸಂಘ ಸಂಸ್ಥೆಗಳು ಅಭಿನಂದಿಸಿವೆ.


Spread the love

About inmudalgi

Check Also

ಬೆಟಗೇರಿ ಗ್ರಾಮದಲ್ಲಿ ಸಂಭ್ರಮದಿಂದ ಎಳ್ಳು ಬೆಲ್ಲ ವಿನಿಮಯ

Spread the love ಬೆಟಗೇರಿ: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ಸಂಕ್ರಾತಿ ಹಬ್ಬದ ಪ್ರಯುಕ್ತ ಪುರ ಜನರಿಂದ ಎಳ್ಳು ಬೆಲ್ಲ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ