Breaking News
Home / ಬೆಳಗಾವಿ / ನಾಗನೂರು ಅರ್ಬನ್ ಕ್ರೆಡಿಟ್ ಸೌಹಾರ್ದ ಸಹಕಾರಿ ಉದ್ಘಾಟನೆಗೆ ಸಜ್ಜಾಗಿರುವ ಶಾಖೆಯ ನೂತನ ಕಟ್ಟಡ

ನಾಗನೂರು ಅರ್ಬನ್ ಕ್ರೆಡಿಟ್ ಸೌಹಾರ್ದ ಸಹಕಾರಿ ಉದ್ಘಾಟನೆಗೆ ಸಜ್ಜಾಗಿರುವ ಶಾಖೆಯ ನೂತನ ಕಟ್ಟಡ

Spread the love

ಬೆಟಗೇರಿ:ಸೆ.5ರಂದು ನಾಗನೂರು ಅರ್ಬನ್ ಕ್ರೆಡಿಟ್ ಸೌಹಾರ್ದ ಸಹಕಾರಿ ನೂತನ ಶಾಖಾ ಕಟ್ಟಡ ಉದ್ಘಾಟನೆ
ಬೆಟಗೇರಿ:ನಾಗನೂರು ಅರ್ಬನ್ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಗೋಕಾಕತಾಲೂಕಿನ ಬೆಟಗೇರಿ ಶಾಖೆಯ ನೂತನ ಶಾಖಾ ಕಟ್ಟಡದ ಉದ್ಘಾಟನಾ ಸಮಾರಂಭ ಇದೇ ಶನಿವಾರ ಸೆ.5ರಂದು ಮುಂಜಾನೆ 9 ಗಂಟೆಗೆ ಶ್ರೀಲಕ್ಷ್ಮೀ ಮತ್ತು ಸರಸ್ವತಿ ದೇವಿ ಮಹಾಪೂಜೆಯೊಂದಿಗೆ ನಡೆಯಲಿದೆ. ಗೋಕಾಕ ಶೂನ್ಯ ಸಂಪಾದನಾ ಮಠದ ಡಾ.ಮುರುಘರಾಜೇಂದ್ರ ಮಹಾಸ್ವಾಮಿಜಿ, ಸುಣಧೋಳಿ ಶ್ರೀ ಜಡಿಸಿದ್ಧೇಶ್ವರ ಮಠದ ಅಭಿನವ ಶಿವಾನಂದ ಮಹಾಸ್ವಾಮಿಜಿ ದಿವ್ಯಸಾನಿಧ್ಯ, ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ, ಬೆಂಗಳೂರು ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿರ್ದೇಶಕ ಜಗದೀಶ ಕವಟಗಿಮಠ, ಮಾಜಿ ಸಚಿವ ಆರ್.ಎಮ್.ಪಾಟೀಲ ಜ್ಯೋತಿಬೆಳಗಿಸುವವರು ಹಾಗೂ ಉದ್ಘಾಟನೆ ನೆರವೇರಿಸಲಿದ್ದಾರೆ.
ನಾಗನೂರು ಅರ್ಬನ್ ಕ್ರೆಡಿಟ್ ಸೌಹಾರ್ದ ಸಹಕಾರಿ ಆಡಳಿತ ಮಂಡಳಿ ಅಧ್ಯಕ್ಷ ಬಸವರಾಜ ತಡಸನವರ ಅಧ್ಯಕ್ಷತೆ ವಹಿಸಲಿದ್ದಾರೆ.
ಬೆಳಗಾವಿ ಪ್ರಾಂತದ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಪ್ರಾಂತೀಯ ವ್ಯವಸ್ಥಾಪಕ ಬಸವರಾಜ ಹೊಂಗಲ, ಗೋಕಾಕ ಸನ್ನದು ಲೆಕ್ಕ ಪರಿಶೋಧಕ ಹಾಗೂ ತೆರಿಗೆ ಸಲಹೆಗಾರ ಸೈದಪ್ಪ ಗದಾಡಿ, ಬೆಟಗೇರಿ ಗ್ರಾಪಂ ಮಾಜಿ ಅಧ್ಯಕ್ಷ ಬಸವಂತ ಕೋಣಿ, ಸ್ಥಳೀಯ ಶಾಖಾ ಸಲಹಾ ಸಮಿತಿ ಅಧ್ಯಕ್ಷ ಮಲ್ಲಪ್ಪ ಕಂಬಿ, ನಾಗನೂರು ಪ್ರಧಾನ ಕಛೇರಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಾಶ ಅಂಗಡಿ ಮುಖ್ಯಅತಿಥಿಗಳಾಗಿ ಆಗಮಿಸಲಿದ್ದಾರೆ.
ಪ್ರಧಾನ ಕಛೇರಿಯ ಆಡಳಿತ ಮಂಡಳಿ ಉಪಾಧ್ಯಕ್ಷರು, ಸದಸ್ಯರು, ಸ್ಥಳೀಯ ಮತ್ತು ವಿವಿಧ ಗ್ರಾಮ, ಪಟ್ಟಣ, ನಗರದ ಶಾಖೆಗಳ ಸಲಹಾ ಸಮಿತಿ ಅಧ್ಯಕ್ಷರು, ಶಾಖಾ ವ್ಯವಸ್ಥಾಪಕರು, ಸದಸ್ಯರು, ಸಿಬ್ಬಂದಿ, ಸಹಕಾರಿ ಧುರೀಣರು, ಸ್ಥಳೀಯ ಹಾಗೂ ಸುತ್ತಲಿನ ಹಳ್ಳಿಗಳ ಹರ, ಗುರು, ಚರಮೂರ್ತಿಗಳು ಹಾಗೂ ವಿವಿಧ ಸಂಘ, ಸಂಸ್ಥೆಗಳ ಪದಾಧಿಕಾರಿಗಳು, ಸದಸ್ಯರು ಮತ್ತೀತರರು ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.


Spread the love

About inmudalgi

Check Also

Spread the love  Spread the love

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ