Breaking News
Home / ತಾಲ್ಲೂಕು / ನಾಳೆಯಿಂದ ಬೆಳಗಾವಿ ಸೇರಿದಂತೆ 9 ಜಿಲ್ಲೆಗಳು ಲಾಕ್ ಡೌನ್; ನಾಳೆಯೂ ಬಸ್ ಸಂಚಾರ ಇಲ್ಲ

ನಾಳೆಯಿಂದ ಬೆಳಗಾವಿ ಸೇರಿದಂತೆ 9 ಜಿಲ್ಲೆಗಳು ಲಾಕ್ ಡೌನ್; ನಾಳೆಯೂ ಬಸ್ ಸಂಚಾರ ಇಲ್ಲ

Spread the love

ನಾಳೆಯಿಂದ ಬೆಳಗಾವಿ ಸೇರಿದಂತೆ 9 ಜಿಲ್ಲೆಗಳು ಲಾಕ್ ಡೌನ್; ನಾಳೆಯೂ ಬಸ್ ಸಂಚಾರ ಇಲ್ಲ

ಬೆಂಗಳೂರು: ದೇಶಾದ್ಯಂತ ಮಹಾಮಾರಿ ಕೊರೊನಾ ವೈರಸ್ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಕೇಂದ್ರ ಸರ್ಕಾರ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ.
ಈ ನಡುವೆ ರಾಜ್ಯದಲ್ಲೂ ದಿನದಿಂದ ದಿನಕ್ಕೆ ಸೋಂಕು ಹೆಚ್ಚುತ್ತಿರುವುದರಿಂದ ಕೇಂದ್ರದ ಸೂಚನೆ ಮೇರೆ ಕರ್ನಾಟಕದ 9 ಜಿಲ್ಲೆಗಳು ಮಾರ್ಚ್ 31ರವರೆಗೆ ಸಂಪೂರ್ಣ ಲಾಕ್ ಡೌನ್ ಆಗಲಿವೆ.
ರಾಜ್ಯಾದ್ಯಂತ ಕೊರೊನಾ ವೈರಸ್ ಭೀತಿ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ನಾಳೆಯಿಂದ ಮಾರ್ಚ್ 31ರವರೆಗೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮೈಸೂರು, ಕೊಡಗು, ಮಂಗಳೂರು, ಧಾರವಾಡ, ಕಲಬುರಗಿ ಹಾಗೂ ಚಿಕ್ಕಬಳ್ಳಾಪುರ, ಬೆಳಗಾವಿ ಜಿಲ್ಲೆಗಳು ಕೋವಿಡ್ 19 ಪ್ರಕರಣ ಕಂಡು ಬಂದ ಜಿಲ್ಲೆಗಳು ಸಂಪೂರ್ಣ ಬಂದ್ ಮಾಡುವಂತೆ ಸರ್ಕಾರ ಸೂಚನೆ ನೀಡಿದೆ.
ಈ ನಡುವೆ ಬೆಂಗಳೂರಿನಲ್ಲಿ ಇಂದು ರಾತ್ರಿ 9 ಗಂಟೆಯಿಂದ ನಿಷೇದಾಜ್ನೆ ಜಾರಿಗೊಳಿಸುವುದಾಗಿ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಮಾಹಿತಿ ನೀಡಿದ್ದಾರೆ. ಮಾರ್ಚ್ 31ರ ವರೆಗೆ ಮೆಟ್ರೋ ನಿಲ್ದಾಣ ಕೂಡ ಸಂಪೂರ್ಣ ಲಾಕ್ ಡೌನ್ ಆಗಲಿದ್ದು, ಸಾರಿಗೆ ಸಂಚಾರ, ಬಸ್, ಕ್ಯಾಬ್, ರೈಲು ಸೇವೆ, ಪಬ್, ಬಾರ್, ರೆಸ್ಟೋರೆಂಟ್ ಸಂಪೂರ್ಣ ಸ್ಥಗಿತಗೊಳ್ಳಲಿದೆ.
9 ಜಿಲ್ಲೆಗಳ ಜನತೆ ಯಾವುದೇ ರೀತಿ ಆತಂಕ, ಗಾಬರಿಗಳಿಗೆ ಒಳಗಾಗುವ ಅಗತ್ಯವಿಲ್ಲ. ನಾಳೆಯಿಂದ ಹೂವು, ಹಣ್ಣು, ತರಕಾರಿ, ದಿನಸಿ, ಆಂಬುಲೆನ್ಸ್, ಇಂದನ ಸೇವೆ, ಮೆಡಿಕಲ್ ಶಾಪ್, ಆಸ್ಪತ್ರೆ ಸೇರಿದಂತೆ ಅಗತ್ಯವಸ್ತುಗಳು ಮಾತ್ರ ಸಿಗಲಿದೆ.
ರಾಜ್ಯಾದ್ಯಂತ ಸೋಮವಾರವೂ ಸಾರಿಗೆ ವ್ಯವಸ್ಥೆ ಸಂಪೂರ್ಣ ಸ್ಥಗಿತವಾಗಲಿದೆ. ಮಾ.31ರ ವರೆಗೆ ರಾಜ್ಯಾದ್ಯಂತ ಎಸಿ ಬಸ್ ಗಳು ಬಂದ್ ಆಗಲಿವೆ. ಲಾಕ್ ಡೌನ್ ಆಗಲಿರುವ 9 ಜಿಲ್ಲೆಗಳಲ್ಲಿ ಅಂತರ್ ಜಿಲ್ಲಾ ಸಾರಿಗೆ ಮಾ.31ರ ವರೆಗೂ ಇರುವುದಿಲ್ಲ.
ಗೃಹ ಸಚಿವ ಬಸವರಾಜ ಬೊಮ್ಮಾಯಿ ಸುದ್ದಿಗಾರರಿಗೆ ಈ ಮಾಹಿತಿ ನೀಡಿದ್ದಾರೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮೀಣ, ಮಂಗಳೂರು, ಮೈಸೂರು, ಕಲಬುರ್ಗಿ, ಚಿಕ್ಕಮಗಳೂರು, ಬೆಳಗಾವಿ, ಧಾರವಾಡ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಮಾ.31ರ ವರೆಗೂ ಅಗತ್ಯ ಸೇವೆಗಳು ಮಾತ್ರ ಇರಲಿವೆ. ಇತರ ಯಾವುದೇ ವಾಣಿಜ್ಯ ಚಟುವಟಿಕೆಗಳು ಇರುವುದಿಲ್ಲ.
ದೊಡ್ಡ ಕೈಗಾರಿಕೆಗಳಲ್ಲಿ ದಿನಬಿಟ್ಟು ದಿನ ಶೇ.50ರಷ್ಟು ಕಾರ್ಮಿಕರನ್ನು ಬಳಸಿಕೊಳ್ಳಲು ಅವಕಾಶ ನೀಡಲಾಗಿದೆ.


Spread the love

About inmudalgi

Check Also

ತಂದೆ ತಾಯಿ ಮತ್ತು ಗುರು ಭಕ್ತಿ ವಿದ್ಯಾರ್ಥಿಗಳನ್ನು ಸನ್ಮಾರ್ಗಕ್ಕೆ ಕರೆದುಕೊಂದು ಹೋಗುತ್ತದೆ. ಮುಖ್ಯೋಪಾದ್ಯಾಯ — ಚಂದ್ರಕಾಂತ ಬಿ. ಪೂಜೇರಿ

Spread the loveಮೂಡಲಗಿ : ತಂದೆ ತಾಯಿ ಮತ್ತು ಗುರು ಭಕ್ತಿ ವಿದ್ಯಾರ್ಥಿಗಳನ್ನು ಸನ್ಮಾರ್ಗಕ್ಕೆ ಕರೆದುಕೊಂದು ಹೋಗುತ್ತದೆ ವಿದ್ಯಾರ್ಥಿಗಳು ತಂದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ