ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 7 ಹೆಚ್ಚಾಗಿದ್ದು, 425ಕ್ಕೇರಿದೆ. ಇದೀಗ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ವರದಿ ಪ್ರಕಾರ ಕಲಬುರ್ಗಿಯಲ್ಲಿ 5 ಮತ್ತು ಬೆಂಗಳೂರಿನಲ್ಲಿ ಇಬ್ಬರಿಗೆ ಸೋಂಕು ದೃಢಪಟ್ಟಿದೆ. ಬೆಳಗಾವಿ ಸೇರಿದಂತೆ ರಾಜ್ಯದ ಬೇರೆ ಯಾವುದೇ ಭಾಗದಲ್ಲಿ ಇಂದು ಸೋಂಕು ಪತ್ತೆಯಾಗಿಲ್ಲ. ಕಲಬುರ್ಗಿಯಲ್ಲಿ 4 ತಿಂಗಳ ಗಂಡು ಮಗುವಿಗೂ ಸೋಂಕು ಪತ್ತೆಯಾಗಿದೆ.