ಮೂಡಲಗಿ: ಲಾಕ್‍ಡೌನ್‍ದಂತಹ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದ್ದರಿಂದ ಅವರ ನೆರವಿಗೆ ಧಾವಿಸಿ ದಿನಬಳಕೆಯ ಅಗತ್ಯ ವಸ್ತುಗಳನ್ನು ಅವರವರ ಮನೆ ಬಾಗಿಲಿಗೆ ತಲುಪಿಸುತ್ತಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕ್ಷೇತ್ರದ ಜನತೆಯ ಅನ್ನದಾತರಾಗಿದ್ದಾರೆಂದು ಯಾದವಾಡ ಜಿ.ಪಂ ಸದಸ್ಯ ಗೋವಿಂದ ಕೊಪ್ಪದ ಹೇಳಿದರು.
ಸೋಮವಾರದಂದು ತಾಲೂಕಿನ ಕುಲಗೋಡ ಗ್ರಾಮದಲ್ಲಿ ಕೊರೋನಾ ಹಿನ್ನೆಲೆಯಲ್ಲಿ ಬಾಲಚಂದ್ರ ಜಾರಕಿಹೊಳಿ ಅವರು ಕೊಡಮಾಡಿರುವ ಆಹಾರ ಧಾನ್ಯಗಳ ಕಿಟ್‍ಗಳನ್ನು ವಿತರಿಸಿ ಮಾತನಾಡಿದರು.
ಬಾಲಚಂದ್ರ ಜಾರಕಿಹೊಳಿ ಅವರು ಜನರ ಜೊತೆ ಅವಿನಾಭಾವ ಸಂಬಂಧ ಹೊಂದಿದವರು. ಎಲ್ಲ ಸಮುದಾಯದ ಜನರನ್ನು ತಮ್ಮ ಕುಟುಂಬದ ಸದಸ್ಯರಂತೆ ಭಾವಿಸಿಕೊಂಡು ಅವರ ಕಷ್ಟಗಳಿಗೆ ಸ್ಪಂದಿಸುವ ಕರುಣಾಮಯಿಯಾಗಿದ್ದಾರೆ. ಲಾಕ್‍ಡೌನ್ ಇನ್ನೂ ಮುಂದುವರೆದಿದ್ದರಿಂದ ಜನರು ಜೀವನ ಸಾಗಿಸುವುದಕ್ಕೆ ತೊಂದರೆಯಾಗಿದೆ. ಅದರಲ್ಲಂತೂ ಅಗತ್ಯವಿರುವ ದಿನಸಿ ವಸ್ತುಗಳು ಸಿಗುವುದು ಕಠಿಣವಾಗಿದೆ. ಕೂಲಿ ಕಾರ್ಮಿಕರು, ನಿರ್ಗತಿಕರ ಪರಿಸ್ಥಿತಿ ಹೇಳತೀರದಾಗಿದೆ ಇಂಥ ಸಂದರ್ಭದಲ್ಲಿ ಬಾಲಚಂದ್ರ ಜಾರಕಿಹೊಳಿ ಅವರು ಕ್ಷೇತ್ರದ ಎಲ್ಲ ಕುಟುಂಬಗಳಿಗೆ ವ್ಯಯಕ್ತಿವಾಗಿ ಆಹಾರ ಕಿಟ್‍ಗಳನ್ನು ನೀಡುವ ಮೂಲಕ ಮಾನವೀಯತೆಗೆ ಸಾಕ್ಷಿಯಾಗಿದ್ದಾರೆ. ನಗರ ಪ್ರದೇಶದಲ್ಲಿರುವ ನಿರಾಶ್ರಿತರಿಗೆ, ಬಡವರಿಗೆ ಹಾಗೂ ಕೊಳಗೇರಿಗಳಿಗೆ ನಂದಿನಿ ಹಾಲು ಪ್ರತಿದಿನ ಉಚಿತವಾಗಿ ನೀಡುತ್ತಿರುವುದು ಅವರ ಬಡವರ ಬಗ್ಗೆ ಇರುವ ಕಾಳಜಿಯನ್ನು ಎತ್ತಿ ತೋರಿಸುತ್ತದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಗೋಕಾಕ ಟಿಎಪಿಸಿಎಮ್‍ಎಸ್ ಅಧ್ಯಕ್ಷ ಅಶೋಕ ನಾಯಿಕ, ಮುಖಂಡರಾದ ಬಸನಗೌಡ ಪಾಟೀಲ, ಸುಭಾಶ ವಂಟಗೋಡಿ, ನೂಡಲ್ ಅಧಿಕಾರಿ ಮಲ್ಲಿಕಾರ್ಜುನ ಜನ್ಮಟ್ಟಿ, ನೀರಾವರಿ ಇಲಾಖೆಯ ಎಇಇ ಮೂಡಲಗಿ, ಟೀಂ ಎನ್‍ಎಸ್‍ಎಫ್‍ನ ಲಕ್ಕಪ್ಪ ಲೋಕುರಿ, ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಗ್ರಾ.ಪಂ ಸದಸ್ಯರು ಉಪಸ್ಥಿತರಿದ್ದರು.
Home / ತಾಲ್ಲೂಕು / ತಾಲೂಕಿನ ಕುಲಗೋಡ ಗ್ರಾಮದಲ್ಲಿ ಕೊರೋನಾ ಹಿನ್ನೆಲೆಯಲ್ಲಿ ಬಾಲಚಂದ್ರ ಜಾರಕಿಹೊಳಿ ಅವರು ಕೊಡಮಾಡಿರುವ ಆಹಾರ ಧಾನ್ಯಗಳ ಕಿಟ್‍ಗಳನ್ನು ಯಾದವಾಡ ಜಿ.ಪಂ ಸದಸ್ಯ ಗೋವಿಂದ ಕೊಪ್ಪದ ವಿತರಿಸುತ್ತಿರುವುದು.
Check Also
‘ಮೂಡಲಗಿಯಲ್ಲಿ ನ.23-24 ರಂದು 16ನೇ ಜಿಲ್ಲಾ ಸಾಹಿತ್ಯ ಸಮ್ಮೇಳನ’
Spread the love‘ಮೂಡಲಗಿಯಲ್ಲಿ ನ.23-24 ರಂದು 16ನೇ ಜಿಲ್ಲಾ ಸಾಹಿತ್ಯ ಸಮ್ಮೇಳನ’ ಜನಮನ ಸೇಳೆದ ಕನ್ನಡ ಬುತ್ತಿ ಜಾತ್ರೆ ಕಾರ್ಯಕ್ರಮ …