ರಾಜ್ಯದಲ್ಲಿ ಮಹಾಮಾರಿ ಕೊರೊನಾ ಸೋಂಕಿತರ ಸಂಖ್ಯೆ ಅಪಾಯಕಾರಿಯಾಗಿ ಹೆಚ್ಚುತ್ತಿದ್ದು, ಇಂದು ಒಂದೇ ದಿನ 63 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 925ಕ್ಕೆ ಏರಿಕೆಯಾಗಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ ಬಾಗಲಕೋಟೆ 15,ದಾವಣಗೆರೆಯಲ್ಲಿ 12, ಧಾರವಾಡ 9, ಬೀದರ್ 2, ಕೋಲಾರ 5, ಗದಗ 3, ಹಾಸನ 5, ಬೆಂಗಳೂರು 4, ಕಲಬುರಗಿ 1, ಯಾದಗಿರಿ , ದಕ್ಷಿಣ ಕನ್ನಡ, ಚಿಕ್ಕಬಳ್ಳಾಪುರದಲ್ಲಿ ತಲಾ ಒಂದು ಕೇಸ್ ಪತ್ತೆಯಾಗಿದೆ.