ನಾಲ್ಕನೇ ಹಂತದ ಲಾಕ್ ಡೌನ್ ಅವಧಿ ಮುಗಿಯುತ್ತಿದ್ದರೂ ದೇಶಾದ್ಯಂತ ಕೊರೊನಾ ಸೋಂಕು ನಿಯಂತ್ರಣಕ್ಕೆ ಬಾರದ ಹಿನ್ನಲೆಯಲ್ಲಿ ಮತ್ತೆ ಲಾಕ್ ಡೌ ಅವಧಿಯನ್ನು ವಿಸ್ತರಿಸಿ ಕೇಂದ್ರ ಗೃಹ ಸಚಿವಾಲಯ ಆದೇಶ ಹೊರಡಿಸಿದೆ.
ಲಾಕ್ ಡೌನ್ 4.0 ನಾಳೆ ಮುಗಿಯಲಿದ್ದು, ಜೂನ್ 1 ರಿಂದ ಲಾಕ್ ಡೌನ್ 5.0 ಜಾರಿಗೆ ಬರಲಿದೆ. ಮುಂದಿನ ಒಂದು ತಿಂಗಳ ಕಾಲ ಅಂದರೆ ಜೂನ್ 30ರವರೆಗೆ ಲಾಕ್ ಡೌನ್ ಮತ್ತೆ ವಿಸ್ತರಣೆ ಮಾಡಲಾಗಿದೆ.
ಕಂಟೇನ್ಮೆಂಟ್ ಝೋನ್ ಗಳನ್ನು ಹೊರತುಪಡಿಸಿ ಜೂನ್ 8ರಿಂದ ಧಾರ್ಮಿಕ ಸ್ಥಳಗಳು, ಮಾಲ್, ಹೋಟೆಲ್, ರೆಸ್ಟೋರೆಂಟ್ ಗಳು ಓಪನ್ ಮಾಡಲು ಅವಕಾಶ ನೀಡಲಾಗಿದೆ. ಇನ್ನು ಶಾಲಾ-ಕಾಲೇಜು ಪುನರಾರಂಭದ ಬಗ್ಗೆ ಕೇಂದ್ರ ಸರ್ಕಾರ ಆಯಾ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಚರ್ಚೆ ನಡೆಸಿದೆ.
ಜೂನ್ 30ರವರೆಗೂ ರಾತ್ರಿ 9 ಗಂಟೆಯಿಂದ ಬೆಳಿಗ್ಗೆ 5 ಗಂಟೆವರೆಗೆ ಕರ್ಫ್ಯೂ ಜಾರಿಗೊಳಿಸಲಾಗಿದೆ. ಇನ್ನು ಅಂತರಾಜ್ಯ ಹಾಗೂ ಅಂತರ್ ಜಿಲ್ಲಾ ಪ್ರಯಾಣಕ್ಕೆ ಅನುಮತಿ ಪಡೆದುಕೊಳ್ಳುವ ಅಗತ್ಯವಿಲ್ಲ
IN MUDALGI Latest Kannada News