ನಾಳೆ ಬೆಳ್ಳಿಹಬ್ಬದ ಸವಿನೆನಪಿಗಾಗಿ ಶ್ರೀ ಜಗಜ್ಯೋತಿ ಬಸವೇಶ್ವರ ಪುತ್ಥಳಿ ಅನಾವರಣ ಕಾರ್ಯಕ್ರಮ
ಮೂಡಲಗಿ : ಗ್ರಾಮೀಣ ಮಟ್ಟದಲ್ಲಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ ಸ್ಥಳೀಯ ಸೊಸೈಟಿಯೂ ಗ್ರಾಮೀಣ ಭಾಗದಲ್ಲಿ 25ನೇ ವರ್ಷದ ಪಾದಾರ್ಪಣೆ ಮಾಡುವ ಮೂಲಕ ಅಮೋಘ ಸಾಧನೆಗೈದು ಎಲ್ಲರ ಗಮನ ಸೆಳೆದಿದೆ.
ಸಮೀಪದ ಹಳ್ಳೂರ ಗ್ರಾಮದ ಶ್ರೀ ಬಸವೇಶ್ವರ ಕೋ-ಆಪ್ ಕ್ರೆಡಿಟ್ ಸೊಸೈಟಿ ಲಿ, ಬೆಳ್ಳಿಹಬ್ಬದ ಸವಿನೆನಪಿಗಾಗಿ ಗ್ರಾಮದಲ್ಲಿ ನಿರ್ಮಿಸಿದ ಶ್ರೀ ಜಗಜ್ಯೋತಿ ಬಸವೇಶ್ವರ ಪುತ್ಥಳಿ ಅನಾವರಣ ಕಾರ್ಯಕ್ರಮವನ್ನು ನಾಳೆ ಮುಂಜಾನೆ 9:00 ಗಂಟೆಗೆ ನೆರವೇರುವುದು.
ಈ ಕಾರ್ಯಕ್ರಮದಲ್ಲಿ ದಿವ್ಯಸಾನಿಧ್ಯ ಶ್ರೀ ಶ್ರೀ ಅಡಿವಿಸಿದ್ದೇಶ್ವರ ಮಹಾಸ್ವಾಮಿಗಳು, ಶ್ರೀ ಶ್ರೀ ಗುರುಸಿದ್ಧ ಮಹಾಸ್ವಾಮಿಗಳು ಹಾಗೂ ಆಡಳಿತ ಮಂಡಳಿ ಸಿಬ್ಬಂದಿ ವರ್ಗ ಮತ್ತು ಗ್ರಾಮದ ಹಿರಿಯರು ಪಾಲ್ಗೊಳ್ಳುವರು ಎಂದು ಸೊಸೈಟಿಯ ಮುಖ್ಯಕಾರ್ಯನಿರ್ವಾಹಕ ಕೆಂಪಣ್ಣ ಹುಬ್ಬಳ್ಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
IN MUDALGI Latest Kannada News