Breaking News
Home / Recent Posts / ಮರೆಯಾದ ಸಂಗೀತದ ಮೇರುಪರ್ವತ ಎಸ್‍ಪಿಬಿ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಶೋಕ

ಮರೆಯಾದ ಸಂಗೀತದ ಮೇರುಪರ್ವತ ಎಸ್‍ಪಿಬಿ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಶೋಕ

Spread the love

ಮರೆಯಾದ ಸಂಗೀತದ ಮೇರುಪರ್ವತ ಎಸ್‍ಪಿಬಿ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಶೋಕ
ಗೋಕಾಕ : ಭಾರತ ಕಂಡ ಸಂಗೀತ ಸಾರ್ವಭೌಮ, ಗಾನ ಗಾರುಡಿಗ, ಹಿನ್ನೆಲೆ ಗಾಯಕ, ಪದ್ಮಭೂಷಣ ಡಾ.ಎಸ್.ಪಿ. ಬಾಲಸುಬ್ರಮಣ್ಯಂ(74) ಅವರ ಅಗಲಿಕೆಗೆ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.
ಭಾರತೀಯ ಚಿತ್ರರಂಗದ ಇತಿಹಾಸದಲ್ಲಿಯೇ ಸಂಗೀತ ಕ್ಷೇತ್ರದಲ್ಲಿ ಡಾ. ಎಸ್.ಪಿ.ಬಾಲಸುಬ್ರಮಣ್ಯಂ ಅವರು ಅನನ್ಯ ಕೊಡುಗೆ ನೀಡಿದ್ದಾರೆ. ಕಳೆದ 50 ವರ್ಷಗಳಿಂದ ದೇಶದ ವಿವಿಧ ಭಾಷೆಗಳಲ್ಲಿ ಸುಮಾರು 45 ಸಾವಿರಕ್ಕೂ ಅಧಿಕ ಹಾಡುಗಳನ್ನು ಹಾಡುವ ಮೂಲಕ ಹೊಸ ಭಾಷ್ಯೆ ಬರೆದಿದ್ದಾರೆ. ಸಂಗೀತ ಲೋಕದ ದಂತಕತೆಯಾಗಿದ್ದ ಎಸ್.ಪಿ.ಬಿ ನಿಧನದಿಂದ ಭಾರತೀಯ ಚಿತ್ರರಂಗ ಹಾಗೂ ರಾಷ್ಟ್ರಕ್ಕೆ ಅಪಾರ ಹಾನಿಯಾಗಿದೆ. ಅವರ ಆತ್ಮಕ್ಕೆ ಪರಮಾತ್ಮನು ಚಿರಶಾಂತಿ ನೀಡಲಿ. ಅವರ ಕುಟುಂಬ ವರ್ಗಕ್ಕೆ ದುಃಖ ಸಹಿಸುವ ಶಕ್ತಿ ಪರಮಾತ್ಮನು ಕರುಣಿಸಲಿ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸಂತಾಪ ಸೂಚಕದಲ್ಲಿ ತಿಳಿಸಿದ್ದಾರೆ.


Spread the love

About inmudalgi

Check Also

ಮಾರುತಿ ಕೋಳಿ ಅವರಿಗೆ ರಾಷ್ಟ್ರೀಯ ಪರಶುರಾಮ ಪ್ರಶಸ್ತಿ ಪ್ರಧಾನ

Spread the love ಮಾರುತಿ ಕೋಳಿ ಅವರಿಗೆ ರಾಷ್ಟ್ರೀಯ ಪರಶುರಾಮ ಪ್ರಶಸ್ತಿ ಪ್ರಧಾನ ಮೂಡಲಗಿ: ಕೆರಳಾದ ಶ್ರೀ ಶಟ್ ಶಾಸ್ತ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ