Breaking News
Home / Recent Posts / ಅರಭಾವಿ ಪಟ್ಟಣದ ಏಳ್ಗೆಗಾಗಿ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಶ್ರಮಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ಅರಭಾವಿ ಪಟ್ಟಣದ ಏಳ್ಗೆಗಾಗಿ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಶ್ರಮಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ

Spread the love

ಅರಭಾವಿ ಪಟ್ಟಣದ ಏಳ್ಗೆಗಾಗಿ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಶ್ರಮಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ
ಸನ್ಮಾನ ಸ್ವೀಕರಿಸಿ ಬೆಳಗಾವಿಯಲ್ಲಿ ಮಾತನಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಟ್ಟಣದ ಏಳ್ಗೆಗಾಗಿ ಶ್ರಮಿಸಿ ಮಾದರಿ ಪಟ್ಟಣವನ್ನಾಗಿ ಪರಿವರ್ತಿಸುವಂತೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸಲಹೆ ಮಾಡಿದರು.
ಸಮೀಪದ ಅರಭಾವಿ ಪಟ್ಟಣ ಪಂಚಾಯತಿ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರು ನೀಡಿದ ಸನ್ಮಾನವನ್ನು ಸ್ವೀಕರಿಸಿ ಬೆಳಗಾವಿಯಲ್ಲಿ ಮಾತನಾಡಿದ ಅವರು, ಎಲ್ಲರ ಸಹಕಾರದಿಂದ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಹುದ್ದೆಗಳಿಗೆ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಹೇಳಿದರು.
ಅರಭಾವಿ ಪಟ್ಟಣದ ಪ್ರಗತಿಗಾಗಿ ಸರ್ಕಾರದಿಂದ ಇನ್ನೂ ಹೆಚ್ಚಿನ ಅನುದಾನ ತರಲಾಗುವುದು. ಸಾರ್ವಜನಿಕ ಸಮಸ್ಯೆಗಳಿಗೆ ತ್ವರಿತಗತಿಯಲ್ಲಿ ಸ್ಪಂದಿಸಲಾಗುವುದು. ಅಭಿವೃದ್ಧಿ ಕಾರ್ಯಗಳಲ್ಲಿ ಎಂದಿಗೂ ತಾರತಮ್ಯ ಮಾಡಬೇಡಿ. ಎಲ್ಲ ಸಮಾಜಗಳನ್ನು ಒಗ್ಗೂಡಿಸಿಕೊಂಡು ಪ್ರಗತಿಪರ ಕಾರ್ಯಗಳನ್ನು ಕೈಗೊಳ್ಳುವಂತೆ ಅವರು ಹೇಳಿದರು.
ಶಾಸಕ ಬಾಲಚಂದ್ರ ಜಾರಕಿಹೊಳಿ ಅವರನ್ನು ಪಟ್ಟಣ ಪಂಚಾಯತ ಅಧ್ಯಕ್ಷ ಲಕ್ಷ್ಮಣ ನಿಂಗನ್ನವರ ಮತ್ತು ಉಪಾಧ್ಯಕ್ಷೆ ಸುಶೀಲಾ ಸಗರೆ ಅವರು ಸತ್ಕರಿಸಿ ಅಭಿನಂದನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮುಖಂಡ ಮುತ್ತೆಪ್ಪ ಝಲ್ಲಿ, ಹಿಡಕಲ್ ಡ್ಯಾಂ ಘಯೋಮನೀಬ ಮಹಾಮಂಡಳಿ ಅಧ್ಯಕ್ಷ ಅಶೋಕ ಖಂಡ್ರಟ್ಟಿ, ಪಪಂ ಸದಸ್ಯರಾದ ಪದ್ಮಾವತಿ ದೇವುಗೋಳ, ಮಹಾಂತೇಶ ನೇಮಗೌಡ್ರ, ಮೈಬೂಬ ಮುಲ್ಲಾ, ಬಸಪ್ಪ ಹನಮಸಾಗರ, ಶೋಭಾ ಬಸವರಾಜ ಆಲೋಶಿ, ಸುಶೀಲಾ ಕೆಂಚಪ್ಪ ಸಂಪಗಾಂವಿ, ವಿಠ್ಠಲ ಸಂತುಗೋಳ, ರವಿ ಹುಕ್ಕಿ, ಪ್ರಮುಖರಾದ ಯಲ್ಲಪ್ಪ ಸತ್ತಿಗೇರಿ, ಮೋಹನ ಬಂಡಿವಡ್ಡರ, ಬಾಳೇಶ ಜಾಧವ, ಸತ್ತೆಪ್ಪ ಬಡಾಯಿ, ರಿಯಾಜ ಯಾದವಾಡ, ಬಸವರಾಜ ಕಡಿಮನಿ, ಪರಸಪ್ಪ ಸಣ್ಣಾಪಣಿ, ಇಕ್ಬಾಲ್ ಸರ್ಕಾವಸ, ಮುಂತಾದವರು ಉಪಸ್ಥಿತರಿದ್ದರು.


Spread the love

About inmudalgi

Check Also

ಮಾರುತಿ ಕೋಳಿ ಅವರಿಗೆ ರಾಷ್ಟ್ರೀಯ ಪರಶುರಾಮ ಪ್ರಶಸ್ತಿ ಪ್ರಧಾನ

Spread the love ಮಾರುತಿ ಕೋಳಿ ಅವರಿಗೆ ರಾಷ್ಟ್ರೀಯ ಪರಶುರಾಮ ಪ್ರಶಸ್ತಿ ಪ್ರಧಾನ ಮೂಡಲಗಿ: ಕೆರಳಾದ ಶ್ರೀ ಶಟ್ ಶಾಸ್ತ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ