Breaking News

Spread the love

ಮಹಾದೇವ ಪೋತರಾಜಗೆ ಪಿಎಚ್.ಡಿ. ಪದವಿ ಪ್ರಕಟ

ಮೂಡಲಗಿ: ತಾಲ್ಲೂಕಿನ ಖಾನಟ್ಟಿ ಗ್ರಾಮದ ಮಹಾದೇವ ಪೋತರಾಜ ಅವರು ‘ಗೋಕಾವಿ ನಾಡಿನ ಜನಪದ ಕಲಾವಿದರು’ ವಿಷಯದಲ್ಲಿ ಬೆಳಗಾವಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯಕ್ಕೆ ಮಂಡಿಸಿದ ಮಹಾಪ್ರಬಂಧವನ್ನು ಪರಿಗಣಿಸಿ ಪಿಎಚ್.ಡಿ. ಪದವಿಯನ್ನು ಪ್ರಕಟಿಸಿದೆ.
ಬೆಳಗಾವಿ ರಾಣಿ ಚನ್ನಮ್ಮ ವಿವಿಯ ಶಾಸ್ತ್ರೀಯ ಕನ್ನಡ ಭಾಷಾ ಅಧ್ಯಯನ ಸಂಸ್ಥೆಯ ಪ್ರಾಧ್ಯಾಪಕ ಡಾ. ಮಹೇಶ ಗಾಜಪ್ಪನವರ ಅವರು ಸಂಶೋಧನೆಗೆ ಮಾರ್ಗದರ್ಶನ ನೀಡಿದ್ದರು.
ಇದೇ ನ. 26ರಂದು ರಾಣಿ ಚನ್ನಮ್ಮ ವಿವಿಯ ಮೌಲ್ಯಮಾಪನ ಕುಲಸಚಿವರು ಪಿಎಚ್.ಡಿ. ಪ್ರಕಟಣೆಯ ಅಧಿಸೂಚನೆಯನ್ನು ಹೊರಡಿಸಿದ್ದಾರೆ.
ಮೂಡಲಗಿಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಬಿ.ಎ. ಪದವಿ ಮುಗಿಸಿ, ಕರ್ನಾಟಕ ವಿಶ್ವವಿದ್ಯಾಲಯದಿಂದ ಕನ್ನಡ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದುಕೊಂಡಿರುವರು. ಮಹಾದೇವ ಅವರಿಂದ ‘ದ್ವಿಶತಕ ತ್ರಿಪದಿಗಳು’ ‘ಬೋಧವೃಕ್ಷ’ ಎರಡು ಕೃತಿಗಳು ಪ್ರಕಟಗೊಂಡಿವೆ.


Spread the love

About inmudalgi

Check Also

ಬಸವರಾಜ ಪಾಟೀಲ ರಾಜ್ಯ ಮಟ್ಟದ ಗುಂಡು ಎಸೆತ ಸ್ಪರ್ಧೆಗೆ ಆಯ್ಕೆ

Spread the love ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಎಸ್.ವೈ.ಸಿ ಶಿಕ್ಷಣ ಸಂಸ್ಥೆಯ ಶ್ರೀ ಸದ್ಗುರು ಯಾಲ್ಲಾಲಿಂಗ ಸ್ವತಂತ್ರ ಪದವಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ