ಬನವಾಸಿ: ಬನವಾಸಿ ಜನತೆಯ ಬಹು ದಿನಗಳ ಬೇಡಿಕೆಯಾಗಿರುವ ಗ್ರೀಡ್‍ಗೆ ಅತಿ ಶೀಘ್ರದಲ್ಲಿ ಚಾಲನೆ ನೀಡಲಾಗುವುದು ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್ ಹೆಬ್ಬಾರ್ ಹೇಳಿದರು.
ಅವರು ಅಜ್ಜರಣಿ ಗ್ರಾಮದಲ್ಲಿ 3 ಕೋಟಿ 96ಲಕ್ಷ ರೂ. ವೆಚ್ಚದ ಸೇತುವೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿ, ಹಲವೂ ವರ್ಷಗಳ ಹಿಂದೆ ಬನವಾಸಿಯ ಪೂರ್ವ ಭಾಗ ಬರಗಾಲ ಪೀಡಿತ ಪ್ರದೇಶ ಎಂದು ಗುರುತಿಸಿಕೊಂಡಿತ್ತು ಆದರೆ ವರದಾ ನದಿಯ ವರದಿಂದ ಫಲವತ್ತದ ಪ್ರದೇಶವಾಗಿದೆ. ನಮ್ಮ ಸರ್ಕಾರ ರೈತ ಪರ ಸರ್ಕಾರವಾಗಿದ್ದು ಈಗಾಗಲೇ 87ಕೋಟಿ ರೂ. ವೆಚ್ಚದಲ್ಲಿ ಈ ಭಾಗದ 39ಕೆರೆಗಳನ್ನು ತುಂಬಿಸುವ ಏತ ನೀರಾವರಿಯ ಮೊದಲ ಹಂತದ ಕಾಮಗಾರಿ ಪೂರ್ಣಗೊಂಡಿದೆ ಕೆಲ ದಿನಗಳಲ್ಲಿ ಚಾಲನೆ ನೀಡಲಾಗುವುದು ಎಂದರು.
ಈ ಸಂದರ್ಭದಲ್ಲಿ ಜಿ.ಪಂ ಸದಸ್ಯೆ ರೂಪಾ ನಾಯ್ಕ್, ತಾಲೂಕು ಪಂಚಾಯಿತಿ ಅಧ್ಯಕ್ಷೆ ಶ್ರೀಲತಾ ಕಾಳೇರಮನೆ, ಉಷಾ ಹೆಗಡೆ, ದೇಮಣ್ಣ ದೊಡ್ಮನಿ, ಬನವಾಸಿ ಗ್ರಾಮ ಪಂಚಾಯತಿ ಸದಸ್ಯರು, ಮುಖಂಡರು, ಕಾರ್ಯಕರ್ತರು ಇದ್ದರು.
