Breaking News
Home / Recent Posts / ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಯುವಕ ಸಂಘ ಹಾಗೂ ಅಭಿಮಾನಿ ಬಳಗದ ಸಹಯೋಗದಲ್ಲಿ ಜ.26 ರಂದು ನಡೆದ ಸಂಗೊಳ್ಳಿ ರಾಯಣ್ಣನ ಬಲಿದಾನ ಸ್ಮರಣೋತ್ಸವ ಸಮಾರಂಭ

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಯುವಕ ಸಂಘ ಹಾಗೂ ಅಭಿಮಾನಿ ಬಳಗದ ಸಹಯೋಗದಲ್ಲಿ ಜ.26 ರಂದು ನಡೆದ ಸಂಗೊಳ್ಳಿ ರಾಯಣ್ಣನ ಬಲಿದಾನ ಸ್ಮರಣೋತ್ಸವ ಸಮಾರಂಭ

Spread the love

ಬೆಟಗೇರಿ:ದೇಶಕ್ಕಾಗಿ ತಮ್ಮ ಬದುಕನ್ನು ತ್ಯಾಗ ಮಾಡಿದ ಮಹಾನ್ ಪುರುಷರನ್ನು ಇಂದು ಪ್ರತಿಯೊಬ್ಬರೂ ಸ್ಮರಿಸಬೇಕಿದೆ. ಸಂಗೊಳ್ಳಿ ರಾಯಣ್ಣ ಒಬ್ಬ ದೇಶ ಭಕ್ತನಾಗಿದ್ದಾನೆ ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘದ ಮಾಜಿ ರಾಜ್ಯಾಧ್ಯಕ್ಷ ಡಾ.ರಾಜೇಂದ್ರ ಸಣ್ಣಕ್ಕಿ ಹೇಳಿದರು.
ಸಮೀಪದ ಕೌಜಲಗಿ ಪಟ್ಟಣದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಯುವಕ ಸಂಘ ಹಾಗೂ ಅಭಿಮಾನಿ ಬಳಗದ ಸಹಯೋಗದಲ್ಲಿ ಜ.26 ರಂದು ನಡೆದ ಸಂಗೊಳ್ಳಿ ರಾಯಣ್ಣನ ಬಲಿದಾನ ಸ್ಮರಣೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಗೊಳ್ಳಿ ರಾಯಣ್ಣ ಹುಟ್ಟಿದ್ದು ಆಗಸ್ಟ್ 15, ದೇಹತ್ಯಾಗ ಮಾಡಿದ್ದು ಜನೇವರಿ 26., ದೇಶದ ಇತಿಹಾಸದ ಮಹತ್ವಪೂರ್ಣ ಇವೆರಡು ದಿನಗಳು ಕ್ರಾಂತಿವೀರ ರಾಯಣ್ಣನ ಅಪ್ಪಟ ದೇಶಪ್ರೇಮವನ್ನು ಸಾರಿ ಹೇಳುತ್ತೇವೆ ಎಂದರು.
ಮುಗಳಖೋಡದ ಚಿನ್ಮಯಾನಂದ ಸ್ವಾಮೀಜಿ. ಸ್ಥಳೀಯ ವಿಠಲ ದೇವಋಷಿ ಸಮಾರಂಭದ ಸಾನಿಧ್ಯ ವಹಿಸಿ ಮಾತನಾಡಿ, ಸಂಗೊಳ್ಳಿ ರಾಯಣ್ಣನ ಬದುಕಿನ ತತ್ವದಾರ್ಶಗಳನ್ನು ಇಂದಿನ ಯುವಕರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಸ್ಥಳೀಯ ಗಣ್ಯರು, ಗ್ರಾಪಂ ನೂತನ ಸದಸ್ಯರನ್ನು ಸತ್ಕರಿಸಲಾಯಿತು. ಕ್ರಾಂತಿವೀರ ರಾಯಣ್ಣನ ಭಾವಚಿತ್ರಕ್ಕೆ ಪೂಜೆ, ಪುಷ್ಪಾರ್ಪಣೆ ಸಮರ್ಪಿಸಿದ ಬಳಿಕ ವಿವಿಧ ಕಲಾ ತಂಡ, ಸುಮಂಗಲೆಯ ಆರತಿ ಮೇಳ ಹಾಗೂ ರಾಯಣ್ಣನ ಭಾವಚಿತ್ರದೊಂದಿಗೆ ಪಂಜಿನ ಭವ್ಯ ಮೆರವಣಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ನಡೆಯಿತು.
ಮೆಳವಂಕಿ ಜಿಪಂ ಸದಸ್ಯೆ ಶಶಿಕಲಾ ಸಣ್ಣಕ್ಕಿ, ತಾಪಂ ಸದಸ್ಯ ಶಾಂತಪ್ಪ ಹಿರೇಮೇತ್ರಿ, ಪಿಕೆಪಿಎಸ್ ಅಧ್ಯಕ್ಷ ಜಿ.ಎಸ್.ಲೋಕಣ್ಣವರ, ಅಶೋಕ ಉದ್ದಪ್ಪಣ್ಣವರ, ಶ್ರೀಶೈಲ ಗಾಣಗೇರ, ಎಸ್.ಬಿ.ಹಳ್ಳೂರ, ನೀಲಪ್ಪ ಕೇವಟಿ, ರಾಯಪ್ಪ ಬಳೊಲದಾರ, ವೆಂಕಟೇಶ ದಳವಾಯಿ, ಬಸು ಜೋಗಿ, ಎಂ.ಡಿ.ಖಾಜಿ, ಶಂಕರ ಜೋತೆನ್ನವರ, ಮಾಲತೇಶ ಸಣ್ಣಕ್ಕಿ, ಸಂಗೊಳ್ಳಿ ರಾಯಣ್ಣ ಯುವಕ ಸಂಘದ ಮತ್ತು ಅಭಿಮಾನಿ ಬಳಗದ ಸದಸ್ಯರು, ಗಣ್ಯರು, ಅಭಿಮಾನಿಗಳು, ಗ್ರಾಮಸ್ಥರು ಇದ್ದರು.


Spread the love

About inmudalgi

Check Also

‘ಮೂಡಲಗಿಯಲ್ಲಿ ನ.23-24 ರಂದು 16ನೇ ಜಿಲ್ಲಾ ಸಾಹಿತ್ಯ ಸಮ್ಮೇಳನ’

Spread the love‘ಮೂಡಲಗಿಯಲ್ಲಿ ನ.23-24 ರಂದು 16ನೇ ಜಿಲ್ಲಾ ಸಾಹಿತ್ಯ ಸಮ್ಮೇಳನ’ ಜನಮನ ಸೇಳೆದ ಕನ್ನಡ ಬುತ್ತಿ ಜಾತ್ರೆ ಕಾರ್ಯಕ್ರಮ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ