ಮೂಡಲಗಿ: ಸರಕಾರವು ಬಡ ಜನತೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಸಾಕಷ್ಟು ಯೋಜನೆಗಳಿದ್ದು ಅವುಗಳ ಸದುಪಯೋಗ ಪಡೆದುಕೊಳ್ಳಬೇಕು. ಹೆಣ್ಣು ಮಕ್ಕಳಿಗೆ ಅನೇಕ ಸೌಲಭ್ಯಗಳಿದ್ದು ಅವುಗಳ ಉಪಯೋಗ ಪಡೆದುಕೊಂಡು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಪುರಸಭೆ ಅಧ್ಯಕ್ಷ ಹನಮಂತ ಗುಡ್ಲಮನಿ ಹೇಳಿದರು.
ಅವರು ಪಟ್ಟಣದ ವಾರ್ಡ್ ನಂ. 5ರ ಲಕ್ಷ್ಮೀನಗರದ ಶ್ರೀ ಕರೆಮ್ಮಾ ದೇವಿ ದೇವಸ್ಥಾನದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಆಶ್ರಯದಲ್ಲಿ ಜರುಗಿದ ‘ಭಾಗ್ಯಲಕ್ಷ್ಮೀ ಬಾಂಡ್’ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಶಿಕ್ಷಣ ಉದ್ಯೋಗ ಹಾಗೂ ಆರ್ಥಿಕವಾಗಿ ಸಬಲರಾಗಲು ಸರಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಅಂತಹ ಯೋಜನೆಗಳನ್ನು ಉಪಯೋಗಿಸಿಕೊಂಡು ಅದರ ಪ್ರಯೋಜನ ಪಡೆದುಕೊಳ್ಳಬೇಕು. ಅರಭಾಂವಿ ಶಾಸಕರಾದ ಬಾಲಚಂದ್ರ ಜಾರಕಿಹೊಳಿಯವರ ನಿರಂತರ ಪರಿಶ್ರಮ ಹಾಗೂ ಜನೋಪಯೋಗಿ ಕಾರ್ಯಗಳಿಂದ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆದಿವೆ. ಹೆಣ್ಣು ಮಕ್ಕಳಿಗೆ ಉಪಯೋಗವಾಗುವ ಭಾಗ್ಯ ಲಕ್ಷ್ಮೀ ಯೋಜನೆಯಿಂದ ಆರ್ಥಿಕ ಭದ್ರತೆ ದೊರೆತಂತಾಗುವದು ಎಂದು ನುಡಿದರು.
ಭಾಗ್ಯ ಲಕ್ಷ್ಮೀ ಯೋಜನೆಯ ಮೂಡಲಗಿ ನಗರ ವ್ಯಾಪ್ತಿಯ ಫಲಾನುಭವಿಗಳಿಗೆ 100 ಬಾಂಡ್ ವಿತರಣಾ ಕಾರ್ಯಕ್ರಮಕ್ಕೆ ಪುರಸಭೆ ಸದಸ್ಯೆ ಖುರ್ಷಾದ ಬೇಗಮ್ ನದಾಫ್ ಹಾಗೂ ಅನ್ವರ ನದಾಫ್ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಮುಖಂಡರಾದ ಬಸು ಝಂಡೇಕರುಬರ, ಚೇತನ ನಿಶಾನಿಮಠ, ಅಂಗನವಾಡಿ ಮೇಲ್ವಿಚಾರಕಿ ಕಮಲಾ ಕನಶೇಟ್ಟಿ ಹಾಗೂ ನಗರದ ಅಂಗನವಾಡಿ ಕಾರ್ಯಕರ್ತೆಯವರು, ಸಹಾಯಕಿಯರು ಮತ್ತು ಫಲಾನುಭವಿಗಳು ಉಪಸ್ಥಿತರಿದ್ದರು.
Home / Recent Posts / ಸರಕಾರವು ಬಡ ಜನತೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಸಾಕಷ್ಟು ಯೋಜನೆಗಳಿದ್ದು ಅವುಗಳ ಸದುಪಯೋಗ ಪಡೆದುಕೊಳ್ಳಬೇಕು
Check Also
‘ಮೂಡಲಗಿಯಲ್ಲಿ ನ.23-24 ರಂದು 16ನೇ ಜಿಲ್ಲಾ ಸಾಹಿತ್ಯ ಸಮ್ಮೇಳನ’
Spread the love‘ಮೂಡಲಗಿಯಲ್ಲಿ ನ.23-24 ರಂದು 16ನೇ ಜಿಲ್ಲಾ ಸಾಹಿತ್ಯ ಸಮ್ಮೇಳನ’ ಜನಮನ ಸೇಳೆದ ಕನ್ನಡ ಬುತ್ತಿ ಜಾತ್ರೆ ಕಾರ್ಯಕ್ರಮ …