Breaking News
Home / Recent Posts / ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟ

ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟ

Spread the love

  ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟ

ಮೂಡಲಗಿ: ಇಲ್ಲಿಯ ಆರ್.ಡಿ.ಎಸ್. ಕಾಲೇಜು ಮೈದಾನದಲ್ಲಿ ಉಪನಿದೇರ್ಶಕರ ಕಾರ್ಯಲಯ ಪದವಿ ಪೂರ್ವ ಶಿಕ್ಷಣ ಇಲಾಖೆ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆ ಮತ್ತು ಆರ್.ಡಿ.ಎಸ್. ಸ್ವತಂತ್ರ ಪದವಿ ಪೂರ್ವ ಕಾಲೇಜು ಇವುಗಳ ಸಂಯುಕ್ತಾಶ್ರಯದಲ್ಲಿ ಇಂದು ದಿ.26ರಂದು ತಾಲೂಕಾ ಪದವಿ ಪೂರ್ವ ಕಾಲೇಜುಗಳ ಕ್ರೀಡಾ ಕೂಟದ ಉದ್ಘಾಟನಾ ಸಮಾರಂಭವು ಜರುಗಲಿದೆ.
ಕಾರ್ಯಕ್ರಮದ ಉದ್ಘಾಟಕರಾಗಿ ಕೆಎಮ್‍ಎಫ್ ಅಧ್ಯಕ್ಷ ಹಾಗೂ ಶಾಸಕರಾದ ಬಾಲಚಂದ್ರ ಜಾರಕಿಹೊಳಿಯವರು ಆಗಮಿಸುವವರು, ರೂರಲ್ ಡೆವಲಪ್‍ಮೆಂಟ್ ಸೊಸೈಟಿ ಅಧ್ಯಕ್ಷ ಸಂತೋಷ ಪಾರ್ಶಿ ಅಧ್ಯಕ್ಷತೆ ವಹಿಸುವವರು, ಮುಖ್ಯ ಅತಿಥಿಗಳಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಅಜೀತ ಮನ್ನಿಕೇರಿ, ಮೂಡಲಗಿ ಪೊಲೀಸ್ ಠಾಣೆಯ ಪಿಎಸ್‍ಐ ಎಚ್.ವಾಯ್. ಬಾಲದಂಡಿ. ಅತಿಥಿಗಳಾಗಿ ಪಿ.ವಾಯ್. ಮುನ್ಯಾಳ, ಅನ್ವರ ನದಾಫ್, ಈರಪ್ಪ ಜಿನಗನ್ನವರ, ರಮೇಶ ಪಾಟೀಲ ಭಾಗವಹಿಸುವರು.
ಫೆ, 27ರಂದು ಸಮಾರೋಪ ಸಮಾರಂಭದ ಮುಖ್ಯ ಅತಿಥಿಗಳಾಗಿ ತಾಲೂಕಾ ದಂಡಾಧಿಕಾರಿಗಳಾದ ಡಿ.ಜಿ. ಮಹಾತ, ಸಿಪಿಐ ವೆಂಕಟೇಶ ಮುರನಾಳ. ಅತಿಥಿಗಳಾಗಿ ಚನ್ನಬಸು ಬಗನಾಳ, ಕರಿಬಸವರಾಜು ಟಿ ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದು ಆರ್.ಡಿ.ಎಸ್ ಕಾಲೇಜ ಪ್ರಾಚಾರ್ಯ ಎಸ್ ಡಿ ವಾಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

About inmudalgi

Check Also

ಲಿಂಗಾಯತ ಸಮಾಜದವರನ್ನೇ ಅಧ್ಯಕ್ಷ, ಉಪಾಧ್ಯಕ್ಷರನ್ನಾಗಿ ಮಾಡುತ್ತೇವೆ. ಯಾವುದೇ ಕಾರಣಕ್ಕೂ ಜಾರಕಿಹೊಳಿ ಕುಟುಂಬದಿಂದ ಅಧ್ಯಕ್ಷರಾಗುವ ಮಾತೇ ಇಲ್ಲ – ಬೆಮುಲ್‌ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ

Spread the love ಬೆಳಗಾವಿ: ಈಗ ಬಹಳ ಜನರ ಬಯಕೆ ಬಿಡಿಸಿಸಿ ಬ್ಯಾಂಕ್‌ಗೆ ಬರುವುದು. ಆದರೆ, ನಾನು ಬಿಡಿಸಿಸಿ ಬ್ಯಾಂಕ್‌ಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ