Breaking News
Home / Recent Posts / ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ (ಅಭಿವೃದ್ದಿ)ಯಾಗಿ ಬಡ್ತಿ ಪಡೆದ ಬಸವರಾಜ ಹೆಗ್ಗನಾಯಕ ಅವರಿಗೆ ಗ್ರಾಮ ಪಂಚಾಯಿತಿ ನೌಕರರ ಸಂಘದ ವತಿಯಿಂದ ಸತ್ಕರ

ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ (ಅಭಿವೃದ್ದಿ)ಯಾಗಿ ಬಡ್ತಿ ಪಡೆದ ಬಸವರಾಜ ಹೆಗ್ಗನಾಯಕ ಅವರಿಗೆ ಗ್ರಾಮ ಪಂಚಾಯಿತಿ ನೌಕರರ ಸಂಘದ ವತಿಯಿಂದ ಸತ್ಕರ

Spread the love

ಗೋಕಾಕ : ಗೋಕಾಕ ಹಾಗೂ ಮೂಡಲಗಿ ತಾಲ್ಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ  ಬಸವರಾಜ ಹೆಗ್ಗನಾಯಕ ಅವರು ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ (ಅಭಿವೃದ್ದಿ)ಯಾಗಿ ಬಡ್ತಿ ಪಡೆದ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ನೌಕರರ ಸಂಘದ ವತಿಯಿಂದ ಸತ್ಕರಿಸಿ ಗೌರವಿಸಲಾಯಿತು.

ಕಾರ್ಯನಿರ್ವಾಹಕ ಹುದ್ದೆಯಿಂದ ಬೆಳಗಾವಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಹುದ್ದೆಗೆ ಮುಂಬಡ್ತಿ ನೀಡಿ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತರಾಜ್ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಟಿ.ಡಿ.ನಾಗೇಂದ್ರ ದಿ.26 ರಂದು ಆದೇಶ ಮಾಡಿದ್ದ ಪ್ರಯುಕ್ರ ಶನಿವಾರದಂದು ನಗರದ ತಾಲೂಕಾ ಪಂಚಾಯತ ಸಬಾ ಭವನದಲ್ಲಿ ಗೋಕಾಕ ಹಾಗೂ ಮೂಡಲಗಿ ತಾಲೂಕಾ ಗ್ರಾಮ ಪಂಚಾಯತ ನೌಕರರ ಸಂಘದ ಪದಾಧಿಕಾರಿಗಳು ಸೇರಿ ಸತ್ಕರಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ ನೌಕರರ ಸಂಘದ ತಾಲೂಕಾಧ್ಯಕ್ಷ ಮಡ್ಡೆಪ್ಪ ಭಜಂತ್ರಿ, ಗೋಕಾಕ ತಾಲೂಕಾ ಗ್ರಾ.ಪಂ. ನೌಕರರ ಸಂಘದ ಪ್ರ.ಕಾರ್ಯದರ್ಶಿ ಕಲ್ಲಪ್ಪ ಮಾದರ, ಕರೀಮಸಾಬ ಬಾಗವಾನ, ಸುನೀಲ ಯಡವನ್ನವರ, ಲಕ್ಷ್ಮಣ ಬಾಲಯಗೋಳ,ವಿಜಯ ಸೋಲ್ಲಾಪೂರ, ಧರೆಪ್ಪ ಬೆಳವಿ, ಮೂಡಲಗಿ ತಾಲೂಕಾ ಗ್ರಾ.ಪಂ. ನೌಕರರ ಸಂಘದ ಅಧ್ಯಕ್ಷ ರಮೇಶ ಹೋಳಿ, ಬಸವರಾಜ ರೊಡ್ಡನವರ, ಹನಮಂತ ತಾಳಿಕೋಟಿ, ಹನಮಂತ ಬಸಳಿಗುಂದಿ, ಗಂಗಾಧರ ಮಲ್ವಿಹಾರಿ, ರಂಗಪ್ಠ್ಠಪ ಗುಜನಟ್ಲಟಿ, ಶ್ರೀಶೈಲ್ ಯಡವನ್ನವರ ಕಂಬಳಿ, ರವಿ ಬಿಳ್ಳೂರ ಇತರರು ಇದ್ದರು.


Spread the love

About inmudalgi

Check Also

‘ಮೂಡಲಗಿಯಲ್ಲಿ ನ.23-24 ರಂದು 16ನೇ ಜಿಲ್ಲಾ ಸಾಹಿತ್ಯ ಸಮ್ಮೇಳನ’

Spread the love‘ಮೂಡಲಗಿಯಲ್ಲಿ ನ.23-24 ರಂದು 16ನೇ ಜಿಲ್ಲಾ ಸಾಹಿತ್ಯ ಸಮ್ಮೇಳನ’ ಜನಮನ ಸೇಳೆದ ಕನ್ನಡ ಬುತ್ತಿ ಜಾತ್ರೆ ಕಾರ್ಯಕ್ರಮ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ