ಬೆಟಗೇರಿ:ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ ಅವರ ತತ್ವಾರ್ದಶಗಳನ್ನು ಪ್ರತಿಯೊಬ್ಬರೂ ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕೆಂದು ಬೆಟಗೇರಿ ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ ಶಿಕ್ಷಣ ಹೋರಾಟ ಸಮಿತಿ ಅಧ್ಯಕ್ಷ ಸುಭಾಷ ಜಂಬಗಿ ಹೇಳಿದರು.
ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ ಶಿಕ್ಷಣ ಹೋರಾಟ ಸಮಿತಿ ಸಹಯೋಗದಲ್ಲಿ ಬುಧವಾರ ಏ.14ರಂದು ಸ್ಥಳೀಯ ಅಂಬೇಡ್ಕರ ವೃತ್ತದಲ್ಲಿ ನಡೆದ ಡಾ.ಬಿ.ಆರ್.ಅಂಬೇಡ್ಕರ ಜಯಂತ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಅಂಬೇಡ್ಕರ ಅವರು ಭಾರತ ದೇಶಕ್ಕೆ ಅಮೂಲ್ಯವಾದ ಕೊಡುಗೆ ನೀಡಿದ ಮಹಾ ಮಾನವತಾವಾದಿಯಾಗಿದ್ದಾರೆ ಎಂದರು.

ವಿಜಯ ಹಿರೇಮಠ ಕಾರ್ಯಕ್ರಮದ ಸಾನಿಧ್ಯ ವಹಿಸಿ ಡಾ.ಬಿ ಆರ್ ಅಂಬೇಡ್ಕರ ಭಾವಚಿತ್ರಕ್ಕೆ ಪೂಜೆ, ಪುಷ್ಪಾರ್ಚಣೆ ನೆರವೇರಿಸಿದ ಬಳಿಕ ಸಿಹಿ ವಿತರಿಸಲಾಯಿತು.
ಈಶ್ವರ ಮುಧೋಳ, ಸದಾಶಿವ ಕುರಿ, ಸುಭಾಸ ಕರೆನ್ನವರ, ಬಸವರಾಜ ಪಣದಿ, ರವಿ ದಾನವ್ವಗೋಳ, ಮಲ್ಲಪ್ಪ ತೆರದಾಳ, ಆನಂದ ತಳವಾರ, ಮೆಳೆಪ್ಪ ಹರಿಜನ, ಗೋಪಾಲ ಹೊಸಟ್ಟಿ, ವಿಠಲ ದಾನವ್ವಗೋಳ, ಅಶೋಕ ಹರಿಜನ, ಪ್ರಕಾಶ ಹಾಲಣ್ಣವರ, ಡಾ.ಬಿ.ಆರ್.ಅಂಬೇಡ್ಕರ ಶಿಕ್ಷಣ ಹೋರಾಟ ಸಮಿತಿ ಸದಸ್ಯರು, ಗ್ರಾಮಸ್ಥರು ಇದ್ದರು.
IN MUDALGI Latest Kannada News