ನಾಳೆಯಿಂದ ನಡೆಯಬೇಕಿದ್ದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಪರೀಕ್ಷೆಗಳು ಮುಂದೂಡಿಕೆ
ಬೆಳಗಾವಿ: ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ನಾಳೆಯಿಂದ ನಡೆಯಬೇಕಿದ್ದ ಎಲ್ಲಾ ಸ್ನಾತಕ, ಸ್ನಾತಕೋತ್ತರ ಹಾಗೂ ಎಂಬಿಎ ಪರೀಕ್ಷೆಗಳನ್ನು ಮುಂದೂಡಿದೆ.
ಏ.27ರಿಂದ ಪರೀಕ್ಷೆಗಳು ನಿಗದಿಯಾಗಿದ್ದವು. ಕೊರೊನಾ ಸೊಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸರ್ಕಾರದ ಆದೇಶದ ಮೇರೆಗೆ ವಿಶ್ವವಿದ್ಯಾಲಯದ ಎಲ್ಲಾ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಕುಲಸಚಿವರು ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ.
IN MUDALGI Latest Kannada News