ಪ್ರತಿ ಗ್ರಾಮಗಳಿಗೆ ಸೋಡಿಯಂ ಹೈಪೋಕ್ಲೋರೈಡ್ ವಿತರಣೆ- ನಾಗಪ್ಪ ಶೇಖರಗೋಳ.
ಕೊರೋನಾ ನಿಯಂತ್ರಣ ಸಂಬಂಧ ವಿವಿಧ ಗ್ರಾಮಗಳಿಗೆ ಟೀಂ
ಎನ್ಎಸ್ಎಫ್ ಭೇಟಿ.
ಮೂಡಲಗಿ: ಗ್ರಾಮ ಮಟ್ಟದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕೊರೋನಾ ಸೋಂಕು ಹಿಮ್ಮೆಟ್ಟಿಸಲು ಈಗಾಗಲೇ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಅಗತ್ಯವಿರುವ ಎಲ್ಲ ಬೀಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ. ಅಲ್ಲದೇ ಪ್ರತಿ ಗ್ರಾಮ ಪಂಚಾಯತಿಗಳಿಗೆ ಸೋಡಿಯಂ ಹೈಪೋಕ್ಲೋರೈಡ್ ವಿತರಿಸಲಾಗುತ್ತದೆ ಎಂದು ಶಾಸಕರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಹೇಳಿದರು.
ಅರಭಾವಿ ಕ್ಷೇತ್ರದ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಮಾತನಾಡಿದ ಅವರು, ಸಚಿವ ಮುರುಗೇಶ ನಿರಾಣಿ ಅವರು ನಮ್ಮೆಲ್ಲ ಗ್ರಾಮ ಪಂಚಾಯತಿಗಳಿಗೆ ಉಚಿತವಾಗಿ ಸೋಡಿಯಂ ಹೈಪೋಕ್ಲೋರೈಡ್ ನೀಡಿದ್ದಾರೆಂದು ಅವರು ತಿಳಿಸಿದರು.
ಕೊರೋನಾ ನಿಯಂತ್ರಣ ಸಾಧಿಸಲು ಎಲ್ಲಾ ಗ್ರಾಮಗಳಲ್ಲಿ ಜನರಲ್ಲಿ ಜಾಗೃತಿ ಮೂಡಿಸಲು ಡಂಗುರ ಸಾರಲಾಗಿದೆ. ಅನಗತ್ಯವಾಗಿ ಓಡಾಡುವುದನ್ನು ನಿರ್ಬಂಧಿಸಲಾಗಿದೆ. ಅಗತ್ಯ ಸಂದರ್ಭಗಳಲ್ಲಿ ಮಾತ್ರ ಜನರು ಹೊರಗೆ ಬರಬೇಕು. ಕೊರೋನಾ ಸೋಂಕಿನ ಲಕ್ಷಣಗಳನ್ನು ಹೊಂದಿರುವವರಿಗೆ ಕೋವಿಡ್ ಕಾಳಜಿ ಕೇಂದ್ರಗಳಲ್ಲಿ ಉಚಿತವಾಗಿ ಚಿಕಿತ್ಸೆ ನೀಡಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಮೂಡಲಗಿ ಬಿಇಓ ಅಜೀತ ಮನ್ನಿಕೇರಿ ಮಾತನಾಡಿ, ಸೋಂಕಿತರಿಗೆ ಎಲ್ಲಾ ರೀತಿಯ ಅನುಕೂಲತೆಗಳನ್ನು ಮಾಡಿಕೊಡಲಾಗಿದೆ. ಸಾಧಾರಣ ಲಕ್ಷಣಗಳನ್ನು ಹೊಂದಿರುವವರು ಮನೆಯಲ್ಲಿಯೇ ಚಿಕಿತ್ಸೆ ಪಡೆಯಬೇಕು. ಸಾರ್ವಜನಿಕರು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಲಹೆ ಮಾಡಿದರು.
ತಹಶೀಲ್ದಾರರು, ಹಿರಿಯ ತಜ್ಞ ವೈದ್ಯ ಡಾ. ಆರ್. ಎಸ್.ಬೆಂಚಿನಮರಡಿ, ತಾಲೂಕು ಆರೋಗ್ಯಾಧಿಕಾರಿ ಡಾ. ಮುತ್ತಣ್ಣ ಕೊಪ್ಪದ, ಸಿಪಿಐ ವೆಂಕಟೇಶ ಮುರನಾಳ, ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.