Breaking News
Home / Recent Posts / ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ವಿರೇಂದ್ರ ಹೆಗ್ಗಡೆಯವರು ಅವರ ಜನರ ಕಷ್ಟ ನೀಗಿಸುವುದರಲ್ಲಿ ನಿರತರಾಗಿದ್ದಾರೆ

ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ವಿರೇಂದ್ರ ಹೆಗ್ಗಡೆಯವರು ಅವರ ಜನರ ಕಷ್ಟ ನೀಗಿಸುವುದರಲ್ಲಿ ನಿರತರಾಗಿದ್ದಾರೆ

Spread the love

ಮೂಡಲಗಿ : ಈ ಮಹಾಮಾರಿ ಕೊರೋನಾ ಸಂಕಷ್ಟದಲ್ಲಿರುವ ರಾಜ್ಯದ ಜನತೆಗೆ ಸಹಾಯ ಹಸ್ತ ನೀಡುವುದರೊಂದಿಗೆ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ವಿರೇಂದ್ರ ಹೆಗ್ಗಡೆಯವರು ಅವರ ಜನರ ಕಷ್ಟ ನೀಗಿಸುವುದರಲ್ಲಿ ನಿರತರಾಗಿದ್ದಾರೆ ಆದರಿಂದ ಜನರು ಯಾವುದೇ ಕಾರಣಕ್ಕೂ ಭಯಭೀತರಾಗದೆ ಸರ್ಕಾರದ ನಿಯಗಳನ್ನು ಪಾಲಿಸಬೇಕೆಂದು ಶ್ರೀಕ್ಷೇತ್ರ ಧರ್ಮಸ್ಥಳ ಯೋಜನೆಯ ಧಾರವಾಡ ಪ್ರಾದೇಶಿಕ ನಿರ್ದೇಶಕ ದುಗ್ಗೆಗೌಡ ಹೇಳಿದರು.

ಸೋಮವಾರದಂದು ಪಟ್ಟಣದ ವಡ್ಡರ ಓಣಿಯ ಸಭಾ ಭವನದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಯೋಜನೆಯವರು ಹಮ್ಮಿಕೊಂಡ ಕೊರೋನಾ ಸಂಕಷ್ಟದಲ್ಲಿರುವ 50 ಬಡ ಕುಟುಂಬಗಳಿಗೆ ಆಹಾರ ಧಾನ್ಯಗಳ ಕಿಟ್‍ಗಳನ್ನು ವಿತರಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿ, ನಿಮ್ಮೊಂದಿಗೆ ಧರ್ಮಾಧಿಕಾರಿ ಶ್ರೀ ವಿರೇಂದ್ರ ಹೆಗ್ಗಡೆಯವರು ಇದ್ದಾರೆ. ಮೂಡಲಗಿ ತಾಲೂಕಿನ ಆರೋಗ್ಯಕ್ಕೆ ಅನೇಕ ವೈದ್ಯಕೀಯ ಸಲಕರಣೆಗಳನ್ನು ವಿತರಿಸಲಾಗಿದೆ. ಕೊರೋನಾ ಮಹಾಮಾರಿಯನ್ನು ತಡೆಯಲು ಪ್ರತಿಯೊಬ್ಬರು ವ್ಯಾಕ್ಸಿನ್ ಪಡೆಯಬೇಕು. ಇದರ ಬಗ್ಗೆ ಯಾರು ಉದಾಸಿನರಾಗಬಾರದು ವ್ಯಾಕ್ಸಿನ್ ಪಡೆಯುವುದು ನಮ್ಮೆಲ್ಲರ ಕರ್ತವ್ಯವೆಂದು ತಿಳಿದು, ತಮ್ಮ-ತಮ್ಮ ಕುಟುಂಬವನ್ನು ರಕ್ಷಿಸಿಕೊಳ್ಳಿ ಎಂದರು.

ಸ್ಥಳೀಯ ಪಿಎಸ್‍ಐ ಎಚ್.ವೈ. ಬಾಲದಂಡಿ ಮಾತನಾಡಿ, ಧರ್ಮಾಧಿಕಾರಿಗಳು ಕೊರೋನಾ ಸೊಂಕಿತರಿಗೆ ಧೈರ್ಯವನ್ನು ತುಂಬುವುದರ ಜೊತೆಗೆ ಅವರ ಕುಟುಂಬಕ್ಕೂ ನೆರವಾಗುತ್ತಿದ್ದಾರೆ. ನಾವೆಲ್ಲರೂ ಅವರೊಂದಿಗೆ ಕೈ ಜೋಡಿಸಿ ಕೊರೋನಾ ಹೊಡೆದಟ್ಟಲು ಪ್ರಯತ್ನಿಸೋಣವೆಂದು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ನಿರ್ದೇಶಕ ಕೇಶವ ದೇವಾಂಗ, ಮೂಡಲಗಿ ತಾಲೂಕಿನ ಯೋಜನಾಧಿಕಾರಿ ದೇವರಜ ನಾಯ್ಕ, ಮಂಜುನಾಥ ಸೈನಿಕ ತರಬೇತಿ ಕೆಂದ್ರದ ಸಂಸ್ಥಾಪಕರಾದ ಲಕ್ಷ್ಮಣ ಅಡಿಹುಡಿ, ವಯಲ ಮೇಲ್ವಿಚಾರಕರಾದ ಮಾನಸಿ ಪಾಟೀಲ, ಪರವೀನ ಮುಜಾವರ ಹಾಗೂ ನಾಗನೂರ ವಲಯದ ಮೇಲ್ವಿಚಾರಕರಾದ ಬಾಹುಬಲಿ ಮತ್ತು ಸ್ವಸಹಾಯ ಸಂಘದ ಅಧ್ಯಕ್ಷೆ ಯಲ್ಲವ್ವ ಬಂಡಿವಡ್ಡರ ಮತ್ತು ಕೃಷ್ಣಾ ಗಾಡಿವಡ್ಡರ, ಸಿದ್ದು ದುರದುಂಡಿ, ಯಲ್ಲಾಲಿಂಗ ವಾಳದ, ಎಲ್ಲಾ ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು.


Spread the love

About inmudalgi

Check Also

ಮಾರುತಿ ಕೋಳಿ ಅವರಿಗೆ ರಾಷ್ಟ್ರೀಯ ಪರಶುರಾಮ ಪ್ರಶಸ್ತಿ ಪ್ರಧಾನ

Spread the love ಮಾರುತಿ ಕೋಳಿ ಅವರಿಗೆ ರಾಷ್ಟ್ರೀಯ ಪರಶುರಾಮ ಪ್ರಶಸ್ತಿ ಪ್ರಧಾನ ಮೂಡಲಗಿ: ಕೆರಳಾದ ಶ್ರೀ ಶಟ್ ಶಾಸ್ತ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ