Breaking News
Home / Recent Posts / ತಾಲೂಕಾ ಮಟ್ಟದ ಶಿಕ್ಷಕರ ದಿನಾಚರಣೆ ಸ.5 ರಂದು

ತಾಲೂಕಾ ಮಟ್ಟದ ಶಿಕ್ಷಕರ ದಿನಾಚರಣೆ ಸ.5 ರಂದು

Spread the love

ಮೂಡಲಗಿ: ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮದಿನಾಚರಣೆ ಪ್ರಯುಕ್ತ ತಾಲೂಕಾ ಮಟ್ಟದ ಶಿಕ್ಷಕರ ದಿನಾಚರಣೆಯನ್ನು ಸ.5 ರವಿವಾರದಂದು ಸ್ಥಳೀಯ ಶ್ರೀ ಕೆ.ಎಚ್ ಸೋನವಾಲಕರ ಕಲ್ಯಾಣ ಮಂಟಪ ಗುಡ್ಲಮಡ್ಡಿ ಈರಣ್ಣ ದೇವಸ್ಥಾನದಲ್ಲಿ ಮುಂಜಾನೆ 11-00 ಗಂಟೆಗೆ ಸರಕಾರ ಹಾಗೂ ಇಲಾಖೆಯ ಮಾರ್ಗದರ್ಶನದಂತೆ ಕೋವಿಡ್-19 ಶಿಷ್ಠಾಚಾರದ ನಿಯಮಾನುಸಾರ ಏರ್ಪಡಿಸಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಸ್ಥಳೀಯ ಸಿದ್ಧ ಸಂಸ್ಥಾನ ಮಠದ ಶ್ರೀ ಶ್ರೀ ದತ್ತಾತ್ರೇಯಬೋಧ ಮಹಾಸ್ವಾಮೀಜಿ ವಹಿಸುವರು. ಉದ್ಘಾಟಕರಾಗಿ ಗೋಕಾಕ ಶಾಸಕ ರಮೇಶ ಜಾರಕಿಹೊಳಿ, ಅಧ್ಯಕ್ಷತೆಯನ್ನು ಕೆ.ಎಮ್.ಎಫ್ ಅಧ್ಯಕ್ಷರು ಹಾಗೂ ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ವಹಿಸುವರು. ಮುಖ್ಯ ಅತಿಥಿಗಳಾಗಿ ಸಂಸದರಾದ ಮಂಗಳಾ ಅಂಗಡಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ವಿಧಾನ ಪರಿಷತ್ ಸದಸ್ಯರಾದ ಮಹಾಂತೇಶ ಕವಟಗಿಮಠ, ವಿವೇಕರಾವ್ ಪಾಟೀಲ, ಅರುಣ ಶಹಪೂರ, ಹಣಮಂತ ನಿರಾಣಿ, ಡಿಡಿಪಿಐ ಗಜಾನನ ಮನ್ನಿಕೇರಿ, ಪುರಸಭೆ ಅಧ್ಯಕ್ಷ ಹಣಮಂತ ಗುಡ್ಲಮನಿ, ಉಪಾಧ್ಯಕ್ಷೆ ರೇಣುಕಾ ಹಾದಿಮನಿ, ತಹಶೀಲ್ದಾರ ಡಿ.ಜಿ ಮಹಾತ, ತಾಪಂ ಇಒ ಎಸ್.ಕೆ ಚೌಗಲೆ ಹಾಗೂ ಶಿಕ್ಷಕ ಸಂಘಟನೆಗಳ ಪದಾಧಿಕಾರಿಗಳು ಮತ್ತು ಪ್ರತಿಷ್ಠಾನಗಳ ಮುಖ್ಯಸ್ಥರು ಉಪಸ್ಥಿತರಿರುತ್ತಾರೆ.


Spread the love

About inmudalgi

Check Also

ಆರ್.ಡಿ.ಎಸ್. ಪಿಯು ಕಾಲೇಜಿನ ವಾರ್ಷಿಕ ಸ್ನೇಹ ಸಮ್ಮೇಳನ ಮತ್ತು ಬೀಳ್ಕೊಡುವ ಸಮಾರಂಭ

Spread the love  ಮೂಡಲಗಿ : ದಿನಾಂಕ 19-01-2026 ರಂದು ಇಲ್ಲಿನ ಶೈಕ್ಷಣಿಕ ಸಂಸ್ಥೆಯಾದ ಆರ್.ಡಿ.ಎಸ್. ಸ್ವತಂತ್ರ ಪದವಿ ಪೂರ್ವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ