ಅಸಮಾನತೆಯನ್ನು ಹೋಗಲಾಡಿಸಲು ಹೊಸ ಶಿಕ್ಷಣ ನೀತಿ ಜಾರಿ- ಸಂಸದ ಈರಣ್ಣ ಕಡಾಡಿ
ಮೂಡಲಗಿ; ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 34 ವರ್ಷಗಳ ಹಿಂದಿನ ರಾಷ್ಟ್ರೀಯ ಶಿಕ್ಷಣ ನೀತಿಗೆ ಬದಲಾವಣೆ ತಂದಿದೆ. 21ನೇ ಶತಮಾನದ ಶಿಕ್ಷಣ ನೀತಿಗೆ ಅನುಮೊಧನೆ ನೀಡಿದ್ದು, ಒಂದು ಮಗುವಿಗೆ ವ್ಯಕ್ತಿತ್ವ ರೂಪಿಸುವಲ್ಲಿ ಶಿಕ್ಷಣದ ಪಾತ್ರ ಮುಖ್ಯವಾಗಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು.
ಕಲ್ಲೋಳಿ ಪಟ್ಟಣದಲ್ಲಿ ಬುಧವಾರ ಸೆ 15 ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಸಮೂಹ ಸಂಪನ್ಮೂಲ ಕೇಂದ್ರಕ್ಕೆ ಭೇಟಿ ವಿದ್ಯಾರ್ಥಿಗಳಿಗೆ ಪುಸ್ತಕ, ನೋಟಬುಕ್, ಪೆನ್ ವಿತರಿಸಿ ಮಾತನಾಡಿದ ಈರಣ್ಣ ಕಡಾಡಿ ಅವರು ಒಂದು ಮಗು ಪರಿಪೂರ್ಣವಾದ ಶಿಕ್ಷಣ ಪಡೆಯಬೇಕಾದರೆ ಶಿಕ್ಷಣದಲ್ಲಿ ಏಕರೂಪತೆ ಮತ್ತು ವೈವಿದ್ಯತೆ ತರುವುದು ಅಸಮಾನತೆಯನ್ನು ಹೋಗಲಾಡಿಸುವುದು, ಎಲ್ಲರಿಗೂ ಗುಣಮಟ್ಟದ ಶಿಕ್ಷಣ ಮತ್ತು ಪ್ರಾಥಮಿಕ ಶಿಕ್ಷಣದ ಗುಣಮಟ್ಟ ಸುಧಾರಣೆಯತ್ತ ಗಮನ ಹರಿಸುವುದು ರಾಷ್ಟ್ರೀಯ ಶಿಕ್ಷಣ ನೀತಿಯ ಗುರಿಯಾಗಿದೆ ಎಂದರು.
ಹೊಸ ಶಿಕ್ಷಣ ನೀತಿಯಲ್ಲಿ ಆಯಾ ಮಾತೃಭಾಷೆಗಳಲ್ಲೆ ಮಕ್ಕಳಿಗೆ ಕಲಿಕೆಗೆ ಒತ್ತು ನೀಡುವ ಹೊಸ ಶಿಕ್ಷಣ ನೀತಿಗೆ ಕೇಂದ್ರ ಸರ್ಕಾರವು ಅನುಮೊಧನೆ ನೀಡಿದ್ದು ಒಳ್ಳೆಯ ಬೆಳವಣಿಗೆ ಎಂದರಲ್ಲದೇ ಇಡೀ ದೇಶದಲ್ಲಿಯೇ ಎಲ್ಲ ರಾಜ್ಯಗಳಿಗಿಂತ ಮೊದಲು ಕರ್ನಾಟಕ ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ-2020 ಅನ್ನು ದೇಶದಲ್ಲೇ ಎಲ್ಲರಿಗಿಂತ ಮೊದಲು ಕರ್ನಾಟಕ ಶೈಕ್ಷಣಿಕ ಕ್ಷೇತ್ರದಲ್ಲಿ ಐತಿಹಾಸಿಕ ಹೆಜ್ಜೆ ಇರಿಸಿದಂತಾಗಿದೆ ಎಂದರು.
ಸಂಸದ ಈರಣ್ಣ ಕಡಾಡಿ ಅವರು ತಾವು ಕಲಿತ ಶಾಲೆಯ ಕೋಣೆ, ಆಟವಾಡಿದ ಗಿಡಗಳನ್ನು ವಿಕ್ಷಣೆ ಮಾಡಿ ಹಿಂದಿನ ನೆನಪುಗಳನ್ನು ಮಾಡಿಕೊಂಡು ಶಿಕ್ಷಕರೊಂದಿಗೆ ಹಂಚಿಕೊಂಡರು.
ಈ ಸಂದರ್ಭದಲ್ಲಿ ಭಾರತ ದೇಶದ ಪವಿತ್ರ ಭೂಮಿಯಲ್ಲಿ ಜನಿಸಿದ ಪುಣ್ಯ ಪುರುಷರಲ್ಲಿ ಕನ್ನಡ ನಾಡಿನ ಕೀರ್ತಿ ಪತಾಕೆಯನ್ನು ವಿಶ್ವದ ಮಟ್ಟದಲ್ಲಿ ಎತ್ತಿ ಹಿಡಿದ ಮಹಾನ್ ಮೇದಾವಿ ಡಾ.ಎಂ.ವಿಶ್ವೇಶ್ವರಯ್ಯ ಅವರ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು.
ಬಿಇಒ ಅಜೀತ ಮನ್ನಿಕೇರಿ, ಸಿ.ಆರ್.ಸಿ ಗಜಾನನ ಉಪ್ಪಾರ, ಪ್ರಧಾನ ಗುರುಗಳಾದ ಶಿವಲಿಂಗ ಗೋಸಬಾಳ, ಚಿದಾನಂದ ಬಡಿಗೇರ, ಎಸ್. ಎಸ್. ನಾಯಕವಾಡಿ, ಮಾಲಾ ಕಡಾಡಿ, ಶಾಂತಾ ಗುರಬಸವನವರ, ಎ. ಬಿ. ಚೌಡಪ್ಪನವರ, ಮಹಾದೇವ ಮದಭಾಂವಿ, ಬಸವರಾಜ ಜಗದಾಳೆ, ಪರಪ್ಪ ಗಿರೆಣ್ಣವರ ಸೇರಿದಂತೆ ಅನೇಕ ಶಿಕ್ಷಕರು ಉಪಸ್ಥಿತರಿದ್ದರು.