Breaking News
Home / Recent Posts / ಘಟಪ್ರಭಾ ನದಿಯ ದಂಡೆ ಮತ್ತು ಸುತ್ತಮುತ್ತಲಿನ ಪ್ರದೇಶದ ಸ್ವಚ್ಛತೆ ಹಾಗೂ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ

ಘಟಪ್ರಭಾ ನದಿಯ ದಂಡೆ ಮತ್ತು ಸುತ್ತಮುತ್ತಲಿನ ಪ್ರದೇಶದ ಸ್ವಚ್ಛತೆ ಹಾಗೂ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ

Spread the love

ಗೋಕಾಕ: ಪ್ರಕೃತಿ ಉಚಿತವಾಗಿ ಕೊಟ್ಟಿರುವ ನೀರನ್ನು, ಗಿಡ ಮರಗಳು ಉಚಿತವಾಗಿ ಕೊಟ್ಟಿರುವ ಆಮ್ಲಜನಕವನ್ನು ನಾಶ ಮಾಡುವ ಮೂಲಕ ಸ್ವಯಂಕೃತ ಅಪರಾದಗೈದ ನಾವೆಲ್ಲ ನದಿ ಸ್ವಚ್ಛತೆ ಮಾಡುವ ಮೂಲಕ ಶುದ್ದ ನೀರಿಗಾಗಿ ಪ್ರಯತ್ನಿಸಬೇಕು ಜೊತೆಗೆ ಸಸಿ ನೆಡುವ ಮೂಲಕ ಉತ್ತಮ ಆಮ್ಲಜನಕ ದೊರೆಯುವಂತೆ ವಿಶೇಷ ಪ್ರಯತ್ನ ಮಾಡಬೇಕಾಗಿದೆ ಎಂದು ರಾಜ್ಯಸಭಾ ಸದಸ್ಯ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಹೇಳಿದರು.


ಸೋಮವಾರ ಸೆ. 27 ರಂದು ಅರಭಾವಿ ಬಿಜೆಪಿ ರೈತ ಮೋರ್ಚಾ ವತಿಯಿಂದ ಸೇವೆ ಮತ್ತು ಸಮರ್ಪಣೆ ಅಭಿಯಾನದಡಿ ಲೋಳಸೂರ ಸೇತುವೆ ಹತ್ತಿರ ಘಟಪ್ರಭಾ ನದಿಯ ದಂಡೆ ಮತ್ತು ಸುತ್ತಮುತ್ತಲಿನ ಪ್ರದೇಶದ ಸ್ವಚ್ಛತೆ ಹಾಗೂ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಈರಣ್ಣ ಕಡಾಡಿ ಅವರು ಸೆಪ್ಟೆಂಬರ 17 ರಿಂದ ಅಕ್ಟೋಂಬರ 7 ರವರೆಗೆ 20 ದಿನಗಳ ಕಾಲ ಸೇವೆ ಮತ್ತು ಸಮರ್ಪಣೆ ಅಭಿಯಾನವನ್ನು ದೇಶಾಧ್ಯಂತ ಆಚರಿಸಲಾಗುತ್ತಿದೆ ಎಂದರು.
ಭಗವಂತ ಎಲ್ಲವನ್ನು ಕೊಟ್ಟಿದ್ದರೂ, ಮಾನವರು ನಮ್ಮ ನಮ್ಮ ವೈಯಕ್ತಿಕ ಸ್ವಾರ್ಥಕ್ಕಾಗಿ ನಾವೆಲ್ಲ ಪ್ರಕೃತಿಯನ್ನು ನಾಶ ಪಡಿಸಿದ್ದೇವೆ. ಆ ಕಾರಣದಿಂದ ಉಚಿತವಾಗಿ ಸಿಗುವಂತಹ ನೀರನ್ನು ಇವತ್ತು ಬಾಟಲ್‍ಗಳ ಮುಖಾಂತರ ಹಣದಿಂದ ಖರೀದಿಸುವ ಪರಿಸ್ಥಿತಿಗೆ ಬಂದಿದ್ದೇವೆ. ಸಾಕಷ್ಟು ಗಿಡ ಮರಗಳಿದ್ದರು ಅವುಗಳನ್ನು ನಾಶ ಮಾಡಿ ಆಮ್ಲಜನಕದ ಕೊರತೆಗೆ ಕಾರಣರಾಗಿದ್ದೇವೆ. ಅದನ್ನೆಲ್ಲ ಸರಿಪಡಿಸುವ ನಿಟ್ಟಿನಲ್ಲಿ ನಮ್ಮದೆಲ್ಲ ಅಳಿಲು ಸೇವೆ ಈ ರೀತಿ ಕಾರ್ಯಕ್ರಮ ಮಾಡುವ ಮೂಲಕ ನಮ್ಮ ಅಳಿಲು ಸೇವೆ ಸಲ್ಲಿಸಬೇಕೆಂದು ಈರಣ್ಣ ಕಡಾಡಿ ವಿನಂತಿ ಮಾಡಿದರು.
ರಾಜ್ಯ ಬಿಜೆಪಿ ರೈತ ಮೋರ್ಚಾ ಇಡಿ ರಾಜ್ಯಾದ್ಯಂತ 71 ಸ್ಥಳಗಳಲ್ಲಿ ಸಾಧ್ಯವಾದಷ್ಟು ಮಟ್ಟಿಗೆ ನದಿ ಸ್ವಚ್ಛತೆ ಮಾಡುವ ಕಾರ್ಯಕ್ರಮ ಮತ್ತು ಸಸಿ ನೆಡುವ ಕಾರ್ಯಕ್ರಮ ಮಾಡುವ ಮೂಲಕ ನಾವು ಜನರಲ್ಲಿ ಜಾಗೃತಿಯನ್ನು ಉಂಟು ಮಾಡುತ್ತಿದ್ದೇವೆ. ಎಲ್ಲರೂ ಇದಕ್ಕೆ ಕೈ ಜೋಡಿಸಿದರೆ ಈ ಕಾರ್ಯಕ್ರಮ ಹೆಚ್ಚು ಯಶಸ್ವಿಯಾಗುತ್ತದೆ ಅದಕ್ಕೆ ಜನರು ಭಾಗವಹಿಸುವ ಮೂಲಕ ಕೈ ಜೋಡಿಸಬೇಕೆಂದು ಕರೆ ನೀಡಿದರು.
ಬೆಳಗಾವಿ ಗ್ರಾಮೀಣ ಬಿಜೆಪಿ ರೈತ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆನಂದ ಮೂಡಲಗಿ, ಅರಭಾವಿ ಮಂಡಳ ಅಧ್ಯಕ್ಷ ಮಹಾದೇವ ಶೆಕ್ಕಿ, ರೈತ ಮೋರ್ಚಾ ಅಧ್ಯಕ್ಷ ತಮ್ಮಣ್ಣ ದೇವರ, ಪ್ರಧಾನ ಕಾರ್ಯದರ್ಶಿ ಶ್ರೀಕಾಂತ ಕೌಜಲಗಿ, ಮಂಡಲ ಪ್ರಧಾನ ಕಾರ್ಯದರ್ಶಿ ಮಹಾಂತೇಶ ಕುಡಚಿ, ಎಸ್.ಸಿ ಮೋರ್ಚಾ ಅಧ್ಯಕ್ಷ ನಾಗರಾಜ ಕುದರಿ, ಬಸವರಾಜ ಹುಳ್ಳೇರ, ತವನಪ್ಪ ಬೆನ್ನಾಡಿ, ಲಕ್ಕಪ್ಪ ತಹಶೀಲ್ದಾರ, ಚಿದಾನಂದ ದೆಮಶೆಟ್ಟಿ, ಸಂತೋಷ ಹುಂಡೇಕರ, ರವಿ ಪತ್ರಾವಳಿ, ಕೇದಾರಿ ಭಸ್ಮೆ, ಭೀಮಶಿ ಬಂಗಾರಿ, ಬಸವರಾಜ ಗಾಡವಿ ಸೇರಿದಂತೆ ಕಾರ್ಯಕರ್ತರು ಉಪಸ್ಥಿತರಿದ್ದರು.


Spread the love

About inmudalgi

Check Also

ಬೆಟಗೇರಿ ಗ್ರಾಮದಲ್ಲಿ ಕಟ್ಟಾ ವಾರ ಆಚರಣೆ

Spread the loveಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಜನ-ಜಾನುವಾರುಗಳಿಗೆ ರೋಗ-ರುಜೀನ ಬರದಂತೆ ಹಾಗೂ ಸಕಾಲಕ್ಕೆ ಮಳೆಯಾಗದಿದ್ದ ಕಾರಣ ಮಳೆಗಾಗಿ ಇದೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ