Breaking News
Home / Recent Posts / ಮಾದಕ ವಸ್ತುಗಳದಂಥ ಪ್ರಕರಣಗಳ ನಿಷ್ಪಕ್ಷಪಾತ ತನಿಖೆಗೆ ಆಗ್ರಹಿಸಿ ಮನವಿ

ಮಾದಕ ವಸ್ತುಗಳದಂಥ ಪ್ರಕರಣಗಳ ನಿಷ್ಪಕ್ಷಪಾತ ತನಿಖೆಗೆ ಆಗ್ರಹಿಸಿ ಮನವಿ

Spread the love

ಮಾದಕ ವಸ್ತುಗಳದಂಥ ಪ್ರಕರಣಗಳ ನಿಷ್ಪಕ್ಷಪಾತ ತನಿಖೆಗೆ ಆಗ್ರಹಿಸಿ ಮನವಿ

ಮೂಡಲಗಿ: ರಾಜ್ಯದಲ್ಲಿ ಮಾದಕ ವಸ್ತುಗಳ ಸೇವನೆ, ಸಾಗಾಣಿಕೆ ಮತ್ತು ಪೂರೈಕೆಯ ನೂರಾರು ಪ್ರಕರಣಗಳು ವರದಿಯಾಗುತ್ತಿದ್ದು ದೊಡ್ಡ ಪ್ರಮಾಣದಲ್ಲಿಯೇ ಸಮಾಜಕ್ಕೆ ಡ್ರಗ್ಸ್ ಪೂರೈಕೆಯಾಗುತ್ತಿರುವುದು ಕಳವಳಕಾರಿ ವಿಚಾರವಾಗಿದೆ. ಮಾದಕ ವಸ್ತುಗಳಿಗೆ ಸಂಬಂಧಿಸಿದ ಅಪರಾಧ ಪ್ರಕರಣಗಳು ಗಂಭೀರವಾಗಿ ಪರಿಗಣಿಸಿ ಇದರ ನಿಯಂತ್ರಣಕ್ಕೆ ಸಂಬಂಧಿಸಿದಂತೆ ದಾಖಲಾಗುವ ಎಲ್ಲಾ ಪ್ರಕರಣಗಳಲ್ಲೂ ನಿಷ್ಪಕ್ಷಪಾತ ತನಿಖೆ ಮತ್ತು ಡ್ರಗ್ಸ್ ಜಾಲದಿಂದ ಸಮಾಜವನ್ನು ರಕ್ಷಿಸಬೇಕು ಎಂದು ಆಗ್ರಹಿಸಿ ಮೂಡಲಗಿ ತಹಶಿಲ್ದಾರ ಡಿ.ಜಿ.ಮಾಹಾತ ಅವರ ಮೂಲಕ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿಯ ಯೋಜನೆಯ ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆಯ ಪಧಾಧಿಕಾರಿಗಳು ಮನವಿಸಲ್ಲಿಸಿದರು.
ಮಾದಕ ವಸ್ತುಗಳ ಬಳಕೆಯ ದುಷ್ಪರಿಣಾಮಗಳ ಕುರಿತು ಯುವಜನರಲ್ಲಿ ಜಾಗೃತಿ ಮೂಡಿಸುವ ಮತ್ತು ಶಾಲಾ
ಕಾಲೇಜುಗಳಲ್ಲಿ ಮಾದಕ ವಸ್ತುಗಳ ಕರಾಳಹಸ್ತ ಚಾಚದಂತೆ ಎಚ್ಚರವಹಿಸಬೇಕಾಗಿದೆ. ವಿದ್ಯಾರ್ಥಿಗಳಿಗೆ ಮಾದಕ
ವಸ್ತುಗಳು ಪೂರೈಕೆಯಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದ್ದು, ಈ ಕುರಿತಂತೆ ಕೆಲ ಕಾಲೇಜು
ಆವರಣದ ಒಳಗೆ ಮತ್ತು ಹೊರಗೆ ಡ್ರಗ್ಸ್ ಅಪಾಯವನ್ನು ತಪ್ಪಿಸುವ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು, ಸಾಂಸ್ಕøತಿಕ ವಲಯದಲ್ಲೂ ಮಾದಕ ವಸ್ತುಗಳ ಬಳಕೆಯಾಗುತ್ತಿರುವುದು ದುರದೃಷ್ಟಕರವಾಗಿದೆ. ಅಂತರ್ಜಾಲವನ್ನೇ
ಬಳಸಿಕೊಂಡು ಡ್ರಗ್ಸ್ ವ್ಯವಹಾರದ ಕಳ್ಳಸಾಗಾಣಿಕೆ ಮತ್ತು ಮಾರಾಟ ದಂಧೆ ನಡೆಯುತ್ತಿರುವ ಪ್ರಕರಣಗಳು ಬೆಳಕಿಗೆ
ಬಂದಿದೆ. ಆದುದರಿಂದ ಸಿನಿಮಾ ಮತ್ತು ಸಾಂಸ್ಕೃತಿಕ ರಂಗದಲ್ಲಿ ಮಾದಕ ವಸ್ತುಗಳ ನಂಟಿರುವ ಜನರನ್ನು
ನಿಷ್ಪಕ್ಷಪಾತ ತನಿಖೆಗೆ ಒಳಪಡಿಸಿ ಕಾನೂನು ಕ್ರಮ ಕೈಗೊಳ್ಳಬೇಕು, ಮಾದಕ ವಸ್ತುಗಳ ವಿರುದ್ಧ ಮೂರು ದಶಕಗಳಿಂದ ನಿರಂತರ ಜಾಗೃತಿ, ಹೋರಾಟ ಮತ್ತು ಜನಾಂದೋಲನ ರೂಪಿಸಿ ಸ್ವಸ್ಥ ವ್ಯಸನಮುಕ್ತ ಸಮಾಜ ನಿರ್ಮಾಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಹಾಗೂ ಸಮಾನ ಮನಸ್ಕರ ಸಭೆಯನ್ನು ಕರೆದು ಮಾದಕ ವಸ್ತುಗಳ ಹತೋಟಿ ಮತ್ತು ನಿರ್ವಹಣೆಯ ಮಾರ್ಗೋಪಾಯಗಳ ಸಮಗ್ರ ಚರ್ಚೆ ನಡೆಸಿ ಅನುμÁ್ಠನ ಮಾಡಲು ಸರಕಾರ ಕ್ರಿಯಾಯೋಜನೆ ರೂಪಿಸಬೇಕೆನ್ನುವುದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ಆಶಯವಾಗಿದೆ ಎಂದು ಸರಕಾರಕ್ಕೆ ನೀಡಿ ಮನವಿಯಲ್ಲಿ ತಿಳಿಸಲಾಗಿದೆ
ಎಲ್ಲ ಅಂಶಗಳನ್ನು ಕಾರ್ಯರೂಪಕ್ಕೆ ತಂದು ಯುವಜನತೆ ಮತ್ತು ಸಮಾಜವನ್ನು ಮಾದಕ ವಸ್ತುಗಳ ಅಪಾಯದಿಂದ ರಕ್ಷಿಸಬೇಕು ಎಂದು ಮನವಿ ಮೂಲಕ ಆಗ್ರಹಿಸಿದರು.
ಈ ಸಮಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆಯ ಮೂಡಲಗಿ ತಾಲೂಕಾ ಯೋಜನಾಧಿಕಾರಿ ದೇವರಾಜ್ ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆಯ ಜಿಲ್ಲಾ ಉಪಾಧ್ಯಕ್ಷೆ ಶಿವಲೀಲಾ ಗಾಣಿಗೇರ ಸದಸ್ಯರಾದ ಭರಮಣ್ಣ ಉಪ್ಪಾರ, ಶಿವಶಂಕರ ಖಾನಾಪೂರ, ಈರಪ್ಪ ಸಂಡೂರ, ಶ್ರೀಶೈಲ್ ಢವಳೇಶ್ವರ ಇದ್ದರು


Spread the love

About inmudalgi

Check Also

ಮಾರುತಿ ಕೋಳಿ ಅವರಿಗೆ ರಾಷ್ಟ್ರೀಯ ಪರಶುರಾಮ ಪ್ರಶಸ್ತಿ ಪ್ರಧಾನ

Spread the love ಮಾರುತಿ ಕೋಳಿ ಅವರಿಗೆ ರಾಷ್ಟ್ರೀಯ ಪರಶುರಾಮ ಪ್ರಶಸ್ತಿ ಪ್ರಧಾನ ಮೂಡಲಗಿ: ಕೆರಳಾದ ಶ್ರೀ ಶಟ್ ಶಾಸ್ತ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ