ಮೂಡಲಗಿ: ಚೈತನ್ಯ ನವೋದಯ ತರಬೇತಿ ಕೇಂದ್ರದ ವಿದ್ಯಾರ್ಥಿನಿ ಅರ್ಪಿತಾ ಬಸವರಾಜ ಕಬ್ಬೂರ 2021-22 ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ನಡೆದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 6ನೇ ವರ್ಗದ ಪ್ರವೇಶ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಪ್ರಯುಕ್ತ ಶಾಲಾ ಆಡಳಿತ ಮಂಡಳಿ ಹಾಗೂ ತರಬೇತಿ ನೀಡಿದ ಶಿಕ್ಷಕರು ವಿದ್ಯಾರ್ಥಿನಿಯ ಮನೆಗೆ ತೆರಳಿ ವಿದ್ಯಾರ್ಥಿನಿಯನ್ನು ಸತ್ಕರಿಸಿ ಅಭಿನಂದಿಸಿದರು.
