ಬೆಟಗೇರಿ:ಪ್ರತಿಯೊಬ್ಬ ತಂದೆ-ತಾಯಿಂದಿರು ಬಾಲ್ಯ ವಿವಾಹಕ್ಕೆ ಕಡಿವಾಣ ಹಾಕಲು ಪ್ರಯತ್ನಿಸಬೇಕು. ಹೆಣ್ಣು ಮತ್ತು ಗಂಡು ತಾರತಮ್ಯ ಮಾಡದೇ ತಮ್ಮ ಮಕ್ಕಳಿಗೆ ಹೆಚ್ಚಿನ ವ್ಯಾಸಂಗದ ಶಿಕ್ಷಣ ಕೊಡಿಸಲು ಪಾಲಕರು ಮುಂದಾಗಬೇಕು. ಯಾರೂ ಕಾನೂನು ಬಾಹಿರ ಚಟುವಟಿಕೆಗಳನ್ನು ಕೈಗೊಳ್ಳಬಾರದು ಎಂದು ಗೋಕಾಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಎಸಿಡಿಪಿಒ ಶ್ರೀಮತಿ ಉಮಾ ಬಳ್ಳೋಳ್ಳಿ ಹೇಳಿದರು.
ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ಅ.21ರಂದು ನಡೆದ ಗೋಕಾಕ ತಾಲೂಕಾ ಕಾನೂನು ಸೇವೆಗಳ ಸಮಿತಿ, ಗೋಕಾಕ ನ್ಯಾಯವಾದಿಗಳ ಸಂಘ ಮತ್ತು ತಾಲೂಕಾ ಆಡಳಿತ ಹಾಗೂ ವಿವಿಧ ಇಲಾಖೆ, ಸಂಘ, ಸಂಸ್ಥೆಗಳ ಸಹಯೋಗದಲ್ಲಿ ಆಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ ಎನ್ಪಿಐಎಒ ಹಮ್ಮಿಕೊಂಡ ಕಾನೂನು ಅರಿವು ಮತ್ತು ನೆರವು ಅಭಿಯಾನದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿ, ಇಂದಿನ ಯುಗದಲ್ಲಿ ಕಾನೂನಿನ ಕುರಿತು ಪ್ರತಿಯೊಬ್ಬರೂ ಜ್ಞಾನ, ನೆರವು ಪಡೆದುಕೊಳ್ಳಬೇಕು ಎಂದರು.
ಬೆಟಗೇರಿ ಗ್ರಾಪಂ ಅಧ್ಯಕ್ಷೆ ಬಸವ್ವ ದೇಯಣ್ಣವರ ಅಧ್ಯಕ್ಷತೆ ವಹಿಸಿದ್ದರು. ಗೋಕಾಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮೇಲ್ವಿಚಾರಕಿ ಸುಮಿತ್ರಾ ದೇಸಾಯಿ ಮುಖ್ಯ ಅತಿಥಿಗಳಾಗಿ, ಸ್ಥಳೀಯ ಗ್ರಾಪಂ ಪಿಡಿಒ ಎಚ್.ಎನ್.ಭಾವಿಕಟ್ಟಿ, ಗ್ರಂಥಾಲಯ ಮೇಲ್ವಿಚಾರಕ ಬಸವರಾಜ ಪಣದಿ ಮಾತನಾಡಿದರು.
ಇಲ್ಲಿಯ ಗ್ರಾಪಂ ಕಾರ್ಯಾಲಯದಲ್ಲಿ ಆಯೋಜಿಸಿದ ಕಾನೂನು ಅರಿವು ಮತ್ತು ನೆರವು ಅಭಿಯಾನದ ಕಾರ್ಯಕ್ರಮದಡಿಯಲ್ಲಿ ಸ್ಥಳೀಯ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಬರುವ ವಿವಿಧ ಇಲಾಖೆ ಅಧಿಕಾರಿಗಳು ತಮ್ಮ ಇಲಾಖೆಯಿಂದ ಸಾರ್ವಜನಿಕರಿಗೆ ಸರ್ಕಾರದಿಂದ ದೊರಕುವ ವಿವಿಧ ಸಹಾಯ, ಸೌಲಭ್ಯಗಳ ಬಗ್ಗೆ ಸ್ಥಳೀಯರ ಜೋತೆ ಚರ್ಚಿಸಿ, ಹಲವಾರು ಪ್ರಯೋಜನಗಳನ್ನು ಪ್ರತಿಯೊಬ್ಬರೂ ಪಡೆದುಕೊಳ್ಳುವಂತೆ ಹಾಗೂ ಅದಾಲತ್ ಮಧ್ಯಸ್ಥಿಕೆಯ ಪ್ರಯೋಜನಗಳ ಕುರಿತು ಸಾರ್ವಜನಿಕರಿಗೆ ತಿಳಿಸಿದರು.
ಕುಲಗೋಡ ಪೊಲೀಸ್ ಠಾಣೆ ಎಎಸ್‍ಐ ಬಿ.ವೈ.ಅಂಬಿ, ಸ್ಥಳೀಯ ಬೀಟ್ ಪೊಲೀಸ್ ಪೇದೆ ಕಲ್ಮೇಶ ಬಾಗಲಿ, ಗ್ರಾಪಂ ಕಾರ್ಯದರ್ಶಿ ಗೌಡಪ್ಪ ಮಾಳೇದ, ಸುರೇಶ ಬಾಣಸಿ, ವಿಠಲ ಚಂದರಗಿ, ಶಿವಪ್ಪ ಐದುಡ್ಡಿ, ಈರಣ್ಣ ದಂಡಿನ, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕರು, ಮಹಿಳೆಯರು, ಗ್ರಾಪಂ ಸದಸ್ಯರು, ಸಿಬ್ಬಂದಿ, ಗಣ್ಯರು, ಸ್ಥಳೀಯರು ಇದ್ದರು.
