ಬೆಟಗೇರಿ:ಗ್ರಾಮದ ಗ್ರಾಮ ಪಂಚಾಯತಿ ವತಿಯಿಂದ 2020-21ನೇ ಸಾಲಿನ 15 ನೇ ಹಣಕಾಸಿನ ಯೋಜನೆಯ ಸುಮಾರು 1.65 ಲಕ್ಷ ರೂಪಾಯಿಗಳ ಅನುದಾನದಡಿಯಲ್ಲಿ ಸ್ಥಳೀಯ ಡಾ.ಅಂಬೇಡ್ಕರ್ ವೃತ್ತದಲ್ಲಿ ಹೈ ಮಾಸ್ಕ್ ದೀಪ ಅಳವಡಿಕೆ ಕಾಮಗಾರಿ ಇಚೆಗೆ ನಡೆಯಿತು.
ಗ್ರಾಪಂ ಪಿಡಿಒ ಎಚ್.ಎನ್.ಭಾವಿಕಟ್ಟಿ ಮಾತನಾಡಿ, ಗ್ರಾಮದ ಸಮಗ್ರ ಅಭಿವೃದ್ಧಿಗೆ ಗ್ರಾಪಂ ಅಧ್ಯಕ್ಷರು, ಸದಸ್ಯರು, ಸಿಬ್ಬಂದಿ, ಹಿರಿಯ ನಾಗರಿಕರು ಹಾಗೂ ಸ್ಥಳೀಯರು ನೀಡುತ್ತಿರುವ ಸಹಕಾರ ಶ್ಲಾಘನೀಯವಾಗಿದೆ. ಇಲ್ಲಿಯ ಗ್ರಾಪಂ ಸಹಯೋಗದಲ್ಲಿ ಸ್ಥಳೀಯರಿಗೆ ಅವಶ್ಯಕವಾದ ಮೂಲಭೂತ ಸಹಾಯ, ಸೌಲಭ್ಯಗಳನ್ನು ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.
ಗ್ರಂಥಾಲಯ ಮೇಲ್ವಿಚಾರಕ ಬಸವರಾಜ ಪಣದಿ, ಗ್ರಾಪಂ ಕಾರ್ಯದರ್ಶಿ ಗೌಡಪ್ಪ ಮಾಳೇದ, ಸುರೇಶ ಬಾಣಸಿ, ವಿಠಲ ಚಂದರಗಿ, ಶಿವಪ್ಪ ಐದುಡ್ಡಿ, ಈರಣ್ಣ ದಂಡಿನ, ಗ್ರಾಪಂ ಸದಸ್ಯರು, ಸಿಬ್ಬಂದಿ, ಗಣ್ಯರು, ಸ್ಥಳೀಯರು ಇದ್ದರು.
