ಬೆಟಗೇರಿ:ಕನ್ನಡದ ಶ್ರೇಷ್ಠತೆಯನ್ನು ಸಾರುವುದು, ಮಕ್ಕಳು ಸೇರಿದಂತೆ ಎಲ್ಲರೂ ಕನ್ನಡ ಪ್ರೇಮ ಮೆರೆಯಲು, ಕನ್ನಡಕ್ಕಾಗಿ ನಾವು ಅಭಿಯಾನದ ವಿಶೇಷತೆಯಾಗಿದೆ ಎಂದು ಬೆಟಗೇರಿ ಗ್ರಾಮ ಪಂಚಾಯತಿ ಪಿಡಿಒ ಎಚ್.ಎನ್.ಭಾವಿಕಟ್ಟಿ ಹೇಳಿದರು.
ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ವತಿಯಿಂದ ರಾಜ್ಯದಾದ್ಯಂತ ಹಮ್ಮಿಕೊಳ್ಳಲಾಗಿರುವ ಕನ್ನಡ ಗೀತಗಾಯನ ಕಾರ್ಯಕ್ರಮದ ಪ್ರಯುಕ್ತ ಬೆಟಗೇರಿ ಗ್ರಾಮ ಪಂಚಾಯತಿ, ಸ್ಥಳೀಯ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮತ್ತು ಹೆಣ್ಣು ಮಕ್ಕಳ ಶಾಲೆಯ ಸಹಯೋಗದಲ್ಲಿ ಅ.28ರಂದು ನಡೆದ ಗೀತಗಾಯನ ಪ್ರಸ್ತುತ ಪಡಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸ್ಥಳೀಯ ಗ್ರಾಪಂ ಗ್ರಂಥಾಲಯ ಮೇಲ್ವಿಚಾರಕ ಬಸವರಾಜ ಪಣದಿ ಪ್ರಾಸ್ತಾವಿಕವಾಗಿ ಮಾತನಾಡಿದರು. ದೈನಂದಿನ ವ್ಯವಹಾರಗಳಲ್ಲಿ ಕನ್ನಡ ಭಾಷೆ ಬಳಕೆ ಮಾಡುವ ಕುರಿತು ಪ್ರತಿಜ್ಞಾವಿಧಿ ಬೋಧಿಸುವ ಕಾರ್ಯಕ್ರಮ ನಡೆದ ಬಳಿಕ ಸ್ಥಳೀಯ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮತ್ತು ಹೆಣ್ಣು ಮಕ್ಕಳ ಶಾಲೆಯ ಮಕ್ಕಳಿಂದ ಗೀತ ಗಾಯನವನ್ನು ಪ್ರಸ್ತುತಪಡಿಸಿದರು.
ಗ್ರಾಪಂ ಕಾರ್ಯದರ್ಶಿ ಗೌಡಪ್ಪ ಮಾಳೇದ, ಸುರೇಶ ಬಾಣಸಿ, ಉಭಯ ಕನ್ನಡ ಶಾಲೆಗಳ ಮುಖ್ಯ ಶಿಕ್ಷಕರಾದ ವೈ.ಸಿ.ಶೀಗಿಹಳ್ಳಿ, ಆರ್.ಬಿ.ಬೆಟಗೇರಿ, ವಿಠಲ ಚಂದರಗಿ, ಶಿವಪ್ಪ ಐದುಡ್ಡಿ, ಗ್ರಾಪಂ ಅಧ್ಯಕ್ಷರು, ಸದಸ್ಯರು, ಸಿಬ್ಬಂದಿ, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕರು, ಶಾಲಾ ಶಿಕ್ಷಕರು, ಗ್ರಾಮಸ್ಥರು, ಇದ್ದರು.
