Breaking News
Home / Recent Posts / ಡಿಸೆಂಬರ್ 2021ರ ಅಂತ್ಯದ ವೇಳೆಗೆ 12,000 ಕಿ.ಮೀ ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣ ಪೂರ್ಣಗೊಳಿಸುವಿಕೆ ಗುರಿ

ಡಿಸೆಂಬರ್ 2021ರ ಅಂತ್ಯದ ವೇಳೆಗೆ 12,000 ಕಿ.ಮೀ ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣ ಪೂರ್ಣಗೊಳಿಸುವಿಕೆ ಗುರಿ

Spread the love

ಮೂಡಲಗಿ: ದೇಶದಾದ್ಯಂತ ಡಿಸೆಂಬರ್ 2021ರ ಅಂತ್ಯದ ವೇಳೆಗೆ 12,000 ಕಿ.ಮೀ ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣದ ಪೂರ್ಣಗೊಳಿಸುವಿಕೆ ಗುರಿಯನ್ನು ಹೊಂದಿದೆÀ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ ಗಡ್ಕರಿ ತಿಳಿಸಿದ್ದಾರೆ.
ಸಂಸತ್ತಿನ ಚಳಿಗಾಲ ಅಧಿವೇಶನದಲ್ಲಿ ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣದ ಪೂರ್ಣಗೊಳಿಸಲು ಸರ್ಕಾರ ತೆಗೆದುಕೊಂಡ ಕ್ರಮಗಳ ಕುರಿತು ಸಂಸದ ಈರಣ್ಣ ಕಡಾಡಿ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕರ್ನಾಟಕದ ಬೆಳಗಾವಿ ಜಿಲ್ಲೆಯಲ್ಲಿ ನಾಲ್ಕು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, ಅವುಗಳಲ್ಲಿ ಎರಡು ಟೆಂಡರ್ ಹಂತದಲ್ಲಿವೆ, ಒಂದನ್ನು ಟೆಂಡರ್ ನೀಡಲಾಗಿದೆ ಮತ್ತು ಒಂದು ಕಾಮಗಾರಿಯು ನಿರ್ಮಾಣ ಹಂತದಲ್ಲಿದ್ದು, ಇದನ್ನು ಜನವರಿ 2022 ರಲ್ಲಿ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ ಎಂದ ಸಚಿವರು ರಾಜ್ಯದಲ್ಲಿ 29 ಕಾಮಗಾರಿಯು ನಿರ್ಮಾಣ ಹಂತದಲ್ಲಿವೆ ಎಂದರು.
ಭೂಸ್ವಾಧೀನ, ಅತಿಕ್ರಮಣ ತೆಗೆಯುವಿಕೆ, ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಗಳು, ಉಪಯುಕ್ತತೆ ವರ್ಗಾವಣೆ, ಪರಿಸರ, ಅರಣ್ಯ, ವನ್ಯಜೀವಿ ಅನುಮತಿಗಳು, ಒಪ್ಪಂದದ ಸಮಸ್ಯೆಗಳು ಇತ್ಯಾದಿಗಳಂತಹ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಪೂರ್ಣಗೊಳಿಸುವಿಕೆಯ ಮೇಲೆ ಪರಿಣಾಮ ಬೀರುವ ವಿವಿಧ ಸಮಸ್ಯೆಗಳ ವಿಮರ್ಶಾತ್ಮಕತೆಯ ಆಧಾರದ ಮೇಲೆ ಸರ್ಕಾರ ಅಗತ್ಯ ಕ್ರಮಕೈಗೊಂಡಿದೆ ಎಂದರು.


Spread the love

About inmudalgi

Check Also

ತಂದೆ ತಾಯಿ ಮತ್ತು ಗುರು ಭಕ್ತಿ ವಿದ್ಯಾರ್ಥಿಗಳನ್ನು ಸನ್ಮಾರ್ಗಕ್ಕೆ ಕರೆದುಕೊಂದು ಹೋಗುತ್ತದೆ. ಮುಖ್ಯೋಪಾದ್ಯಾಯ — ಚಂದ್ರಕಾಂತ ಬಿ. ಪೂಜೇರಿ

Spread the loveಮೂಡಲಗಿ : ತಂದೆ ತಾಯಿ ಮತ್ತು ಗುರು ಭಕ್ತಿ ವಿದ್ಯಾರ್ಥಿಗಳನ್ನು ಸನ್ಮಾರ್ಗಕ್ಕೆ ಕರೆದುಕೊಂದು ಹೋಗುತ್ತದೆ ವಿದ್ಯಾರ್ಥಿಗಳು ತಂದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ