ವಸತಿ ನಿಲಯದಲ್ಲಿನ ಅವ್ಯೆವಸ್ಥೆಯನ್ನು ಖಂಡಿಸಿ ವಿದ್ಯಾರ್ಥಿಗಳಿಂದ ಧರಣಿ
ಮೂಡಲಗಿ: ಮೂಡಲಗಿಯ ಮೆಟ್ರಿಕ್ ನಂತರದ ವಿದ್ಯಾರ್ಥಿಗಳ ವಸತಿ ನಿಲಯದಲ್ಲಿನ ಅವ್ಯೆವಸ್ಥೆಯನ್ನು ಖಂಡಿಸಿ ಹಾಸ್ಟೆಲ್ ವಿದ್ಯಾರ್ಥಿಗಳು, ಉಪವಾಸ ಸತ್ಯಾಗ್ರಹದೊಂದಿಗೆ ಧರಣಿ ಕುಳಿತ ವಿಷಯ ತಿಳಿದು ಎಬಿವಿಪಿ ಮೂಡಲಗಿ ಶಾಖೆಯ ಕಾರ್ಯಕರ್ತರು ಧರಣಿ ಸತ್ಯಾಗ್ರಹದಲ್ಲಿ ತಾವು ಪಾಲ್ಗೊಂಡು ಬೆಂಬಲ ವ್ಯಕ್ತಪಡಿಸಿದರು.
ಸಮಾಜ ಕಲ್ಯಾಣ ಇಲಾಖೆ ಬೆಳಗಾವಿ ಜಂಟಿ ನಿರ್ದೇಶಕಿ ಡಾ.ಉಮಾ ಸಾಲಿಗೌಡರ ಪ್ರತಿಭಟನಾಸ್ಥಳಕ್ಕೆ ಬೇಟಿ ನೀಡಿ ಸಮಸ್ಯೆಗಳನ್ನು ಆಲಿಸಿ ವಸತಿ ನಿಲಯವನ್ನು ವಿಕ್ಷೀಸಿ ದುರಾವಸ್ಥೆಯನ್ನು ಅವಲೋಕಿಸಿದ ವಸತಿ ನಿಲಯಕ್ಕೆ ಅಧಿಕಾರಿಗಳಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿ ಕೊಡಬೇಕೆಂದು ತರಾಟೆಗೆ ತೆಗೆದುಕೊಂಡು.
ಎಬಿವಿಪಿ ಮೂಡಲಗಿ ಶಾಖೆಯ ವತಿಯಿಂದ ಹಾಸ್ಟೆಲ್ ನಲ್ಲಿ ಖಾಯಂ ನೇಮಕಾತಿ ಮತ್ತು ವಸತಿ ನಿಲಯದಲ್ಲಿ ಮುಂದಾಗಬೇಕಾದ ಅಭಿವೃದ್ಧಿ ಕಾರ್ಯಗಳನ್ನು ಪಟ್ಟಿ ಮಾಡಿ ಶೀಘ್ರವೇ ಕ್ರಮ ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ವಿದ್ಯಾರ್ಥಿಗಳ ಬೇಡಿಕೆಗಳಿಗೆ ಅಧಿಕಾರಿಗಳು ಸ್ಪಂದಿಸಿದರಿಂದ ಧರಣಿ ಉಪವಾಸ ಸತ್ಯಾಗ್ರಹ ಹಿಂತೆಗೆದುಕೊಂಡರು.
ಈ ಸಂಧರ್ಭದಲ್ಲಿ ಎಬಿವಿಪಿ ಸಂಘಟನೆಯ ಪ್ರಮುಖರಾದ ಮಲ್ಲು ಮುಕುಂದ, ಬಸವರಾಜ ಜೋಡಟ್ಟಿ, ಮಹಾದೇವ ನವಣಿ, ಸೂರಜ್ ರಬಕವಿ, ಗಿರೀಶ ಬಳಿಗಾರ, ಬಸವರಾಜ ಕೇಣಿ, ಗುರು ಹಿರೇಮಠ, ಶಿವು ಹಿರೇಮಠ ಸೇರಿದಂತೆ ಇನ್ನು ಅನೇಕ ಎಬಿವಿಪಿ ಕಾರ್ಯಕರ್ತರು ಹಾಗೂ ಹಾಸ್ಟೆಲ್ ವಿದ್ಯಾರ್ಥಿಗಳು ಹಾಜರಿದ್ದರು.