ಮೂಡಲಗಿ: ಬೆಳಗಾವಿ ಜಿಲ್ಲೆಗೆ ಪ್ರಧಾನ ಮಂತ್ರಿ ಆವಾಸ್ ನಗರ ಯೋಜನೆ (ಪಿ.ಎಂ.ಎ.ವಾಯ್-ಯು) ಅಡಿಯಲ್ಲಿ ಒಟ್ಟು 44,850 ಮನೆಗಳು ಮಂಜೂರಾಗಿದ್ದು, 27,887 ಮನೆಗಳು ನಿರ್ಮಾಣ ಹಂತದಲ್ಲಿದ್ದು, 18,400 ಮನೆಗಳನ್ನು ನಿರ್ಮಿಸಿ ಫಲಾನುಭವಿಗಳಿಗೆ ವಿತರಿಸಲಾಗಿದೆ ಎಂದು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ಸೋಮವಾರ ಡಿ.13 ರಂದು ಪತ್ರಿಕಾ ಹೇಳಿಕೆ ನೀಡಿರುವ ಈರಣ್ಣ ಕಡಾಡಿ ಅವರು ಸಂಸತ್ತಿನ ಚಳಿಗಾಲ ಅಧಿವೇಶನದಲ್ಲಿ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ಬೆಳಗಾವಿಯಲ್ಲಿ ಪ್ರಧಾನ ಮಂತ್ರಿ ಆವಾಸ್ ನಗರ ಯೋಜನೆ ಸ್ಥಿತಿ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಬೆಳಗಾವಿ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ಒಟ್ಟು 6,93,577 ಮನೆಗಳು ಮಂಜೂರಾಗಿದ್ದು, 4,66,100 ಮನೆಗಳು ನಿರ್ಮಾಣ ಹಂತದಲ್ಲಿದ್ದು, 2,47,291 ಮನೆಗಳನ್ನು ನಿರ್ಮಿಸಿ ಫಲಾನುಭವಿಗಳಿಗೆ ವಿತರಿಸಲಾಗಿದೆ ಮಾರ್ಚ 2022 ರವರೆಗೆ ಮಂಜೂರಾದ ಎಲ್ಲಾ ಮನೆಗಳನ್ನು ಪೂರ್ಣಗೋಳ್ಳಲಿವೆ ಎಂದು ಉತ್ತರಿಸಿದ್ದಾರೆ ಎಂದರು.
Check Also
‘ಮೂಡಲಗಿಯಲ್ಲಿ ನ.23-24 ರಂದು 16ನೇ ಜಿಲ್ಲಾ ಸಾಹಿತ್ಯ ಸಮ್ಮೇಳನ’
Spread the love‘ಮೂಡಲಗಿಯಲ್ಲಿ ನ.23-24 ರಂದು 16ನೇ ಜಿಲ್ಲಾ ಸಾಹಿತ್ಯ ಸಮ್ಮೇಳನ’ ಜನಮನ ಸೇಳೆದ ಕನ್ನಡ ಬುತ್ತಿ ಜಾತ್ರೆ ಕಾರ್ಯಕ್ರಮ …