Breaking News
Home / Recent Posts / ಡಿ.25ರಂದು ನಡೆಯಲಿದೆ ಮಾರುತಿ ದೇವರ ಗದ್ದುಗೆಗೆ ಮಹಾರುದ್ರಾಭಿಷೇಕ

ಡಿ.25ರಂದು ನಡೆಯಲಿದೆ ಮಾರುತಿ ದೇವರ ಗದ್ದುಗೆಗೆ ಮಹಾರುದ್ರಾಭಿಷೇಕ

Spread the love

ಬೆಟಗೇರಿ:ಗ್ರಾಮದ ಮಾರುತಿ ದೇವರ ಕಾರ್ತಿಕೋತ್ಸವ ಮತ್ತು ಪಲ್ಲಕ್ಕಿ ಉತ್ಸವ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಶನಿವಾರ ಡಿ.25ರಂದು ನಡೆಯಲಿವೆ.
ಬೆಳೆಗ್ಗೆ 6 ಗಂಟೆಗೆ ಮಾರುತಿ ದೇವರ ಗದ್ದುಗೆಗೆ ಮಹಾರುದ್ರಾಭಿಷೇಕ, ಮಹಾಪೂಜೆ, ಕುಂಕುಮ, ಎಲೆ ಪೂಜೆ ಜರುಗಿ, ಪುರ ಜನರಿಂದ ಪೂಜೆ, ನೈವೈದ್ಯ ಸಮರ್ಪನೆ, ರಾತ್ರಿ 8 ಗಂಟೆಗೆ ದೀಪೋತ್ಸವ, ಸಕಲ ವಾದ್ಯ ಮೇಳಗಳೊಂದಿಗೆ ಪಲ್ಲಕ್ಕಿ ಉತ್ಸವ, ಕಾಯಿ, ಕಾರಿಕ ಹಾರಿಸುವ, ಸಿಹಿ ಹಂಚುವದು ವೈಭವದಿಂದ ಜರುಗಲಿದೆ.
ಸ್ಥಳೀಯ ಕರಡಿ ಮಜಲು ತಂಡದವರಿಂದ ಕರಡಿ ಮತ್ತು ಕಣಿ ವಾದನ ನಡೆದು, ಮಹಾಪ್ರಸಾದ ಜರುಗಿ ಕಾರ್ಯಕ್ರಮ ಸಂಪನ್ನಗೊಳ್ಳಲಿದೆ. ಸ್ಥಳೀಯ ಹಾಗೂ ಸುತ್ತಲಿನ ಹಳ್ಳಿಗಳ ಗಣ್ಯರು, ವಿವಿಧ ಸಂಘ, ಸಂಸ್ಥೆಗಳ ಪದಾಧಿಕಾರಿಗಳು, ಅಧ್ಯಕ್ಷರು, ಸದಸ್ಯರು, ಸ್ಥಳೀಯರು, ಭಕ್ತರು ಆಗಮಿಸಲಿದ್ದಾರೆ ಎಂದು ಸ್ಥಳಿಯ ಮಾರುತಿ ದೇವರ ಕಾರ್ತಿಕೋತ್ಸವ ಮತ್ತು ಪಲ್ಲಕ್ಕಿ ಉತ್ಸವ ಆಚರಣಾ ಸಮಿತಿ ಪ್ರಕಟನೆಗೆ ತಿಳಿಸಿದೆ.


Spread the love

About inmudalgi

Check Also

ತಂದೆ ತಾಯಿ ಮತ್ತು ಗುರು ಭಕ್ತಿ ವಿದ್ಯಾರ್ಥಿಗಳನ್ನು ಸನ್ಮಾರ್ಗಕ್ಕೆ ಕರೆದುಕೊಂದು ಹೋಗುತ್ತದೆ. ಮುಖ್ಯೋಪಾದ್ಯಾಯ — ಚಂದ್ರಕಾಂತ ಬಿ. ಪೂಜೇರಿ

Spread the loveಮೂಡಲಗಿ : ತಂದೆ ತಾಯಿ ಮತ್ತು ಗುರು ಭಕ್ತಿ ವಿದ್ಯಾರ್ಥಿಗಳನ್ನು ಸನ್ಮಾರ್ಗಕ್ಕೆ ಕರೆದುಕೊಂದು ಹೋಗುತ್ತದೆ ವಿದ್ಯಾರ್ಥಿಗಳು ತಂದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ