ಭಾರತದ ಪಾಲಿಗೆ ಜ.26 ಅವಿಸ್ಮರಣೀಯ ದಿನ: ಲಕ್ಷ್ಮಣ ಚಂದರಗಿ
*ಬೆಟಗೇರಿ ಗ್ರಾಮದ ವಿವಿಧೆಡೆ 73 ನೇ ಗಣರಾಜ್ಯೋತ್ಸವ ಆಚರಣೆ *ಧ್ವಜಾರೋಹಣಕ್ಕೆ ಗೌರವ ಸಮರ್ಪನೆ
ಬೆಟಗೇರಿ:1947 ಆಗಸ್ಟ್ 15 ರಂದು ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದ್ದರೂ ಇಡೀ ದೇಶ ಸಂಪೂರ್ಣ ಸರ್ಕಾರದ ಹಿಡಿತಕ್ಕೆ ಬಂದಿರಲಿಲ್ಲ, ಭಾರತದ ಸಂವಿಧಾನ ಏನನ್ನು ಒಳಗೊಂಡಿರಬೇಕು ಎಂಬ ಬಗ್ಗೆಯಷ್ಟೇ ತಯಾರಿ ನಡೆದಿತ್ತು ಎಂದು ಬೆಟಗೇರಿ ಗ್ರಾಪಂ ಮಾಜಿ ಅಧ್ಯಕ್ಷ ಲಕ್ಷ್ಮಣ ಚಂದರಗಿ ಹೇಳಿದರು.
ಬೆಟಗೇರಿ ಗ್ರಾಮದ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ 73ನೇ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಗಾಂಧೀಜಿ, ಅಂಬೇಡ್ಕರ ಭಾವಚಿತ್ರಕ್ಕೆ ಪೋಜೆ ನೆರವೇರಿಸಿ ಮಾತನಾಡಿ, 1950ರ ನ.26 ರಂದು ದೇಶದ ಸಂವಿಧಾನವನ್ನು ಅಂಗೀಕರಿಸಲಾಗಿತ್ತು. ಆದರೆ ಜ.26ರಂದು ಇಡೀ ದೇಶಕ್ಕೆ ಅನ್ವಯವಾಗುವಂತೆ ಒಪ್ಪಿಕೊಳ್ಳಲಾಯಿತು. ಹೀಗಾಗಿ 1950 ರ ಜನೇವರಿ 26 ರಂದು ಭಾರತದ ಪಾಲಿಗೆ ಅವಿಸ್ಮರಣೀಯ ದಿನವಾಗಿದೆ ಎಂದರು.
ಗ್ರಾಪಂ ಅಧ್ಯಕ್ಷೆ ಬಸವ್ವ ದೇಯಣ್ಣವರ ಅವರು ಧ್ವಜಾರೋಹಣ ಮಾಡಿದ ಬಳಿಕ ಸಿಹಿ ಹಂಚಲಾಯಿತು, ಪಿಡಿಒ ಎಚ್.ಎನ್.ಬಾವಿಕಟ್ಟಿ, ಗ್ರಾಪಂ ಸದಸ್ಯರು, ಗಣ್ಯರು, ಗ್ರಾಪಂ ಸಿಬ್ಬಂದಿ, ಸ್ಥಳೀಯರು ಇದ್ದರು.
ಸರ್ಕಾರಿ ಪ್ರೌಢ ಶಾಲೆ: ಬೆಟಗೇರಿ ಗ್ರಾಮದ ವಿವಿಡಿ ಸರಕಾರಿ ಪ್ರೌಢ ಶಾಲೆಯಲ್ಲಿ 73ನೇ ಗಣರಾಜ್ಯೋತ್ಸವ ಸಂಭ್ರಮದಿಂದ ಆಚರಿಸಲಾಯಿತು.
ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ ಧ್ವಜಾರೋಹಣ ಮಾಡಿದರು. ಶಾಲೆಯ ಸ್ಕೌಟ್ ವಿದ್ಯಾರ್ಥಿಗಳಿಂದ ವಿಶೇಷ ಪರೇಡ್, ಧ್ವಜಾರೋಹಣಕ್ಕೆ ಗೌರವ ಸಮರ್ಪನೆ, ಗಣರಾಜ್ಯೋತ್ಸವ ಕುರಿತು ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ ಮಾತನಾಡಿದ ನಡೆದ ಬಳಿಕ ಸಿಹಿ ವಿತರಿಸಲಾಯಿತು. ಎಸ್‍ಡಿಎಮ್‍ಸಿ ಅಧ್ಯಕ್ಷರು, ಸದಸ್ಯರು, ಶಿಕ್ಷಕರು, ಸಿಬ್ಬಂದಿ ವಿದ್ಯಾರ್ಥಿಗಳು ಇದ್ದರು.
ನಾಗನೂರ ಸೌಹಾರ್ದ ಶಾಖೆ :ಬೆಟಗೇರಿ ಗ್ರಾಮದ ನಾಗನೂರ ಅರ್ಬನ್ ಕ್ರೆಡಿಟ್ ಸೌಹಾರ್ದ ಸಹಕಾರಿ ಶಾಖೆಯಲ್ಲಿ 73ನೇ ಗಣರಾಜ್ಯೋತ್ಸವ ಆಚರಿಸಲಾಯಿತು. ಸಲಹಾ ಸಮಿತಿ ಅಧ್ಯಕ್ಷ ಮಲ್ಲಪ್ಪ ಕಂಬಿ ಧ್ವಜಾರೋಹಣ ನೆರವೇರಿಸಿದರು. ಶಾಖಾ ವ್ಯವಸ್ಥಾಪಕ ಬಿ.ಬಿ.ಬಂಡಿ ಸೇರಿದಂತೆ ಸಲಹಾ ಸಮಿತಿ ಸದಸ್ಯರು, ಸಿಬ್ಬಂದಿ, ಗ್ರಾಮಸ್ಥರು ಇದ್ದರು.
ಬಸವೇಶ್ವರ ಸಹಕಾರಿ: ಬೆಟಗೇರಿ ಬಸವೇಶ್ವರ ಸೌಹಾರ್ದ ಸಹಕಾರಿಯಲ್ಲಿ 73ನೇ ಗಣರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು. ಸಹಕಾರಿಯ ಅಧ್ಯಕ್ಷ ಮಲ್ಲಿಕಾರ್ಜುನ ನೀಲಣ್ಣವರ ಧ್ವಜಾರೋಹಣ ನೆರವೇರಿಸಿದರು. ಶಾಲಾ ಮಕ್ಕಳಿಗೆ ಸಿಹಿ ವಿತರಿಸಲಾಯಿತು. ಸಹಕಾರಿಯ ಆಡಳಿತ ಮಂಡಳಿ ಸದಸ್ಯರು, ಮುಖ್ಯ ಕಾರ್ಯನಿರ್ವಾಹಕ ಈರಣ್ಣ ಸಿದ್ನಾಳ, ಸಿಬ್ಬಂದಿ, ಗಣ್ಯರು ಇದ್ದರು.
ಕನಕಶ್ರೀ ಸಂಘ :ಬೆಟಗೇರಿ ಗ್ರಾಮದ ಕನಕಶ್ರೀ ವಿವಿಧ ಉದ್ಧೇಶಗಳ ಸೌಹಾರ್ದ ಸಹಕಾರಿ ಸಂಘದಲ್ಲಿ 73ನೇ ಗಣರಾಜ್ಯೋತ್ಸವ ಆಚರಿಸಲಾಯಿತು. ಸಂಘದ ಅಧ್ಯಕ್ಷ ಹನುಮಂತ ವಡೇರ ಧ್ವಜಾರೋಹಣ ನೆರವೇರಿಸಿದರು. ಮುಖ್ಯ ಕಾರ್ಯನಿರ್ವಾಹಕ ರಮೇಶ ಹಾಲಣ್ಣವರ, ಆಡಳಿತ ಮಂಡಳಿ ಸದಸ್ಯರು, ಸಿಬ್ಬಂದಿ, ಗ್ರಾಮಸ್ಥರು ಇದ್ದರು.