Breaking News
Home / Recent Posts / ಶಿಕ್ಷಣದಿಂದ ಭವಿಷ್ಯ ರೂಪಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಕರೆ – ಪಿ.ಎಸ್.ಐ. ಶಾಂತಾ ಹಳ್ಳಿ

ಶಿಕ್ಷಣದಿಂದ ಭವಿಷ್ಯ ರೂಪಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಕರೆ – ಪಿ.ಎಸ್.ಐ. ಶಾಂತಾ ಹಳ್ಳಿ

Spread the love

ಶಿಕ್ಷಣದಿಂದ ಭವಿಷ್ಯ ರೂಪಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಕರೆ – ಪಿ.ಎಸ್.ಐ. ಶಾಂತಾ ಹಳ್ಳಿ

ಮೂಡಲಗಿ: ವಿದ್ಯಾರ್ಥಿಗಳು ಶಿಕ್ಷಣ ಪಡೆದು ಉತ್ತಮ ಭವಿಷ್ಯ ನಿರ್ಮಿಸಿಕೊಳ್ಳುವದರ ಜೊತೆಗೆ ಸ್ವಾವಲಂಬಿಗಳಾಗಿ ಬದುಕಬೇಕೆಂದು ಘಟಪ್ರಭಾ ಪಿ.ಎಸ್.ಐ. ಶಾಂತಾ ಹಳ್ಳಿ ಹೇಳಿದರು. ಅವರು ತುಕ್ಕಾನಟ್ಟಿಯ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಜಯಿ ಬೆಳಗಿಸಿ ಮಾತನಾಡುತ್ತಿದ್ದರು. ವಿದ್ಯಾರ್ಥಿ ಜೀವನದಲ್ಲಿ ಕಾನುನುಗಳನ್ನು ತಿಳಿದುಕೊಂಡು ಬಾಲ್ಯ ವಿವಾಹದಂತಹ ಪದ್ಧತಿಗಳಿಗ ಕಡಿವಾಣ ಹಾಕಿ ಉತ್ತಮ ಭವಿಷ್ಯ ನೀರ್ಮಿಸಿಕೊಂಡು ಸಮಾಜದಲ್ಲಿ ಉತ್ತಮ ನಾಗರಿಕರಾಗಿ ಬಾಳಬೇಕೆಂದು ಹೇಳಿದರು.

ಚಿಕ್ಕವರಿದ್ದಾಗ ಯಾವುದೇ ಆಕರ್ಷಣೆಗೆ ಒಳಗಾಗದೇ ಓದುವ ಹವ್ಯಾಸ ಬೆಳೆಸಿಕೊಂಂಡು ಜ್ಞಾನಾರ್ಜನೆ ಹೆಚ್ಚಿಸಿಕೊಳ್ಳಬೇಕೆಂದು ಕಿವಿಮಾತು ಹೇಳಿದರು.
ಇದೇ ಸಂದರ್ಭದಲ್ಲಿ ಶಾಲೆಯ ಎಲ್ಲ ಮಹಿಳಾ ಶಿಕ್ಷಕರನ್ನು ಹಾಗೂ ಅಕ್ಷರದಾಸೋಹ ಸಿಬ್ಬಂದಿಯನ್ನು ಉಡಿ ತುಂಬಿ ಗೌರವಿಸಲಾಯಿತು. ಹಾಗೂ ಘಟಪ್ರಭಾ ಪಿ.ಎಸ್.ಐ. ಶಾಂತಾ ಹಳ್ಳಿಯವರನ್ನು ಶಾಲೆಯವತಿಯಿಂದ ಗೌರವಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎ.ವ್ಹಿ.ಗಿರೆಣ್ಣವರ ಪ್ರ್ರಧಾನಗುರುಗಳು ವಹಿಸಿದ್ದರು. ಕಾರ್ಯಕ್ರಮದಲ್ಲಿ ಶಿಕ್ಷಕರಾದ ಲಕ್ಷ್ಮೀ ಹೆಬ್ಬಾಳ, ಪುಷ್ಪಾ ಭರಮದೆ, ಕುಸುಮಾ ಚಿಗರಿ, ವಿಮಲಾಕ್ಷಿ ತೋರಗಲ್ಲ, ಶೀಲಾ ಕುಲಕರ್ಣಿ, ಸಂಗೀತಾ ತಳವಾರ. ಶಂಕರ ಲಮಾಣಿ, ಕಿರಣ ಭಜಂತ್ರಿ, ಮಹಾದೇವ ಗೋಮಾಡಿ, ಮಂಜುನಾಥ ಕಮ್ಮಾರ ಉಪಸ್ಥಿತರಿದ್ದರು. ಶಿಕ್ಷಕ ಮಹಾದೇವ ಗೋಮಾಡಿ ಕಾರ್ಯಕ್ರಮ ನಿರೂಪಿಸಿದರು ಹಾಗೂ ವಂದಿಸಿದರು.


Spread the love

About inmudalgi

Check Also

ಬಸವರಾಜ ಪಾಟೀಲ ರಾಜ್ಯ ಮಟ್ಟದ ಗುಂಡು ಎಸೆತ ಸ್ಪರ್ಧೆಗೆ ಆಯ್ಕೆ

Spread the love ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಎಸ್.ವೈ.ಸಿ ಶಿಕ್ಷಣ ಸಂಸ್ಥೆಯ ಶ್ರೀ ಸದ್ಗುರು ಯಾಲ್ಲಾಲಿಂಗ ಸ್ವತಂತ್ರ ಪದವಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ