Breaking News
Home / Recent Posts / ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಮೂಡಲಗಿ ವಲಯದ ೭೦೪೧ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸುತ್ತಾರೆ

ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಮೂಡಲಗಿ ವಲಯದ ೭೦೪೧ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸುತ್ತಾರೆ

Spread the love

ಮೂಡಲಗಿ: ಪ್ರಸಕ್ತ ಸಾಲಿನ ೨೦೨೨ ರ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಮೂಡಲಗಿ ವಲಯದಲ್ಲಿ ೭೦೪೧ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸುತ್ತಿದ್ದು, ರಾಜ್ಯದಲ್ಲಿಯೇ ವಿನೂತನ ಕಾರ್ಯಚಟುವಟಿಕೆಗಳಿಂದ ಹೆಸರುವಾಸಿಯಾಗಿರುವದು ಸಂತಸದ ವಿಷಯವಾಗಿದೆ ಎಂದು ಬೆಳಗಾವಿ ಸಿಟಿಇ ಪ್ರಾಚಾರ್ಯರು ಹಾಗೂ ಸಹ ನಿರ್ದೇಶಕ ರಾಜೀಯ ನಾಯಕ ಅಭಿಪ್ರಾಯ ವ್ಯಕ್ತಪಡಿಸಿದರು.
ಅವರು ಮೂಡಲಗಿ ಶೈಕ್ಷಣಿಕ ವಲಯ ವ್ಯಾಪ್ತಿಯ ೮೧ ಪ್ರೌಢ ಶಾಲೆಗಳ ಮೇಲ್ವಿಚಾರಣೆ ಹಾಗೂ ೨೬ ಪರೀಕ್ಷಾ ಕೇಂದ್ರಗಳ ತಯಾರಿ ಕುರಿತು ಮಾತನಾಡಿ, ಪರೀಕ್ಷಾ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯಾಗಿ ತೊಂದರೆಯಾಗದ ನಿಟ್ಟಿನಲ್ಲಿ ಪೂರ್ವ ತಯಾರಿ ಮೆಚ್ಚುವಂತಹದು. ಗೋಗಲ್ ಮೀಟ್, ಟೇಲಿ ಗ್ರಾಂ ಸಂವನದ ಮೂಲಕ ಮುಖ್ಯ ಶಿಕ್ಷಕರು, ಶಿಕ್ಷಕರು, ವಿದ್ಯಾರ್ಥಿಗಳೊಂದಿಗೆ ನೇರ ಸಂಪರ್ಕ ಮಾಡಿ ಕುಂದು ಕೊರತೆ ಆಲಿಸಿದಾಗ ವಲಯದಲ್ಲಿನ ಸೂಕ್ಷಾö್ಮತಿ ಮಾಹಿತಿಗಳು ಲಭ್ಯವಾದವು. ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ, ಆಸನ ವ್ಯವಸ್ಥೆ, ಕೊಠಡಿ ಮೇಲ್ವಿಚಾರಕರ ಮಾಹಿತಿ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು,
ಈ ಸಂದರ್ಭದಲ್ಲಿ ಮೂಡಲಗಿ ಬಿಇಒ ಅಜಿತ ಮನ್ನಿಕೇರಿ, ಗೋಕಾಕ ಬಿಇಒ ಜಿ.ಬಿ. ಬಳಗಾರ, ಎಸ್.ಎಸ್.ಎಲ್.ಸಿ ತಾಲೂಕಾ ನೋಡಲ್ ಅಧಿಕಾರಿ ಸತೀಶ್.ಬಿ,.ಎಸ್, ಮೂಡಲಗಿ ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿ ವರ್ಗದವರು ಹಾಜರಿದ್ದರು.


Spread the love

About inmudalgi

Check Also

ಮಾರುತಿ ಕೋಳಿ ಅವರಿಗೆ ರಾಷ್ಟ್ರೀಯ ಪರಶುರಾಮ ಪ್ರಶಸ್ತಿ ಪ್ರಧಾನ

Spread the love ಮಾರುತಿ ಕೋಳಿ ಅವರಿಗೆ ರಾಷ್ಟ್ರೀಯ ಪರಶುರಾಮ ಪ್ರಶಸ್ತಿ ಪ್ರಧಾನ ಮೂಡಲಗಿ: ಕೆರಳಾದ ಶ್ರೀ ಶಟ್ ಶಾಸ್ತ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ