ಬೆಟಗೇರಿ:ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮತ್ತು ಹೆಣ್ಣು ಮಕ್ಕಳ ಶಾಲೆಯ 7ನೇ ತರಗತಿ ವಿದ್ಯಾರ್ಥಿಗಳ ಬಿಳ್ಕೂಡುವ ಸಮಾರಂಭ ಮಾ.22ರಂದು ಜರುಗಿತು.
ಜಿಲ್ಲಾ ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷ ಎಸ್.ಲೋಕನ್ನವರ ಜ್ಯೋತಿ ಬೆಳಗಿಸಿದರು. ಸ್ಥಳೀಯ ಪ್ರೌಢ ಶಾಲೆ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ಸಂಗಯ್ಯ ಹಿರೇಮಠ ಸಾನಿಧ್ಯ, ಶಾಲೆಯ ಮುಖ್ಯಶಿಕ್ಷಕ ವೈ.ಸಿ.ಶೀಗಿಹಳ್ಳಿ ಅಧ್ಯಕ್ಷತೆ ವಹಿಸಿದ್ದರು.

ಕಳೆದ ಸಾಲಿನಲ್ಲಿ ಶಾಲೆಗೆ ಪ್ರಥಮ,ದ್ವಿತೀಯ, ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳು, ವಿವಿಧ ವಲಯದಲ್ಲಿ ಸಾಧನೆಗೈದ ಶಾಲೆಯ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಬಳಿಕ ಶಾಲಾ ಮಕ್ಕಳಿಂದ ಭಾಷಣ, ವಿವಿಧ ವಲಯದ ಸೇವಾ ನಿವೃತ್ತರಿಗೆ, ಸಾಧಕರಿಗೆ, ಗಣ್ಯರನ್ನು ಶಾಲೆಯ ವತಿಯಿಂದ ಸತ್ಕರಿಸಿದರು.
ಸಿಆರ್‍ಸಿ ಬಿ.ಟಿ.ಪುಂಜಿ, ಈ.ಸಿ.ಕೊಣ್ಣೂರ, ಮೆಳೆಯ್ಯ ಹಿರೇಮಠ, ಬಸವರಾಜ ದೇಯಣ್ಣವರ, ಎಸ್‍ಡಿಎಮ್‍ಸಿ ಅಧ್ಯಕ್ಷರಾದ ರಮೇಶ ನೀಲಣ್ಣವರ, ಉದ್ದಪ್ಪ ಚಂದರಗಿ, ಸದಸ್ಯರು, ಶಿಕ್ಷಕರು, ಸ್ಥಳೀಯ ಸರ್ಕಾರಿ ಕಿರಿಯ ಪ್ರಾಥಮಿಕ ಕನ್ನಡ ಶಾಲೆಗಳ ಮುಖ್ಯ ಶಿಕ್ಷಕರು, ಶಿಕ್ಷಕರು, ಎಸ್‍ಡಿಎಮ್‍ಸಿ ಅಧ್ಯಕ್ಷರು, ಸದಸ್ಯರು, ಶಿಕ್ಷಣಪ್ರೇಮಿಗಳು, ಗಣ್ಯರು, ವಿದ್ಯಾರ್ಥಿಗಳು ಇದ್ದರು.
IN MUDALGI Latest Kannada News