ಮೂಡಲಗಿ : ತಾಲೂಕಿನ ಧರ್ಮಮಟ್ಟಿ ಗ್ರಾಮದ ಬಡ್ಡಿ ಸೆಂಟ್ರಲ್ ಶಾಲೆ 74ನೇ ಗಣರಾಜ್ಯೋತ್ಸವನ್ನು ಸಡಗರ, ಸಂಭ್ರಮಗಳಿಂದ ಆಚರಿಸಲಾಯಿತು.
ಸಂಸ್ಥೆಯ ಅಧ್ಯಕ್ಷರಾದ ಚೆನ್ನಬಸವರಾಜ ಬಡ್ಡಿಯವರು ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದ ಅವರು, ಜನವರಿ 26 ರಂದು ಆಚರಿಸಲಾಗುವ ಗಣರಾಜ್ಯೋತ್ಸವ ದಿನ ಪ್ರತಿ ಭಾರತೀಯನ ಪಾಲಿಗೆ ಹೆಮ್ಮೆಯ ದಿನವಾಗಿದೆ. ಸ್ವಾತಂತ್ರ್ಯ ದಿನಾಚರಣೆಯನ್ನು ಎಷ್ಟು ಸಂಭ್ರಮದಿಂದ ಆಚರಣೆ ಮಾಡಲಾಗುತ್ತದೆಯೋ, ಅಷ್ಟೇ ಸಂಭ್ರಮದಿಂದ ದೇಶದಲ್ಲಿ ಗಣರಾಜ್ಯೋತ್ಸವವನ್ನು ಆಚರಣೆ ಮಾಡಲಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಶಾಲಾ ಮಕ್ಕಳ ಹಾಗೂ ಶಿಕ್ಷಕರ ಕೈ ಬರೆಹದಿಂದ ಕೂಡಿದ “ಅಕ್ಷರ ದೀವಿಗೆ” ಎನ್ನುವ ಮ್ಯಾಗಜಿನ್ ಅನ್ನು ಬಿಡುಗಡೆ ಮಾಡಲಾಯಿತು.ಮಕ್ಕಳ ಕೈಬರೆಹದಿಂದ ಕೂಡಿದ ವಿಶೇಷವಾದ ಪುಸ್ತಕವಾಗಿದ್ದು, ಕಥೆ ,ಕವನ ಮತ್ತು ಚಿತ್ರಗಳನ್ನು ಒಳಗೊಂಡಿದವು.
ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿಗಳಾದ ಶಂಕರ ಡೊಣವಾಡ ಹಾಗೂ ಪ್ರಾಚಾರ್ಯರಾದ ಸಾಜು ಪಿ ರಾಜನ್, ಶಾಲಾ ಸಿಬ್ಬಂದಿ ವರ್ಗ, ಮಕ್ಕಳು ಹಾಗೂ ಪಾಲಕರು ಉಪಸ್ಥಿತರಿದ್ದರು.