Breaking News
Home / Recent Posts / ಅಂಗನವಾಡಿ ಕಾರ್ಯಕರ್ತೆಯರ/ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಅಂಗನವಾಡಿ ಕಾರ್ಯಕರ್ತೆಯರ/ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

Spread the love

 

ಅಂಗನವಾಡಿ ಕಾರ್ಯಕರ್ತೆಯರ/ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮೂಡಲಗಿ: ಅರಭಾವಿ ಶಿಸು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಖಾಲಿ ಇರುವ 18 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 79 ಸಹಾಯಕಿಯರ ಹುದ್ದೆಗಳಿಗೆ 19-35 ವರ್ಷದೊಳಗಿನ ಅರ್ಹ ಮಹಿಳಾ ಮತ್ತು ಮಹಿಳಾ ಲಿಂಗತ್ವ ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತಿಯುಳ್ಳ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ ಲಕೋಟೆಯಲ್ಲಿ ಶೀಲ್ಡ್ ಮಾಡಿ ಜುಲೈ 13 ರ ಸಂಜೆ 5:30 ರೊಳಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಅರಭಾವಿ ಕಚೇರಿ ಮೂಡಲಗಿ ಸರಕಾರಿ ಕನ್ನಡ ಮತ್ತು ಉರ್ದು ಶಾಲಾ ಆವರಣ ಪುರಸಭೆ ಹತ್ತಿರ ಮೂಡಲಗಿಯಲ್ಲಿ ಇಡಲಾದ ಶೀಲ್ಡ್ ಪೆಟ್ಟಿಗೆಯಲ್ಲಿ ಹಾಕಲು ತಿಳಿಸಿಲಾಗಿದೆ.

ವಿವರವಾದ ಅಧಿಸೂಚನೆಯನ್ನು/ಪ್ರಕಟಣೆಯನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಅರಭಾವಿ ಕಚೇರಿ ಮೂಡಲಗಿ ನೋಟಿಸ್ ಬೋರ್ಡಿನ ಮೇಲೆ ಹಾಗೂ ಆಯಾ ಗ್ರಾಮಗಳ ಗ್ರಾಪಂ/ಪಟ್ಟಣ ಪಂ/ಪುರಸಭೆ ಕಚೇರಿ ಹಾಗೂ ಪ್ರಾಥಮಿಕ ಶಾಲಾ/ಅಂಗನವಾಡಿ ಶಾಲಾ ನೋಟಿಸ್ ಬೋರ್ಡಿನ ಮೇಲೆ ಪ್ರಕಟಣೆಯನ್ನು ಅಟಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಅರಭಾವಿ ಕಚೇರಿ ಮೂಡಲಗಿ ಇವರನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ 08334-200367 ರ ಮುಖಾಂತರ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

About inmudalgi

Check Also

ಮಾರುತಿ ಕೋಳಿ ಅವರಿಗೆ ರಾಷ್ಟ್ರೀಯ ಪರಶುರಾಮ ಪ್ರಶಸ್ತಿ ಪ್ರಧಾನ

Spread the love ಮಾರುತಿ ಕೋಳಿ ಅವರಿಗೆ ರಾಷ್ಟ್ರೀಯ ಪರಶುರಾಮ ಪ್ರಶಸ್ತಿ ಪ್ರಧಾನ ಮೂಡಲಗಿ: ಕೆರಳಾದ ಶ್ರೀ ಶಟ್ ಶಾಸ್ತ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ