Breaking News
Home / inmudalgi (page 135)

inmudalgi

ಬೆಟಗೇರಿ ಗ್ರಾಮದಲ್ಲಿ ಸೆ.17 ರಂದು ಹೊನಲು ಬೆಳಕಿನ ಕಬ್ಬಡ್ಡಿ ಪಂದ್ಯಾವಳಿ

  ಬೆಟಗೇರಿ:ಅರಬಾಂವಿ ಮಂಡಲ ಭಾರತೀಯ ಜನತಾ ಪಾರ್ಟಿ ರೈತ ಮೋರ್ಚಾ ಹಾಗೂ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಶ್ರೀ ಗಜಾನನ ಯುವಕ ಮಂಡಳಿ ಇವರ ಸಂಯುಕ್ತ ಆಶ್ರಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟು ಹಬ್ಬದ ಪ್ರಯುಕ್ತ ಸ್ಥಳೀಯ ಸದ್ಗುರು ಯಲ್ಲಾಲಿಂಗ ಮಠದ ಆವರಣದಲ್ಲಿ ಸೆ.17ರಂದು ಸಂಜೆ 6 ಗಂಟೆಗೆ 55/58 ಕೆ.ಜಿ ಹೊನಲು ಬೆಳಕಿನ ಕಬ್ಬಡ್ಡಿ ಪಂದ್ಯಾವಳಿಗಳ ಉದ್ಘಾಟನೆ ಸಮಾರಂಭ ನಡೆಯಲಿದೆ. ರಾಜ್ಯ ಸಭಾ ಸದಸ್ಯ, ರಾಜ್ಯ ಬಿಜೆಪಿ …

Read More »

“ನಂದಿನಿ” ಹಾಲು ಪ್ರತಿ ಲೀ.ಗೆ 3 ರೂ. ಹೆಚ್ಚಳ…? ಕೆಎಂಎಫ್‍ನ ವಾರ್ಷಿಕ ಸರ್ವಸಾಧಾರಣ ಸಭೆಯಲ್ಲಿ ಒಮ್ಮತದ ನಿರ್ಣಯ

ಬೆಂಗಳೂರು : ಹೈನುಗಾರಿಕೆಗೆ ಹೆಚ್ಚಿನ ಒತ್ತು ನೀಡಲು ರೈತರ ಆರ್ಥಿಕಾಭಿವೃದ್ಧಿಗೆ ಪ್ರತಿ ಲೀಟರ್ ಹಾಲಿಗೆ 3 ರೂ. ಹೆಚ್ಚಳ ಮಾಡಲು ಕೆಎಂಎಫ್ ನಿರ್ಧರಿಸಿದೆ ಎಂದು ತಿಳಿದುಬಂದಿದೆ. ಕಳೆದ ಶುಕ್ರವಾರದಂದು ನಗರದ ಖಾಸಗಿ ಹೊಟೇಲ್‍ನಲ್ಲಿ ಜರುಗಿದ ಕೆಎಂಎಫ್‍ನ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ಈ ಬಗ್ಗೆ ಸರ್ವಾನುಮತದ ನಿರ್ಣಯ ಕೈಗೊಂಡಿದ್ದು, ಕೆಎಂಎಫ್‍ನ ಎಲ್ಲ 14 ಜಿಲ್ಲಾ ಹಾಲು ಒಕ್ಕೂಟಗಳು ಹಾಲಿನ ದರ ಹೆಚ್ಚಳ ಮಾಡುವುದರ ಬಗ್ಗೆ ಒಲುವು ತೋರಿವೆ ಎಂದು ಹೇಳಲಾಗುತ್ತಿದೆ. …

Read More »

ನೀಟ್ ಪರೀಕ್ಷೆಯಲ್ಲಿ ಗೋಕಾಕ ತಾಲೂಕಿನ ಕುಮಾರಿ ಪೂಜಾ ಉತ್ತಮ ಸಾಧನೆ

ಬೆಟಗೇರಿ: ಕಳೆದ ಜುಲೈ ತಿಂಗಳಲ್ಲಿ ಜರುಗಿದ ರಾಷ್ಟ್ರ ಮಟ್ಟದ ನೀಟ್ ಪರೀಕ್ಷೆಯಲ್ಲಿ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಕುಮಾರಿ ಪೂಜಾ ಸುರೇಶ ಮುಧೋಳ ಉತ್ತಮ ಸಾಧನೆ ಮಾಡಿದ್ದಾರೆ. ವೈದ್ಯಕೀಯ ಅರ್ಹತಾ ಪರೀಕ್ಷೆಯಲ್ಲಿ ಅವರು 720ರ ಪೈಕಿ 568 ಅಂಕ ಪಡೆದುಕೊಂಡು, ಗೋಕಾಕ ತಾಲೂಕು ಹಾಗೂ ಬೆಟಗೇರಿಗ್ರಾಮಕ್ಕೆ ಕೀರ್ತಿ ತಂದಿದ್ದಾಳೆ. ವಿದ್ಯಾರ್ಥಿನಿಯ ಈ ಸಾಧನೆಗೆ ಸ್ಥಳೀಯ ಹಾಗೂ ಸುತ್ತಲಿನ ಹಳ್ಳಿಗಳ ಶಿಕ್ಷಣ ಪ್ರೇಮಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Read More »

ನೀಟ್ ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದ ದೀಪಾ* *ಶಾಸಕ ಬಾಲಚಂದ್ರ ಜಾರಕಿಹೊಳಿ ಅಭಿನಂದನೆ

ಗೋಕಾಕ್: ಕಳೆದ ಜುಲೈ ತಿಂಗಳಲ್ಲಿ ಜರುಗಿದ ರಾಷ್ಟ ಮಟ್ಟದ ನೀಟ್ ಪರೀಕ್ಷೆಯಲ್ಲಿ ೭೨೦ ರ ಪೈಕಿ ೬೬೫ ಅಂಕಗಳನ್ನು ಪಡೆದು ಉತ್ತಮ ಸಾಧನೆ ಮಾಡಿದ್ದಾಳೆ. ತಾಲೂಕಿನ ನಲ್ಲಾನಟ್ಟಿ ಗ್ರಾಮದ ಕೆ.ವೈ. ಕುಳ್ಳೂರ ಪ್ರೌಢಶಾಲೆಯ ಹಳೆಯ ವಿದ್ಯಾರ್ಥಿನಿಯಾದ ದೀಪಾ, ಕನ್ನಡ ಮಾಧ್ಯಮದ ವಿದ್ಯಾರ್ಥಿನಿ ಎಂಬುದು ವಿಶೇಷ. ದೀಪಾ ಕುಳ್ಳೂರ ಸಾಧನೆಗೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ, ಕ್ಷೇತ್ರ ಶಿಕ್ಣಣಾಧಿಕಾರಿ ಅಜೀತ ಮನ್ನಿಕೇರಿ, ನಿವೃತ್ತ ಶಿಕ್ಷಕ ಕೆ.ವೈ.ಕುಳ್ಳೂರ ಸೇರಿದಂತೆ ಗ್ರಾಮದ ಹಲವು ಗಣ್ಯರು …

Read More »

ವಿದ್ಯುತ್ ವಿತರಣಾ ಕೇಂದ್ರದಲ್ಲಿ ಎರಡನೇ ತ್ರೈಮಾಸಿಕ ಕಾರ್ಯ ನಿರ್ವಹಣೇ

ಮೂಡಲಗಿ : 110/11 ಕೆವ್ಹಿ ಮೂಡಲಗಿ, 110/11 ಕೆವ್ಹಿ ನಾಗನೂರ, ಹಾಗೂ 110/11 ಕೆವ್ಹಿ ಮತ್ತು 33/11ಕೆವಿ ಯಾದವಾಡ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಎರಡನೇ ತ್ರೈಮಾಸಿಕ ಕಾರ್ಯ ನಿರ್ವಹಣೇಯನ್ನು ಕೈಗೋಳ್ಳುವದರಿಂದ ದಿ. ಸೆ 9 ರಂದು ಮುಂಜಾನೆ 10 ಘಂಟೆಯಿಂದ ಸಾಯಂಕಾಲ 5 ಘಂಟೆಯವರೆಗೆ ವಿದ್ಯುತ್ ಪೊರೈಕೆಯಲ್ಲಿ ವ್ಯತ್ಯಯ ಉಂಟಾಗುತ್ತದೆ. ಆದ್ದರಿಂದ 110/11 ಕೆವ್ಹಿ ಮೂಡಲಗಿ, 110/11 ಕೆವ್ಹಿ ನಾಗನೂರ ಹಾಗೂ 110/11 ಕೆವ್ಹಿ ಮತ್ತು 33/11ಕೆವ್ಹಿ ಯಾದವಾಡ ವಿದ್ಯುತ್ …

Read More »

ಉಮೇಶ ಕತ್ತಿ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಅರಣ್ಯ ಹಾಗೂ ಆಹಾರ ಸಚಿವರಾಗಿದ್ದ ಉಮೇಶ ಕತ್ತಿ ಅವರ ನಿಧನದ ಹಿನ್ನೆಲೆಯಲ್ಲಿ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕತ್ತಿಯವರ ಬೆಲ್ಲದ ಬಾಗೇವಾಡಿ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಗುರುವಾರದಂದು ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದಲ್ಲಿರುವ ನಿವಾಸದಲ್ಲಿ ದಿ.ಉಮೇಶ ಕತ್ತಿ ಅವರ ಭಾವಚಿತ್ರಕ್ಕೆ ನಮನ ಸಲ್ಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮೃತ ಉಮೇಶ ಕತ್ತಿ ಸಹೋದರ ರಮೇಶ …

Read More »

ಎಲ್ಲರೊಂದಿಗೆ ಬೆರೆಯುವ ಅಜಾತಶತ್ರು ಉಮೇಶ ಕತ್ತ

  ಮೂಡಲಗಿ: ಸಚಿವ ಉಮೇಶ ಕತ್ತಿ ಅವರ ನಿಧನಕ್ಕೆ ಕರ್ನಾಟಕ ರಾಜ್ಯ ಬಣಜಿಗ ಕ್ಷೇಮಾಭಿವೃದ್ಧಿ ಸಂಘದ ಮೂಡಲಗಿ ಘಟಕದಿಂದ ಶ್ರದ್ಧಾಂಜಲಿಯನ್ನು ಅರ್ಪಿಸಿದರು. ಈ ಸಂದರ್ಭದಲ್ಲಿ ನುಡಿ ನಮನ ಸಲ್ಲಿಸಿದ ಬಾಲಶೇಖರ ಬಂದಿ ಹಾಗೂ ಎ.ಜಿ. ಶರಣಾರ್ಥಿ ಮಾತನಾಡಿ ‘ಉಮೇಶ ಕತ್ತಿ ಅವರು ಅಪ್ರತಿಮ ರಾಜಕಾರಣಿಯಾಗಿದ್ದರು. ಜನಪರ ಕಾರ್ಯಗಳನ್ನು ಮಾಡುವ ಮೂಲಕ ನಾಡಿನ ಹೃದಯದಲ್ಲಿ ಶಾಶ್ವತವಾಗಿ ಉಳಿದುಕೊಂಡಿದ್ದಾರೆ’ ಎಂದರು. ‘ಎಲ್ಲರೊಂದಿಗೆ ಬೆರೆಯುವ ಅಜಾತಶತ್ರುವಾಗಿದ್ದ ಅವರ ನಿಧನದಿಂದ ಸಮಾಜಕ್ಕೆ ಹಾಗೂ ನಾಡಿಗೆ ತುಂಬಲಾರದಷ್ಟು …

Read More »

ಸೆ.12ರಂದು ಬೆಟಗೇರಿ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸರ್ವ ಸಾಧಾರಣ ಸಭೆ

ಬೆಟಗೇರಿ: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಹಾಲು ಉತ್ಪಾದಕರ ಸಹಕಾರಿ ಸಂಘದ ಸನ್ 2021-22ನೇ ಸಾಲಿನ ವಾರ್ಷಿಕ ಸರ್ವ ಸಾಧಾರಣ ಸಭೆ ಸಂಘದ ಅಧ್ಯಕ್ಷ ಹನುಮಂತ ಪಾಟೀಲ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ಸೆ.12ರಂದು ಮುಂಜಾನೆ 11ಗಂಟೆಗೆ ಸಂಘದ ಕಾರ್ಯಾಲಯದಲ್ಲಿ ನಡೆಯಲಿದೆ. ಸಂಘದ ವಾರ್ಷಿಕ ಆಯಾ-ವ್ಯಯ ಅನುಮೋದನೆ, ಕಾರ್ಯ ಚಟುವಟಿಕೆ, ವಾರ್ಷಿಕ ವರದಿ, 2021-22ನೇ ಸಾಲಿನ ನಿವ್ಹಳ ಲಾಭದ ವಿಭಾಗಣೆ, ಇತರೆ ಸಹಕಾರ ಸಂಘಗಳಲ್ಲಿ ಸಂಘದ ಸದಸ್ಯತ್ವದ ಅನುಮೋದನೆ ಸೇರಿದಂತೆ 27 …

Read More »

ಸುಜ್ಞಾನದ ಬೆಳಕು ನೀಡುವ ಶಕ್ತಿ ಸದ್ಗುರುವಿನಲ್ಲಿದೆ: ಇಂಚಲದ ಡಾ. ಶಿವಾನಂದ ಭಾರತಿ ಮಹಾಸ್ವಾಮಿಜಿ

ಬೆಟಗೇರಿ:ಪ್ರತಿಯೊಬ್ಬ ಮನುಷ್ಯನಲ್ಲಿರುವ ಅಜ್ಞಾನದ ಅಂಧಕಾರ ಕಳೆದು, ಸುಜ್ಞಾನದ ಬೆಳಕು ನೀಡುವ ಶಕ್ತಿ ಸದ್ಗುರುವಿನಲ್ಲಿದೆ. ಸದ್ಗುರುವಿನ ಕೃಪಾ ಆರ್ಶೀವಾದಕ್ಕೆ ಪಾತ್ರರಾಗಬೇಕು ಎಂದು ಇಂಚಲ ಸಾಧು ಸಂಸ್ಥಾನ ಮಠದ ಡಾ. ಶಿವಾನಂದ ಭಾರತಿ ಮಹಾಸ್ವಾಮಿಜಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಗಜಾನನ ವೇದಿಕೆಯಲ್ಲಿ ಇಚೆಗೆ ನಡೆದ 38ನೇ ಸತ್ಸಂಗ ಸಮ್ಮೇಳನ ಸಮಾರಂಭದ ದಿವ್ಯಸಾನಿಧ್ಯ ವಹಿಸಿ ಆಶೀರ್ವಚನ ನೀಡಿದ ಅವರು, ನಾವೆಲ್ಲರೂ ಮೊದಲು ಸದ್ಗುರುವಿನಿಂದ ಸುಜ್ಞಾನ ಪಡೆದು ಪುನೀತರಾಗೋಣ ಎಂದರು. ಹಳಕಟ್ಟಿಯ ನಿಜಗುಣ …

Read More »

ರಾಜ್ಯ ಮಟ್ಟದ ಟಗರಿನ ಪಂದ್ಯಾವಳಿ

ಮೂಡಲಗಿ: ರಾಜ್ಯ ಮಟ್ಟದ ಟಗರಿನ ಕಾಳಗಕ್ಕೆ ಅದ್ದೂರಿ ಚಾಲನೆ. ಟಗರಿನ ಕಾಳಗದಲ್ಲಿ ಸೊಲು ಗೆಲವು ಒಂದು ನಾಣ್ಯದ ಎರಡು ಮುಖಗಳಿದಂತೆ ಸೊತವರು ಕುಗ್ಗದೆ ಗೆದ್ದವರು ಹಿಗ್ಗದೆ ಆಟದ ಮನೊಬಾವ ಬೇಳಸಿಕೊಳಬೇಕು ಎಂದು ಮೂಡಲಗಿ ಪುರಸಭೆ ಅಧ್ಯಕ್ಷರಾದ ಹಣಮಂತ ಗುಡ್ಲಮನಿ ಹೇಳಿದರು. ಪಟ್ಟಣದ ಶಾಬಣ್ಣವರ ಗವಿತೋಟ ಶಾಲೆಯ ಮೈದಾನದಲ್ಲಿ ಗಣೇಶ ಚತುರ್ಥಿ ನಿಮಿತ್ಯವಾಗಿ ಹಮ್ಮಿಕೊಂಡಿದ ರಾಜ್ಯ ಮಟ್ಟದ ಟಗರಿನ ಕಾಳಗ ವೈಭವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ನಮ್ಮ ಭಾಗದ ಶಾಸಕರು …

Read More »