Breaking News
Home / inmudalgi (page 170)

inmudalgi

ವಿಕಲಚೇತನರಿಗೆ ದ್ವಿಚಕ್ರ ವಾಹನ ಹಸ್ತಾಂತರ – ಸಂಸದ ಈರಣ್ಣ ಕಡಾಡಿ

ಮೂಡಲಗಿ: ಭಗವಂತನ ಸೃಷ್ಠಿಯಲ್ಲಿ ವಿಕಲಚೇತನರಿಗೂ ಒಂದು ವಿಶಿಷ್ಠ ಶಕ್ತಿ ಇದ್ದೂ ಅವರು ಕೂಡಾ ಸ್ವಾವಲಂಬಿ ಜೀವನ ನಡೆಸುವಂತಾಗಲು ಸರ್ಕಾರ ಹಲವಾರು ಯೊಜನೆಗಳನ್ನು ಜಾರಿಗೆ ತಂದಿದೆ. ಯಾರು ವಿಕಲಚೇತನರಲ್ಲವೋ ಅಂತವರು ವಿಕಲಚೇತನರಿಗೆ ಆ ಯೋಜನೆಗಳ ಸದುಪಯೋಗವಾಗುವಂತೆ ಸಹಾಯ ಮಾಡಬೇಕೆಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು. ರವಿವಾರ ಮಾ-20 ರಂದು ಕಲ್ಲೋಳಿ ಪಟ್ಟಣದ ಸಂಸದರ ಜನಸಂಪರ್ಕ ಕಾರ್ಯಾಲಯದ ಆವರಣದಲ್ಲಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ವತಿಯಿಂದ ವಿಕಲಚೇತನ …

Read More »

ಕ್ಷೇತ್ರದ 22 ದೇವಸ್ಥಾನಗಳ ಅಭಿವೃದ್ಧಿಗಾಗಿ 2 ಕೋಟಿ ರೂ. ಅನುದಾನ ಬಿಡುಗಡೆ : ಬಾಲಚಂದ್ರ ಜಾರಕಿಹೊಳಿ ವಡೇರಹಟ್ಟಿಯಲ್ಲಿ ದೇವಸ್ಥಾನಗಳ ಕಮೀಟಿ ಪ್ರಮುಖರ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಕ್ಷೇತ್ರದ ದೇವಸ್ಥಾನಗಳ ಜೀರ್ಣೋದ್ಧಾರಕ್ಕಾಗಿ ಮುಜರಾಯಿ ಇಲಾಖೆಯಿಂದ 2 ಕೋಟಿ ರೂ. ಅನುದಾನ ಬಿಡುಗಡೆಗೊಂಡಿದ್ದು, ಕೂಡಲೇ ಅವುಗಳನ್ನು ಅಭಿವೃದ್ಧಿಗೊಳಿಸುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ವಡೇರಹಟ್ಟಿ ಗ್ರಾಮದ ಲಕ್ಷ್ಮೀದೇವಿ ದೇವಸ್ಥಾನದಲ್ಲಿ ಶುಕ್ರವಾರ ಸಂಜೆ ಜರುಗಿದ ಆಯಾ ಗ್ರಾಮದ ದೇವಸ್ಥಾನಗಳ ಕಮೀಟಿ ಪ್ರಮುಖರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಒಟ್ಟು 22 ದೇವಸ್ಥಾನಗಳ ಅಭಿವೃದ್ಧಿಗಾಗಿ 2 ಕೋಟಿ ರೂ. ಅನುದಾನ ಈಗಾಗಲೇ ಬಂದಿದೆ ಎಂದು ಹೇಳಿದರು. …

Read More »

100 ಕೋಟಿ ರೂ. ವೆಚ್ಚದಲ್ಲಿ ಕೌಜಲಗಿಯಲ್ಲಿ 220 ಕೆವ್ಹಿ ವಿದ್ಯುತ್ ವಿತರಣಾ ಕೇಂದ್ರ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಭರವಸೆ ಶುಕ್ರವಾರದಂದು ಗೋಸಬಾಳದಲ್ಲಿ 15 ಕೋಟಿ ರೂ. ವೆಚ್ಚದ 110/11 ಕೆವ್ಹಿ ವಿದ್ಯುತ್ ಉಪಕೇಂದ್ರವನ್ನು ಉದ್ಘಾಟಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

  ಗೋಕಾಕ : ರೈತರಿಗೆ ದಿನನಿತ್ಯ ಕನಿಷ್ಠ 10 ಗಂಟೆಗಳ ಕಾಲ ಸಮರ್ಪಕ ವಿದ್ಯುತ್ ಸರಬರಾಜು ಮಾಡಲು ಕೌಜಲಗಿಯಲ್ಲಿ 220 ಕೆವ್ಹಿ ವಿದ್ಯುತ್ ವಿತರಣಾ ಕೇಂದ್ರವನ್ನು ನಿರ್ಮಿಸಲು ಉದ್ಧೇಶಿಸಿದ್ದು, ಇದಕ್ಕಾಗಿ ನೂರು ಕೋಟಿ ರೂ. ವೆಚ್ಚದ ಅಂದಾಜು ಪತ್ರಿಕೆಯನ್ನು ತಯಾರಿಸಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಶುಕ್ರವಾರ ಸಂಜೆ ತಾಲೂಕಿನ ಗೋಸಬಾಳ ಗ್ರಾಮದ ಹೊರವಲಯದಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದಿಂದ 15 ಕೋಟಿ …

Read More »

‘ವಿದ್ಯಾರ್ಥಿಗಳಲ್ಲಿ ದೃಢ ಸಂಕಲ್ಪ, ಪರಿಶ್ರಮ ಬೇಕು’ ಸಾಹಿತಿ ಪ್ರೊ. ಚಂದ್ರಶೇಖರ ಅಕ್ಕಿ

  ‘ವಿದ್ಯಾರ್ಥಿಗಳಲ್ಲಿ ದೃಢ ಸಂಕಲ್ಪ, ಪರಿಶ್ರಮ ಬೇಕು’ ಮೂಡಲಗಿ: ‘ಪ್ರಸ್ತುತ ಸ್ಪರ್ಧಾತ್ಮಕ ಯುಗದಲ್ಲಿ ದೃಢ ಸಂಕಲ್ಪ, ಸತತ ಪರಿಶ್ರಮ, ನಿರಂತ ಅಧ್ಯಯನದಿಂದ ಪ್ರತಿಭಾನ್ವಿತ ವ್ಯಕ್ತಿಗಳಾಗಿ ರೂಪಗೊಳ್ಳಲು ಸಾಧ್ಯ’ ಎಂದು ಸಾಹಿತಿ ಪ್ರೊ. ಚಂದ್ರಶೇಖರ ಅಕ್ಕಿ ಅವರು ಹೇಳಿದರು. ತಾಲ್ಲೂಕಿನ ಪಿಜೆಎನ್ ಪ್ರೌಢ ಶಾಲೆಯ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು ಸಾಧಕ ವ್ಯಕ್ತಿಗಳ ಅದರ್ಶಗಳನ್ನು ಅನುಸರಿಸಿ ಶ್ರೇಷ್ಠ ವ್ಯಕ್ತಿಗಳಾಗಿರಿ ಎಂದು ಹೇಳಿದರು. ಅತಿಥಿ ಮೂಡಲಗಿ ತಾಲ್ಲೂಕು …

Read More »

ಶಾಂತಿ,ಸೌಹಾರ್ದತೆಯಿಂದ ಹೋಳಿ ಹಬ್ಬ ಆಚರಿಸಬೇಕು:ಪಿಎಸ್‍ಐ ಗೋವಿಂದಗೌಡ ಪಾಟೀಲ

ಶಾಂತಿ,ಸೌಹಾರ್ದತೆಯಿಂದ ಹೋಳಿ ಹಬ್ಬ ಆಚರಿಸಬೇಕು:ಪಿಎಸ್‍ಐ ಗೋವಿಂದಗೌಡ ಪಾಟೀಲ ಬೆಟಗೇರಿ:ಸ್ಥಳೀಯ ಸರ್ವ ಸಮುದಾಯದವರು ಶಾಂತಿ ಸೌಹಾರ್ದತೆಯಿಂದ ಹೋಳಿ ಹಬ್ಬ ಆಚರಿಸಬೇಕು. ಬಣ್ಣದಾಟದಲ್ಲಿ ನೈಸರ್ಗಿಕ ಬಣ್ಣ ಬಳಕೆ ಮಾಡಬೇಕು ಎಂದು ಕುಲಗೋಡ ಪೊಲೀಸ್ ಠಾಣೆ ಪಿಎಸ್.ಐ ಗೋವಿಂದಗೌಡ ಪಾಟೀಲ ಹೇಳಿದರು. ಬೆಳಗಾವಿ ಜಿಲ್ಲಾ ಪೊಲೀಸ್ ಇಲಾಖೆ, ಮೂಡಲಗಿ ಹಾಗೂ ಕುಲಗೋಡ ಪೊಲೀಸ್ ಠಾಣೆಯ ಸಹಯೋಗದಲ್ಲಿ ಹೋಳಿ ಹಬ್ಬದ ಪ್ರಯುಕ್ತ ಗೋಕಾಕ ತಾಲೂಕಿನ ಕೌಜಲಗಿ ಗ್ರಾಮದಲ್ಲಿ ಈಚೆಗೆ ನಡೆದ ಶಾಂತಿಪಾಲನಾ ಸಭೆಯಲ್ಲಿ ಮಾತನಾಡಿ, ಹೋಳಿ …

Read More »

ನೇತ್ರದಾನ ಹಾಗೂ ಅಂಗಾಂಗಳ ದಾನದ ಹೆಸರು ನೋಂದಣಿ ಕಾರ್ಯಕ್ರಮ

ಮೂಡಲಗಿ : ಮನುಷ್ಯನ ಪಂಚೇಂದ್ರಿಯಗಳಲ್ಲಿ ಕಣ್ಣು ಪ್ರಮುಖವಾದ್ದು, ಕಣ್ಣುದಾನ ಮಾಡುವ ಮೂಲಕ ಬೇರೊಬ್ಬರಿಗೆ ದೃಷ್ಟಿ ನೀಡಿ ಬಾಳು ಬೆಳಗಲು ಬಾಲಚಂದ್ರಣ್ಣಾ ಜಾರಕಿಹೋಳಿಯವರ ಅಭಿಮಾನಿಗಳು ಹಾಗೂ ಅಪ್ಪು ಅಭಿಮಾನಿಗಳು ಪುನೀತ ರಾಜಕುಮಾರ ಹುಟ್ಟುಹಬ್ಬದ ನಿಮಿತ್ಯ ಮಾಡುತ್ತಿರುವ ಕಾರ್ಯ ಶ್ಲಾಘನೀಯವಾಗಿದೆ ಎಂದು ಕೆಎಮ್‍ಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೋಳಿಯವರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಹೇಳಿದರು. ಗುರುವಾರದಂದು ಪಟ್ಟಣದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಕರ್ನಾಟಕ ರತ್ನ ಡಾ.ಪುನೀತ …

Read More »

ಸುಳ್ಳು ಹೇಳುತ್ತಿರುವ ಗಡಾದಗೆ ಜನರೇ ತಕ್ಕ ಪಾಠ ಕಲಿಸುತ್ತಾರೆ : ಢವಳೇಶ್ವರ-ಕೊಪ್ಪದ ಹೇಳಿಕೆ

ಸುಳ್ಳು ಹೇಳುತ್ತಿರುವ ಗಡಾದಗೆ ಜನರೇ ತಕ್ಕ ಪಾಠ ಕಲಿಸುತ್ತಾರೆ : ಢವಳೇಶ್ವರ-ಕೊಪ್ಪದ ಹೇಳಿಕೆ ಮೂಡಲಗಿ : ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕೆಲವರು ಅಭಿವೃದ್ಧಿ ಕಾರ್ಯಗಳಲ್ಲಿ ಉದ್ಧೇಶಪೂರ್ವಕವಾಗಿ ರಾಜಕಾರಣ ಮಾಡುತ್ತಿದ್ದಾರೆ. ರೈತರು ಮತ್ತು ಜನರ ದಾರಿ ತಪ್ಪಿಸುತ್ತಿರುವ ಇಂತಹ ಅಭಿವೃದ್ಧಿ ವಿರೋಧಿಗಳಿಗೆ ಶಾಸಕರು ಮಾಡಿರುವ ಪ್ರಗತಿಪರ ಕಾಮಗಾರಿಗಳು ಕಣ್ಣಿಗೆ ಕಾಣುವುದಿಲ್ಲವೇ ಎಂದು ಬಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಸುಭಾಸ ಢವಳೇಶ್ವರ ಮತ್ತು ಜಿಪಂ ಸದಸ್ಯ ಗೋವಿಂದ ಕೊಪ್ಪದ ಅವರು ಗಡಾದಗೆ ಪ್ರಶ್ನಿಸಿದ್ದಾರೆ. ಈ …

Read More »

ದಿ.ಪುನೀತ್ ರಾಜಕುಮಾರ್ ಅನಘ್ರ್ಯ ರತ್ನ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಪುನೀತ್ ರಾಜಕುಮಾರ್ ಹುಟ್ಟು ಹಬ್ಬದ ನಿಮಿತ್ಯ ಕೆಎಂಎಫ್ ಕಛೇರಿಯಲ್ಲಿ ರಕ್ತದಾನ ಶಿಬಿರ

ದಿ.ಪುನೀತ್ ರಾಜಕುಮಾರ್ ಅನಘ್ರ್ಯ ರತ್ನ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಪುನೀತ್ ರಾಜಕುಮಾರ್ ಹುಟ್ಟು ಹಬ್ಬದ ನಿಮಿತ್ಯ ಕೆಎಂಎಫ್ ಕಛೇರಿಯಲ್ಲಿ ರಕ್ತದಾನ ಶಿಬಿರ ಬೆಂಗಳೂರು : ಕೆಎಂಎಫ್ ನಂದಿನಿ ರಾಯಭಾರಿಯಾಗಿದ್ದ ಜನಪ್ರೀಯ ನಟ ದಿ. ಪುನೀತ್ ರಾಜಕುಮಾರ್ ಅವರು ಅಗಲಿ ಹೋಗಿದ್ದರೂ, ಇನ್ನೂ ಅವರ ನೆನಪು ಜನರ ಹೃದಯದಲ್ಲಿ ಶಾಶ್ವತವಾಗಿ ಇರುತ್ತದೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಇಲ್ಲಿಯ ಕೆಎಂಎಫ್ ಪ್ರಧಾನ ಕಛೇರಿಯಲ್ಲಿ ದಿ. ಪುನೀತ್ …

Read More »

ಹೋಳಿ ಹಬ್ಬದ ಪ್ರಯುಕ್ತ ವಿವಿಧ ಧಾರ್ಮಿಕ ಕಾರ್ಯಕ್ರಮಗಳು

ಬೆಟಗೇರಿ: ಗ್ರಾಮದಲ್ಲಿ ಹೋಳಿ ಹಬ್ಬದ ಪ್ರಯುಕ್ತ ಶುಕ್ರವಾರ ಮಾ.18ರಂದು ಮುಂಜಾನೆ ಹುಣ್ಣಿಮೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ಸಂಜೆ 7 ಗಂಟೆಗೆ ಇಲ್ಲಿಯ ಮಾರುಕಟ್ಟೆ ಆವರಣದಲ್ಲಿ ನಿರ್ಮಿಸಲಾದ ಕಾಮಣ್ಣನಿಗೆ ಪುರಜನರಿಂದ ಪೂಜೆ, ನೈವೆದ್ಯ ಸಮರ್ಪನೆ, ರಾತ್ರಿ 10 ಗಂಟೆಗೆ ಸ್ಥಳೀಯ ಪ್ರಮುಖ ಕಾಮದಹನ ಸ್ಥಳದಲ್ಲಿ ಸಂಗ್ರಹಿಸಿದ ಕುಳ್ಳ, ಕಟ್ಟಿಗೆ ಒಟ್ಟಿಗೆ ಸೇರಿಸಿ ಕಾಮದಹನಕ್ಕೆ ಕಾಮಣ್ಣನ ಪ್ರತಿಷ್ಠಾಪಿಸುವ ಕಾರ್ಯಕ್ರಮ ಜರುಗಲಿದೆ. ಶನಿವಾರ ಮಾ.19ರಂದು ಬೆಳಗ್ಗೆ 6 ಗಂಟೆಗೆ ಕಾಮ ದಹನ ಜರುಗಿದ ಬಳಿಕ …

Read More »

ರಾಷ್ಟ್ರೀಯ ಸೇವಾ ರತ್ನ ಪ್ರಶಸ್ತಿ ಪಡೆದ ರಮೇಶ ಅಳಗುಂಡಿ ಸಾಧನೆಗೆ ಮೆಚ್ಚುಗೆ

ರಾಷ್ಟ್ರೀಯ ಸೇವಾ ರತ್ನ ಪ್ರಶಸ್ತಿ ಪಡೆದ ರಮೇಶ ಅಳಗುಂಡಿ ಸಾಧನೆಗೆ ಮೆಚ್ಚುಗೆ ಬೆಟಗೇರಿ:ಬೆಳಗಾವಿ ರಾಷ್ಟ್ರೀಯ ಸಮಾಜ ಕಲ್ಯಾಣ ಸೇವಾ ಸಂಸ್ಥೆಯವರು ನೀಡುವ ಪ್ರಸಕ್ತ ವರ್ಷದ ರಾಷ್ಟ್ರೀಯ ಸೇವಾ ರತ್ನ ಪ್ರಶಸ್ತಿ ಪಡೆದ ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ ಅವರ ಸಾಧನೆಗೆ ಬೆಟಗೇರಿ ಗ್ರಾಪಂ ಮಾಜಿ ಅಧ್ಯಕ್ಷ ಈಶ್ವರ ಬಳಿಗಾರ ಸೇರಿದಂತೆ ಸ್ಥಳೀಯ ಗಣ್ಯರು, ಶಿಕ್ಷಣಪ್ರೇಮಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈರಯ್ಯ ಹಿರೇಮಠ, ಶ್ರೀಧರ ದೇಯಣ್ಣವರ, ಶ್ರೀಶೈಲ …

Read More »