ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಇಂದು ರಸ್ತೆ ಸಂಚಾರ ಸರಕ್ಷಾ ಅಭಿಯಾನ ಮೂಡಲಗಿ: ಇಲ್ಲಿಯ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರ ಹಾಗೂ ಪೊಲೀಸ್ ಇಲಾಖೆಯೊಂದಿಗೆ ನಾಳೆ ನ. 24ರಂದು ರಸ್ತೆ ಸಂಚಾರ ಸುರಕ್ಷಾ ಅಭಿಯಾನವನ್ನು ಏರ್ಪಡಿಸಿರುವರು. ನ. 24ರಂದು ಬೆಳಿಗ್ಗೆ 10ಕ್ಕೆ ಕಲ್ಮೇಶ್ವರ ವೃತ್ತದಲ್ಲಿ ಸಿಪಿಐ ವೆಂಕಟೇಶ ಮುರನಾಳ ಅಭಿಯಾನಕ್ಕೆ ಚಾಲನೆ ನೀಡುವರು. ಪಿಎಸ್‍ಐ ಮಲ್ಲಿಕಾರ್ಜುನ ಸಿಂಧೂರ, ಲಯನ್ಸ್ ಕ್ಲಬ್ ಅಧ್ಯಕ್ಷ ಪುಲಕೇಶ ಸೋನವಾಲಕರ ಹಾಗೂ ಲಯನ್ಸ್ ಕ್ಲಬ್ ಪರಿವಾರದ …
Read More »ಮಹಾದ್ವಾರ ಉದ್ಘಾಟಿಸಿ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ನೂತವಾಗಿ ನಿರ್ಮಿಸಲಾದ ಶಿವನ ಮೂರ್ತಿಯನ್ನು ಲೋಕಾರ್ಪಣೆ ಮಾಡಿ, ಶಿವನ ಮೂರ್ತಿಗೆ ಪೂಜೆ
ಮೂಡಲಗಿ : ಸಮೀಪದ ಹಳ್ಳೂರ ಗ್ರಾಮದ ಮಲ್ಲಿಕಾರ್ಜುನ ದೇವಸ್ಥಾನದ ನೂತನ ಮಹಾದ್ವಾರ ಉದ್ಘಾಟನೆ ನಿಮಿತ್ಯವಾಗಿ ಮಹಾಲಕ್ಷ್ಮೀ ದೇವಸ್ಥಾನದಿಂದ ಕುಂಭಮೇಳದೊಂದಿಗೆ ಶ್ರೀಶೈಲ ಜಗದ್ಗುರು ಡಾ. ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳ ಮೆರವಣಿಗೆ ಗ್ರಾಮದ ಪ್ರಮುಖ ಓಣಿಯಲ್ಲಿ ಜರುಗಿತು. ನಂತರ ಶ್ರೀಗಳು ಮಹಾದ್ವಾರ ಉದ್ಘಾಟಿಸಿ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ನೂತವಾಗಿ ನಿರ್ಮಿಸಲಾದ ಶಿವನ ಮೂರ್ತಿಯನ್ನು ಲೋಕಾರ್ಪಣೆ ಮಾಡಿ, ಶಿವನ ಮೂರ್ತಿಗೆ ಪೂಜೆ ಸಲ್ಲಿಸಿದರು. ಕಾರ್ಯಕ್ರಮದ ಸಾನಿಧ್ಯವಹಿಸಿದ ಶ್ರೀಗಳು ಮಾತನಾಡಿ, ಕಾಣದೇ ಇರುವ ದೇವರು ಇಲ್ಲ …
Read More »ಡಾ.ಬಿ.ಆರ್. ಅಂಬೇಡ್ಕರ ಬಾಲಕೀಯರ ವಸತಿ ಶಾಲೆಗೆ ಗುದ್ದಲಿ ಪೂಜೆ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ
ಶಿಕ್ಷಣದಿಂದ ಮಾತ್ರ ಸಮಾಜದ ಪರಿವರ್ತನೆ ಸಾಧ್ಯ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅರಭಾವಿಯಲ್ಲಿ 20.50 ಕೋಟಿ ರೂ. ವೆಚ್ಚದ ಡಾ.ಬಿ.ಆರ್. ಅಂಬೇಡ್ಕರ ಬಾಲಕೀಯರ ವಸತಿ ಶಾಲೆಗೆ ಗುದ್ದಲಿ ಪೂಜೆ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ಬಡ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದು ಎನ್ನುವ ಉದ್ಧೇಶದಿಂದ ಅಖಂಡ ಗೋಕಾಕ ತಾಲೂಕಿನಲ್ಲಿ ಇಲ್ಲಿಯವರೆಗೆ 15 ವಸತಿ ಶಾಲೆಗಳನ್ನು ಪ್ರಾರಂಭಿಸಿದ್ದು, ಇದರ ಮೂಲಕ ಬಡ ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಪೂರಕವಾಗಲಿದೆ ಎಂದು ಕೆಎಂಎಫ್ …
Read More »ಅರುಣ ಸವತಿಕಾಯಿಯವರಿಗೆ ಡಾಕ್ಟರೇಟ್ ಪ್ರಶಸ್ತಿ ಪ್ರಧಾನ
ಸವತಿಕಾಯಿ ಅವರಿಗೆ ಪಿಎಚ್‍ಡಿ ಪದವಿ ಮೂಡಲಗಿ : ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದಿಂದ ಬೇಟಗೇರಿ ಗ್ರಾಮದ ಮಾಜಿ ಜಿಪಂ ಸದಸ್ಯ ವಾಸುದೇವ ಸವತಿಕಾಯಿಯವರ ಹಿರಿಯ ಪುತ್ರ ಅರುಣ ಸವತಿಕಾಯಿಯವರಿಗೆ ಡಾಕ್ಟರೇಟ್ ಪ್ರಶಸ್ತಿ ಪ್ರಧಾನ ಮಾಡಿದ್ದಾರೆ. ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಪ್ರಕಾಶ ಎಸ್ ಕಟ್ಟಿಮನಿ ಅವರ ಮಾರ್ಗದರ್ಶನದಲ್ಲಿ ಕರ್ನಾಟಕದಲ್ಲಿ ರಾಜಕೀಯ ನಾಯಕತ್ವ, ಬಿ.ಎಸ್. ಯಡಿಯೂರಪ್ಪ ಅವರ ಒಂದು ಅಧ್ಯಯನ ಎಂಬ ಸಂಶೋಧನಾ ಮಹಾಪ್ರಬಂದವನ್ನು ಮಂಡಿಸಿದಕ್ಕೆ ರಾಣಿ …
Read More »ನ.23ರಂದು ದ್ವಾರಬಾಗಿಲು ಉದ್ಘಾಟನೆ ಹಾಗೂ ಮೂರ್ತಿ ಪ್ರತಿಷ್ಠಾಪನೆ
ನ.23ರಂದು ದ್ವಾರಬಾಗಿಲು ಉದ್ಘಾಟನೆ ಹಾಗೂ ಮೂರ್ತಿ ಪ್ರತಿಷ್ಠಾಪನೆ ಮೂಡಲಗಿ: ಸಮೀಪದ ಹಳ್ಳೂರ ಗ್ರಾಮದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಹೋಗುವ ಮಾರ್ಗದಲ್ಲಿ ನೂತವಾಗಿ ನಿರ್ಮಿಸಲಾದ ದ್ವಾರಬಾಗಿಲು ಉದ್ಘಾಟನೆ ಹಾಗೂ ಶ್ರೀ ಪರಮೇಶ್ವರ ಮೂರ್ತಿ ಪ್ರತಿಷ್ಠಾಪನಾ ಕಾರ್ಯಕ್ರಮ ನ.23ರಂದು ಜರುಗಲಿದೆ. ಈ ಕಾರ್ಯಕ್ರಮದ ಉದ್ಘಾಟಕರಾಗಿ ಶ್ರೀಶೈಲ ಜಗದ್ಗುರು ಡಾ. ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಆಗಮಿಸುವವರು ಮತ್ತು ಗ್ರಾಮ ಜನಪ್ರತಿನಿಧಿಗಳು ಹಾಗೂ ರಾಜಕೀಯ ಮುಖಂಡರು ಮತ್ತು ಬೇರೆ ಬೇರೆ ಹಳ್ಳಿಗಳಿಂದ ಭಕ್ತಾದಿಗಳು ಕಾರ್ಯಕ್ರಮದಲ್ಲಿ …
Read More »ಹಿಡಕಲ್ ಜಲಾಶಯದಿಂದ ಇಂದಿನಿಂದ 15 ದಿನಗಳವರೆಗೆ 6.80 ಟಿಎಂಸಿ ನೀರು ಬಿಡುಗಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ
ಹಿಡಕಲ್ ಜಲಾಶಯದಿಂದ ಇಂದಿನಿಂದ 15 ದಿನಗಳವರೆಗೆ 6.80 ಟಿಎಂಸಿ ನೀರು ಬಿಡುಗಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ ಜಿಎಲ್‍ಬಿಸಿಗೆ 2400 ಕ್ಯೂಸೆಕ್ಸ್, ಜಿಆರ್‍ಬಿಸಿಗೆ 2000 ಕ್ಯೂಸೆಕ್ಸ್ ಮತ್ತು ಸಿಬಿಸಿಗೆ 550 ಕ್ಯೂಸೆಕ್ಸ್ ನೀರು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರಿಗೆ ಸಮಸ್ತ ರೈತ ಬಾಂಧವರಿಂದ ಅಭಿನಂದನೆ ಘಟಪ್ರಭಾ : ಹಿಡಕಲ್ ಜಲಾಶಯದಿಂದ ಇಂದಿನಿಂದ 15 ದಿನಗಳವರೆಗೆ ರೈತರ ಕೃಷಿ ಜಮೀನುಗಳಿಗೆ ನೀರು ಹಾಯಿಸಲು 6.80 ಟಿಎಂಸಿ ನೀರು ಬಿಡುಗಡೆ ಮಾಡಲಾಗಿದೆ …
Read More »‘ಶುದ್ಧವಾದ ಭಕ್ತಿ ಹಾಗೂ ಭಕ್ತರ ಧಾರ್ಮಿಕ ಆಚರಣೆಗಳಿಂದ ಜಂಗಮ ಸಂಸ್ಕøತಿಯು ಉಳಿಯುತ್ತದೆ’
ಅಕಾಲಿಕವಾಗಿ ಇತ್ತಿಚೆಗೆ ನಿಧನರಾದ ಮೂಡಲಗಿಯ ಸದಾಶಿವ ಶೀಲವಂತ ಅವರಿಗೆ ಏರ್ಪಡಿಸಿದ್ದ ನುಡಿನಮನ ಹಾಗೂ ಸ್ವರ ಶ್ರದ್ಧಾಂಜಲಿ ಸಮಾರಂಭದಲ್ಲಿ ಭಾಗೋಜಿ, ಮುನ್ಯಾಳ, ರಂಗಾಪುರದ ಡಾ. ಶಿವಲಿಂಗ ಮುರುಘರಾಜೇಂದ್ರ ಶಿವಾಚಾರ್ಯ ಸ್ವಾಮೀಜಿಗಳು, ಸುಣಧೋಳಿಯ ಶಿವಾನಂದ ಸ್ವಾಮೀಜಿಗಳು ಭಾಗವಹಿಸಿದ್ದರು ಸದಾಶಿವ ಶೀಲವಂತ ಅವರಿಗೆ ನುಡಿನಮನ ಭಕ್ತರ ಆಚರಣೆಗಳಿಂದ ಜಂಗಮ ಸಂಸ್ಕøತಿ ಉಳಿಯುತ್ತದೆ ಮೂಡಲಗಿ: ‘ಶುದ್ಧವಾದ ಭಕ್ತಿ ಹಾಗೂ ಭಕ್ತರ ಧಾರ್ಮಿಕ ಆಚರಣೆಗಳಿಂದ ಜಂಗಮ ಸಂಸ್ಕøತಿಯು ಉಳಿಯುತ್ತದೆ’ ಎಂದು ಭಾಗೋಜಿಕೊಪ್ಪ, ಮುನ್ಯಾಳ, ರಂಗಾಪುರದ ಡಾ. ಶಿವಲಿಂಗ …
Read More »ಅಪ್ಪಟ ಗ್ರಾಮೀಣ ಕ್ರೀಡೆ, ಕಬಡ್ಡಿಗೆ ಪ್ರೋತ್ಸಾಹದ ಅವಸ್ಯವಿದೆ – ಸನತ ಜಾರಕಿಹೊಳಿ
ಅಪ್ಪಟ ಗ್ರಾಮೀಣ ಕ್ರೀಡೆ, ಕಬಡ್ಡಿಗೆ ಪ್ರೋತ್ಸಾಹದ ಅವಸ್ಯವಿದೆ – ಸನತ ಜಾರಕಿಹೊಳಿ ಮೂಡಲಗಿ: ಕಬಡ್ಡಿ ಆಟವು ಗ್ರಾಮೀಣ ಭಾಗದ ಅಪ್ಪಟ ಕ್ರೀಡೆಯಾಗಿದ್ದು ಕಬಡ್ಡಿ ಕ್ರೀಡಾಪಟುಗಳಿಗೆ ಹೆಚ್ಚಿನ ಪ್ರೋತ್ಸಾಹದ ಅವಸ್ಯವಿದ್ದು ಕ್ರೀಡಾಪಟುಗಳಿಗೆ ಪ್ರತಿಯೊಬ್ಬರು ಸಹಕಾರ ನೀಡುವಲ್ಲಿ ಮುಂದಾಗಕೇಂದು ಲಕ್ಷ್ಮೀ ಎಜ್ಯೂಕೇಷನ್ ಟ್ರಸ್ಟ್‍ನ ನಿದೇಶಕ ಸನತ ಜಾರಕಿಹೊಳಿ ಹೇಳಿದರು. ಗುರುವಾರ ತಾಲೂಕಿನ ರಂಗಾಪೂರ ಗ್ರಾಮದ ಭಾಗ್ಯವಂತಿ ದೇವಿ ಜಾತ್ರೆಯ ನಿಮಿತ್ಯ ಏರ್ಪಡಿಸಿದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿ ಉಧ್ಘಾಟಿಸಿ ಸನ್ಮಾನ ಸ್ವೀಕರಸಿ ಮಾತನಾಡಿದದರು. …
Read More »ನೆರೆ ಸಂತ್ರಸ್ತರಿಗೆ ಸೂಕ್ತ ಪರಿಹಾರಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ ಬೆಳಗಾವಿಯಲ್ಲಿ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿದ ಬಾಲಚಂದ್ರ ಜಾರಕಿಹೊಳಿ
ನೆರೆ ಸಂತ್ರಸ್ತರಿಗೆ ಸೂಕ್ತ ಪರಿಹಾರಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ ಬೆಳಗಾವಿಯಲ್ಲಿ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿದ ಬಾಲಚಂದ್ರ ಜಾರಕಿಹೊಳಿ ಬೆಳಗಾವಿ : ಕಳೆದ ವರ್ಷ ಪ್ರವಾಹ ಹಾಗೂ ನಿರಂತರ ಮಳೆಯಿಂದ ಹಾನಿಗೀಡಾಗಿರುವ ಸಂತ್ರಸ್ತರ ಕುಟುಂಬಗಳಿಗೆ 15 ದಿನಗಳೊಳಗಾಗಿ ವಸತಿ ಸೌಕರ್ಯ ಕಲ್ಪಿಸಿಕೊಡುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಜಿಲ್ಲಾಧಿಕಾರಿಗಳನ್ನು ಕೋರಿದರು. ನಗರದಲ್ಲಿ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿದ ಅವರು, ಗೋಕಾಕ ಮತ್ತು ಮೂಡಲಗಿ ತಾಲೂಕುಗಳ …
Read More »ರಾಷ್ಟ್ರೀಯ ಗ್ರಂಥಾಲಯ ಸಪ್ತಹ ಸಮಾರೋಪ ಕಾರ್ಯಕ್ರಮ
ಮೂಡಲಗಿ: ಪಟ್ಟಣದ ರ್ಸಾಜನಿಕ ಗ್ರಂಥಾಲಯದಲ್ಲಿ ಶುಕ್ರವಾರ ರಾಷ್ಟ್ರೀಯ ಗ್ರಂಥಾಲಯ ಸಪ್ತಹ ಸಮಾರೋಪ ಕಾರ್ಯಕ್ರಮ ಹಾಗೂ ಸದಸ್ಯರ ನೊಂದಣಿ ಕಾರ್ಯಕ್ರಮಕ್ಕೆ ಪತ್ರಕರ್ತರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಪತ್ರಕರ್ತ ಮಲ್ಲು ಬೊಳನವರ ಮಾತನಾಡಿ, ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕಾದೆ ಗ್ರಂಥಾಲಯಗಳು ಅವಶ್ಯಕ. ಶಿಕ್ಷಣದಲ್ಲಿ ಗ್ರಂಥಾಲಯವು ತನ್ನದೆ ಆದ ಮಹತ್ವ ಹೊಂದಿದೆ. ಪುಸ್ತಕಗಳು ಹಾಗೂ ಗ್ರಂಥಾಲಯ ಜೀವಂತ ದೇವಾಲಯಗಳು ಇದ್ದಂತೆ. ಜ್ಞಾನ ಭಂಡಾರವನ್ನು ಪಡೆದುಕೊಳ್ಳಲು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಓದುವ ಹವ್ಯಾಸ ಬೆಳಸಿಕೊಳ್ಳಬೇಕೆಂದು ಸಲಹೆ ನೀಡಿದರು. …
Read More »