Breaking News
Home / inmudalgi (page 32)

inmudalgi

ಬೆಟಗೇರಿ ಚೈತನ್ಯ ಗ್ರುಪ್ಸ್‍ನಿಂದ ಎಸ್‍ಎಸ್‍ಎಲ್‍ಸಿ ಸಾಧಕರಿಗೆ ಸನ್ಮಾನ

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಚೈತನ್ಯ ಗ್ರುಪ್ಸ್‍ನ ಬೆಟಗೇರಿ ಕೃಷ್ಣಶರ್ಮ ಚೈತನ್ಯ ಕನ್ನಡ ಮಾಧ್ಯಮ ಮತ್ತು ಶ್ರೀಮತಿ ಸತ್ತೆವ್ವ ದೇಯಣ್ಣವರ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ಸಂಯುಕ್ತಾಶ್ರಯದಲ್ಲಿ ಇತ್ತೀಚೆಗೆ ಪ್ರಸಕ್ತ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಸಾಧನೆಗೈದ ವಿವಿಧ ಪ್ರೌಢ ಶಾಲೆಯ ಸಾಧನೆಗೈದ ವಿದ್ಯಾರ್ಥಿಗಳ ಸನ್ಮಾನ ಕಾರ್ಯಕ್ರಮ ನಡೆಯಿತು. ಸ್ಥಳೀಯ ವ್ಹಿ.ವ್ಹಿ.ಡಿ ಸರಕಾರಿ ಪ್ರೌಢ ಶಾಲೆಯ ಕುಮಾರಿ ರುಪಾ ಕುರಬೇಟ 97% ಅಂಕಗಳನ್ನು ಗಳಿಸಿ ಪ್ರಥಮ ಸ್ಥಾನ, ಕುಮಾರಿ ಸವಿತಾ ಮುಧೋಳ …

Read More »

ಕನ್ನಡ ಸಾಹಿತ್ಯಕ್ಕೆ ಸ್ಪೂರ್ತಿ ನೀಡಿದ ಸಾಹಿತ್ಯ ಜನಪದ ಸಾಹಿತ್ಯವಾಗಿದೆ: ಟಿ.ಎಸ್.ಒಂಟಗೊಡಿ

ಬೆಟಗೇರಿ:ಎಲ್ಲ ಸಾಹಿತ್ಯಗಳಲ್ಲಿ ಜನಪದ ಸಾಹಿತ್ಯ ಸರಳ ಸುಂದರ ಹಾಗೂ ಶ್ರೀಮಂತ ಸಾಹಿತ್ಯವಾಗಿದೆ. ಜನಪದವೆಂಬುವುದು ವಿದ್ವಾಂಸರ ಪೆನ್ನಿನಿಂದ ಬಂದ ಸಾಹಿತ್ಯವಲ್ಲ, ಮಣ್ಣಿನಲ್ಲಿ ಬೆವರು ಕಲಿಸಿ ದುಡಿಯುವ ಮಣ್ಣಿನ ಮಕ್ಕಳ ಸಮುದಾಯವೇ ಜನಪದವಾಗಿದೆ ಎಂದು ಹಾರೂಗೇರಿ ಶ್ರೀ ಸಿದ್ಧೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಕನ್ನಡ ಪ್ರಾಧ್ಯಾಪಕ ಹಾಗೂ ಸಾಹಿತಿ ಟಿ.ಎಸ್.ಒಂಟಗೊಡಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಜ್ಞಾನಜ್ಯೋತಿ ಬೇಸಿಗೆ ತರಬೇತಿ ಶಿಬಿರದ ಸಭಾಭವನದಲ್ಲಿ ಮೇ.4ರಂದು ನಡೆದ ಜನಪದ ಸಾಹಿತ್ಯ ಅಂದು …

Read More »

ಸರ್ಕಾರದಿಂದ ದೊರಕುವ ವಿವಿಧ ಯೋಜನೆಗಳ ಸದುಪಯೋಗಮಾಡಿಕೊಳ್ಳಿ: ಜಗದೀಶ ಜಾಧವ

ಬೆಟಗೇರಿ:ಗ್ರಾಮೀಣ ವಲಯದ ಕೆನರಾ ಬ್ಯಾಂಕ್ ಶಾಖೆಗಳಲ್ಲಿ ಸರ್ಕಾರದಿಂದ ದೊರಕುವ ವಿವಿಧ ಯೋಜನೆಗಳಡಿಯಲ್ಲಿ ದೊರಕುವ ಜೀವವಿಮಾ ಯೋಜನೆ ಸೇರಿದಂತೆ ವಿವಿಧ ಸಹಾಯ, ಸೌಲಭ್ಯಗಳನ್ನು ರೈತರು ಹಾಗೂ ಗ್ರಾಹಕರು ಸದುಪಯೋಗ ಮಾಡಿಕೊಳ್ಳಬೇಕು ಎಂದು ಬೆಟಗೇರಿ ಕೆನರಾ ಬ್ಯಾಂಕ್ ಶಾಖೆಯ ಮ್ಯಾನೇಜರ್ ಜಗದೀಶ ಜಾಧವ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಕೆನರಾ ಬ್ಯಾಂಕ್ ಕಾರ್ಯಾಲಯದಲ್ಲಿ ಮೇ.2ರಂದು ನಡೆದ ಪ್ರಧಾನ ಮಂತ್ರಿ ಸುರಕ್ಷಾ ಭೀಮಾ ಯೋಜನೆಯಡಿಯಲ್ಲಿ ತಪಸಿ ಗ್ರಾಮದ ರೈತ ಮಹಾದೇವ ತಿರಕನ್ನವರ ಅವರು ಇತ್ತೀಚೆಗೆ …

Read More »

ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಕುಶಲಕರ್ಮಿಯ ಮಗಳ ಅಪೂರ್ವ ಸಾಧನೆ

ವರದಿ: ಅಡಿವೇಶ ಮುಧೋಳ. ಬೆಟಗೇರಿ:ಪ್ರಸಕ್ತ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ಫಲಿತಾಂಶದಲ್ಲಿ, ಬಡತನದಲ್ಲಿ ಬೆಳೆದು ಬಂದ ಕುಶಲಕರ್ಮಿಯ ಮಗಳು ಅಮೃತಾ ಅಪೂರ್ವ ಸಾಧನೆ ಮಾಡಿದ್ದಾಳೆ. ಕೌಜಲಗಿ ಪಟ್ಟಣದ ಡಾ. ಮಹದೇವಪ್ಪ ಮಡ್ಯಪ್ಪ ದಳವಾಯಿ ಪ್ರೌಢಶಾಲೆಯಲ್ಲಿ ಎಸ್.ಎಸ್.ಎಲ್.ಸಿ ಓದುತ್ತಿದ್ದ ಬಡ ಕುಶಲಕರ್ಮಿ ಅನಿಲ ಕಂಬಾರ ಅವರ ಮಗಳು ಅಮೃತಾ ಕಂಬಾರ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 625 ರ ಪೈಕಿ 601, ಶೇ. 96.16 ಅಂಕಗಳನ್ನು ಗಳಿಸಿ ಉತ್ತೀರ್ಣಳಾಗಿದ್ದಾಳೆ. ಅಮೃತಾಳ ತಂದೆ ಅನಿಲ …

Read More »

ಬೆಟಗೇರಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಈ ಸಲವೂ ವಿದ್ಯಾರ್ಥಿನೀಯರ ಮೇಲುಗೈ

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರಕಾರಿ ಪ್ರೌಢ ಶಾಲೆಯು ಪ್ರಸಕ್ತ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಶೇ.85.94ರಷ್ಟು ಫಲಿತಾಂಶದ ಸಾಧನೆ ಮಾಡಿದೆ. ಶಾಲೆಯ ವಿದ್ಯಾರ್ಥಿ ಕುಮಾರಿ ರೂಪಾ ಕುರಬೇಟ 609(ಶೇ.97.42)ಅಂಕ ಪಡೆದು ಶಾಲೆಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾಳೆ. ಸವಿತಾ ಮುಧೋಳ 606(ಶೇ.96.96) ಅಂಕ ಪಡೆದು ದ್ವಿತೀಯ ಸ್ಥಾನ, ಕಾವ್ಯ ಮುರಗೋಡ 595( ಶೇ.95.02) ಅಂಕ ಪಡೆದು ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ. ಸ್ಥಳೀಯ ವಿವಿಡಿ ಸರ್ಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಯ, ಶಿಕ್ಷಕ ವೃಂದ …

Read More »

ಮೇ.2ರಿಂದ ಗೋಸಬಾಳ ಮಾರುತಿ ದೇವರ ಓಕುಳಿ

ಬೆಟಗೇರಿ:ಗೋಕಾಕ ತಾಲೂಕಿನ ಗೋಸಬಾಳ ಗ್ರಾಮದ ಶ್ರೀ ಮಾರುತಿ ದೇವರ ಓಕುಳಿ ಇದೇ ಶನಿವಾರ ಮೇ.2ರಿಂದ ಸೋಮವಾರ ಮೇ.4 ರವರೆಗೆ ಜರುಗಲಿದೆ. ಮೇ.3 ರಂದು ಮುಂಜಾನೆ 7ಗಂ ಮಾರುತಿ ದೇವರ ಗದ್ದುಗೆಗೆ ಮಹಾರುದ್ರಾಭಿಷೇಕ, ಮಹಾಪೂಜೆ ಮತ್ತು ಕುಂಕುಮ ಪೂಜೆ ಕಾರ್ಯಕ್ರಮ ನಡೆದ ಬಳಿಕ ಸಾಯಂಕಾಲ 5 ಗಂಟೆಗೆ ಓಕುಳಿ ಕೊಂಡ ಪೂಜೆ ನಡೆಯಲಿದೆ. ರವಿವಾರ ಮೇ.4ರಂದು ಮುಂಜಾನೆ 7ಗಂ ಮಾರುತಿ ದೇವರ ಗದ್ದುಗೆಗೆ ಅಭಿಷೇಕ, ಪೂಜೆ, ನಂತರ ಸಾಯಂಕಾಲ 5 ಗಂಟೆಗೆ …

Read More »

ಮಹಾಲಕ್ಷ್ಮೀ ದೇವರ ಜಾತ್ರೆಯ ಅಂಗವಾಗಿ ದೇವರ ಬಿಂಬ, ಶಿಖರ, ಕಲಶ, ರಥ, ಗಂಗಾ ಜಲ, ಮೃತ್ತಿಕಗಳ ವೈಭವದ ಮೆರವಣಿಗೆಗೆ ಚಾಲನೆ ನೀಡಿದ- ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ: ಗೋಕಾವಿ ನೆಲದ ಶಕ್ತಿ ದೇವತೆಯಾದ ಮಹಾಲಕ್ಷ್ಮೀ ದೇವರ ಜಾತ್ರೆಯ ಅಂಗವಾಗಿ ದೇವರ ಬಿಂಬ, ಶಿಖರ, ಕಲಶ, ರಥ, ಗಂಗಾ ಜಲ, ಮೃತ್ತಿಕಗಳ ವೈಭವದ ಮೆರವಣಿಗೆಗೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ನಿನ್ನೆ ಬುಧವಾರದಂದು ಚಾಲನೆ ನೀಡಿದರು. ನಗರದ ಗುರುವಾರ ಪೇಟೆಯಲ್ಲಿರುವ ಮಹಾಲಕ್ಷ್ಮೀ ಅಮ್ಮನವರ ದೇವಸ್ಥಾನದಿಂದ ಮಹಾಲಕ್ಷ್ಮೀ ದೇವಸ್ಥಾನದವರೆಗೆ ವಿವಿಧ ವಾದ್ಯ ವೃಂದಗಳೊಂದಿಗೆ ಅಪಾರ ಭಕ್ತ ಸಮೂಹದ ಮಧ್ಯ ಮಹಾಲಕ್ಷ್ಮೀ, ಗಣಪತಿ, ಆಂಜನೇಯ, ನಾಗದೇವ, ನವಾಗ್ರಹದೇವರ ಮೂರ್ತಿ ಪ್ರತಿಷ್ಠಾಪನೆ …

Read More »

ಸತೀಶ ಶುಗರ್ಸ್ ನೂತನ ಕಾಂಪ್ರೆಸ್ಡ್ ಬಯೊಗ್ಯಾಸ್ ಉದ್ಘಾಟನಾ ಸಮಾರಂಭ ಜರುಗಿತು.

ಮೂಡಲಗಿ: ತಾಲೂಕಿನ ಹುಣಶ್ಯಾಳ ಪಿಜಿ ಬಳಿಯ ಸತೀಶ್ ಶುಗರ್ಸ್ ಕಾರ್ಖಾನೆಯ ಡಿಸ್ಟಿಲರಿ ಘಟಕದಲ್ಲಿ ನೂತನ ಕಾಂಪ್ರೆಸ್ಡ್ ಬಯೊಗ್ಯಾಸ್ ಘಟಕದ ಉದ್ಘಾಟನಾ ಸಮಾರಂಭ ಬುಧವಾರದಂದು ಜರುಗಿತು. ಕಾರ್ಖಾನೆಯ ಕಾರ್ಯನಿರ್ವಾಹಕ ನಿರ್ದೇಶಕ ರಾಹುಲ್ ಸತೀಶ ಜಾರಕಿಹೊಳಿ ಅವರು ನೂತನ ಕಾಂಪ್ರೆಸ್ಡ್ ಬಯೊಗ್ಯಾಸ್ ಘಟಕವನ್ನು ಉದ್ಘಾಟಿಸಿ ಮತ್ತು ಕಾಂಪ್ರೆಸ್ಡ್ ಬಯೊಗ್ಯಾಸ್ ತುಂಬಿದ ವಾಹನಗಳನ್ನು ಹಸಿರು ಬಾವುಟದೊಂದಿಗೆ ಚಾಲನೆ ನೀಡಿ ಮಾತನಾಡಿ ಈ ಇಂಧನವನ್ನು ವಾಹನ ಇಂಧನವನ್ನಾಗಿ ಮತ್ತು ಅಡುಗೆ ಅನಿಲವನ್ನಾಗಿ ಬಳಿಸಲಾಗುತ್ತದೆ. ಈ ಘಟಕದ …

Read More »

ನಾಗನೂರ ಪಟ್ಟಣ ಪಂಚಾಯತ ಕಾರ್ಯಾಲಯದಲ್ಲಿ ಜಗಜ್ಯೋತಿ ಶ್ರೀ ಬಸವೇಶ್ವರರ ಜಯಂತಿ

ಮೂಡಲಗಿ: ತಾಲ್ಲೂಕಿನ ನಾಗನೂರ ಪಟ್ಟಣ ಪಂಚಾಯತ ಕಾರ್ಯಾಲಯದಲ್ಲಿ ಬುಧವಾರದಂದು ಸಾಂಸ್ಕøತಿಕ ನಾಯಕ ಜಗಜ್ಯೋತಿ ಶ್ರೀ ಬಸವೇಶ್ವರರ ಜಯಂತಿಯನ್ನು ಆಚರಿಸಲ್ಲಾಯಿತು. ಈ ಸಮಯದಲ್ಲಿ ಪಂ.ಪಂ ಅಧ್ಯಕ್ಷರು, ಉಪಾದ್ಯಕ್ಷರು, ಸದಸ್ಯರು, ಮುಖಂಡರು, ಸಿಬ್ಬಂದಿ ವರ್ಗ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು

Read More »

ಸಂಸ್ಕ್ರತಿ ಪರಂಪರೆಯನ್ನು ಯುವಜನಾಂಗ ಗೌರವಿಸಬೇಕು-ಮುರಳಿ ವಜ್ಜರಮಟ್ಟಿ

ಮೂಡಲಗಿ: ಸಮಾಜದಲ್ಲಿ ಶಾಂತಿ ಸೌಹಾರ್ದತೆ ನೆಲೆಸಿ ಮಹಿಮಾ ಪುರುಷರು ಆಶೀರ್ವಾದ ಸರ್ವರಮೇಲೂ ಇರಲಿ, ಸಂಸ್ಕ್ರತಿ ಪರಂಪರೆಯನ್ನು ಯುವಜನಾಂಗ ಗೌರವಿಸಬೇಕು ಎಂದು ಪುಲಗಡ್ಡಿಯ ಮುಖಂಡ ಮುರಳಿ ವಜ್ಜರಮಟ್ಟಿ ಹೇಳಿದರು. ಅವರು ಬುಧವಾರದಂದು ತಾಲೂಕಿನ ಫುಲಗಡ್ಡಿ ಗ್ರಾಮದಲ್ಲಿ ಶ್ರೀ ಗುರು ಚಕ್ರವರ್ತಿ ಸದಾಶಿವ ಶಿವಯೋಗಿ ಆಶ್ರಮದ ನೂತನ ಕಟ್ಟಡದ ಭೂಮಿ ಪೂಜೆ ನೆರವೇರಿಸಿ ಮಾತನಾಡಿ ಗ್ರಾಮೀಣ ಪ್ರದೇಶದಲ್ಲಿ ಎಲ್ಲರೂ ಶಿಕ್ಷಣ ಪಡೆದು ಸರ್ಕಾರದ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಅರಭಾವಿ ಕ್ಷೇತ್ರದ ಜನಪ್ರಿಯ ಶಾಸಕರಾದ ಸನ್ಮಾನ್ಯ …

Read More »