Breaking News
Home / inmudalgi (page 344)

inmudalgi

ಆರಿಹೋಯಿತು ಮೂಡಲಗಿ ದೀಪ : ಶ್ರೀ ಶ್ರೀಪಾದಭೋದ ಮಹಾಸ್ವಾಮಿಜಿಗಳು

ಮೂಡಲಗಿ ತಾಲ್ಲೂಕು ಆಗುವಲ್ಲಿ ಅವಿರತ ಪ್ರಯತ್ನ ಪಟ್ಟು ಹೋರಾಟ ನಡೆಸಿದ್ದ ಮೂಡಲಗಿ ಸಿದ್ಧಸಂಸ್ಥಾನ ಮಠದ ಮಹಾಸ್ವಾಮೀಜಿ ಶ್ರೀ ಶ್ರೀಪಾದ ಬೋಧ ಮಹಾಸ್ವಾಮಿಗಳು ವಿಧಿವಶರಾಗಿದ್ದಾರೆ. ಅವರ ಅಂತ್ಯಕ್ರಿಯೆ ಇಂದು ರಾತ್ರಿಯೇ ಜರುಗಲಿದೆ ಎಂದು ಮಠದ ಮೂಲಗಳು ತಿಳಿಸಿವೆ. ಸಂತಾಪ: ಅವರ ನಿಧನಕ್ಕೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ಮಾಜಿ ಸಚಿವ ಕೆ. ಪಿ. ಸಿ. ಸಿ ಕಾರ್ಯಧ್ಯಕ್ಷ ಹಾಗೂ ಶಾಸಕ ಸತೀಶ್ ಜಾರಕಿಹೊಳಿ, ಕೆ. ಎಮ್. ಎಫ್ ರಾಜ್ಯಾಧ್ಯಕ್ಷ ಹಾಗೂ ಶಾಸಕ …

Read More »

ನಾಳೆಯಿಂದ ನೌಕರರು ಕಚೇರಿಗೆ ಹಾಜರು: ಸೂಚನೆ ಹೊರಡಿಸಿದ ಸರ್ಕಾರ

ಬೆಂಗಳೂರು: ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ನಾಳೆಯಿಂದ ಶೇಕಡ 33ರಷ್ಟು ಸಿಬ್ಬಂದಿ ಕೆಲಸ ಆರಂಭಿಸಲಿದ್ದಾರೆ. ಕೊರೋನಾ ಸೇವೆಯಲ್ಲಿ ತೊಡಗಿಸಿಕೊಂಡಿರುವ 18 ಇಲಾಖೆ ಹೊರತುಪಡಿಸಿ ಉಳಿದ ಇಲಾಖೆಗಳು, ನಿಗಮ ಮಂಡಳಿ, ಪ್ರಾಧಿಕಾರದ ಅಧಿಕಾರಿಗಳು ಮತ್ತು ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗುವಂತೆ ಮುಖ್ಯ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದಾರೆ. ಏಪ್ರಿಲ್ 20 ರಿಂದ ಮೇ 3ರವರೆಗೆ ಸುತ್ತೋಲೆ ಜಾರಿಯಲ್ಲಿರುತ್ತದೆ. ನಾನಾ ಇಲಾಖೆಗಳ ಅಧಿಕಾರಿಗಳು ಮತ್ತು ಶೇಕಡ 33 ರಷ್ಟು ಸಿಬ್ಬಂದಿ ಕೆಲಸಕ್ಕೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ. ವೈದ್ಯಕೀಯ …

Read More »

ಖಾನಟ್ಟಿಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅಭಿಮಾನಿ ಹಾದಿಮನಿಯವರಿಂದ ಕೊರೋನಾ ಸಂತಸ್ತರ ಕುಟುಂಬಗಳಿಗೆ ನಾಗಪ್ಪ ಶೇಖರಗೋಳ ನೇತೃತ್ವದಲ್ಲಿ ಆಹಾರ ವಸ್ತುಗಳ ವಿತರಣೆ

ಮೂಡಲಗಿ: ಅರಬಾಂವಿ ಕ್ಷೇತ್ರದಲ್ಲಿ ಕೊರೋನಾ ವೈರಸ್ ಹರಡುವಿಕೆಯನ್ನು ತಡೆಗಟ್ಟುವಲ್ಲಿ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸಾರ್ವಜನಿಕರ ಸಹಕಾರದಿಂದ ಕೊರೋನಾ ಸೈನಿಕರ ಸೇವೆಯಿಂದ ಸಾಧ್ಯವಾಗುತ್ತಿದೆ ಎಂದು ಕೆ.ಎಮ್.ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಹೇಳಿದರು. ಅವರು ಸಮೀಪದ ಖಾನಟ್ಟಿ ಗ್ರಾಮದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅಭಿಮಾನಿಯಾದ ಗ್ರಾಪಂ ಅಧ್ಯಕ್ಷ     ದ್ಯಾಮವ್ವ  ಹಾದಿಮನಿ ಅವರು ಕೊರೋನಾ ಸಂತಸ್ತರ 100 ಕುಟುಂಬಗಳಿಗೆ …

Read More »

ರಾಜ್ಯದಲ್ಲಿ ಡೆಡ್ಲಿ ಕೊರೊನಾಗೆ ಮತ್ತೊಂದು ಬಲಿ : ಸಾವಿನ ಸಂಖ್ಯೆ 15ಕ್ಕೆ ಏರಿಕೆ

ಬೆಂಗಳೂರು : ರಾಜ್ಯದಲ್ಲಿ ಮಾರಕ ಕೊರೊನಾ ಸೋಂಕು ತಲ್ಲಣ ಸೃಷ್ಟಿಸಿದೆ. ಏತನ್ಮಧ್ಯೆ, ಇಂದು ಕೊರೊನಾ ಸೋಂಕಿತರ ಸಂಖ್ಯೆ 400ರ ಗಡಿ ದಾಟಿದೆ. ಸದ್ಯ ಕಿಲ್ಲರ್ ಕೊರೊನಾಗೆ ಮತ್ತೊಂದು ಬಲಿಯಾಗಿದ್ದು, ರಾಜ್ಯದಲ್ಲಿ ಮಾರಕ ಸೋಂಕಿಗೆ ತುತ್ತಾಗಿ ಬಲಿಯಾದವರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ಕೊರೊನಾ ಸೋಂಕು ಪೀಡಿತ 281ನೇ ರೋಗಿ ಬೆಂಗಳೂರಿನ ಹಳೇಗುಡ್ಡದ ನಿವಾಸಿಯಾಗಿದ್ದು, 65 ವರ್ಷದ ವೃದ್ಧೆ ಬಲಿಯಾಗಿದ್ದಾರೆ. ಉಸಿರಾಟದ ಸಮಸ್ಯೆಯಿಂದಾಗಿ ವೃದ್ಧೆ ಆಸ್ಪತ್ರೆಗೆ ದಾಖಲಾಗಿದ್ದರು. ಆಕೆಯ ರಕ್ತದ ಸ್ಯಾಂಪಲ್ ಹಾಗೂ …

Read More »

ಕೋವಿಡ್-೧೯ ನಿಯಂತ್ರಣ: ಅಲ್ಪಸಂಖ್ಯಾತ ಸಮುದಾಯದ ಮುಖಂಡರ ಜತೆ ಸಭೆ: ಸುರೇಶ ಅಂಗಡಿ

ಬೆಳಗಾವಿ : ಕೋವಿಡ್-೧೯ ಹಿನ್ನೆಲೆಯಲ್ಲಿ ಘೋಷಿಸಲಾಗಿರುವ ಲಾಕ್ ಡೌನ್ ಸಂದರ್ಭದಲ್ಲಿ ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಆರೋಗ್ಯ ಮತ್ತು ಪೊಲೀಸ್ ಇಲಾಖೆಯ ಜತೆ ಸಹಕರಿಸಬೇಕು ಎಂದು ಅಲ್ಪಸಂಖ್ಯಾತ ಸಮುದಾಯದ ಮುಖಂಡರಿಗೆ ರೈಲ್ವೆ ಇಲಾಖೆಯ ರಾಜ್ಯ ಸಚಿವರಾದ ಸುರೇಶ್ ಅಂಗಡಿ ಅವರು ಮನವಿ ಮಾಡಿಕೊಂಡರು. ನಗರದ ಪ್ರವಾಸಿಮಂದಿರದಲ್ಲಿ ಭಾನುವಾರ ನಡೆದ ಅಲ್ಪಸಂಖ್ಯಾತ ಸಮುದಾಯದ ಮುಖಂಡರ ಸಭೆಯಲ್ಲಿ ಅವರು ಮಾತನಾಡಿದರು. ತಬ್ಲಿಘಿ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಬಂದವರು ಹಾಗೂ ಅವರೊಂದಿಗೆ ಪ್ರಾಥಮಿಕ ಸಂಪರ್ಕಕ್ಕೆ …

Read More »

ಬೆಳಗಾವಿ ಜಿಲ್ಲೆಗೆ ಅಲ್ಪ ವಿರಾಮ ನೀಡಿದ ಕೊರೋನಾ ವೈರಸ್

ಬೆಳಗಾವಿ: ರವಿವಾರದ ಮಧ್ಯಾಹ್ನದ ಕರ್ನಾಟಕ ಆರೋಗ್ಯ ಇಲಾಖೆ ಕೊರೋನಾ ಬುಲೆಟಿನ್ ಬಿಡುಗಡೆಯಾಗಿದ್ದು, ಬೆಳಗಾವಿ ಜಿಲ್ಲೆಯಲ್ಲಿ ಯಾರಿಗೂ ಸೋಂಕು ದೃಢ ಪಟ್ಟಿಲ್ಲ. ಈ ಮೂಲಕ ಬೆಳಗಾವಿ ಜಿಲ್ಲೆಯಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ೪೨ ಕ್ಕೆಉಳಿದಿದೆ. ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಹಾವಳಿ ಆರಂಭವಾದಾಗಿನಿಂದ ಈವರೆಗೆ 749 ಜನರ ಗಂಟಲು ದ್ರವ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ನಿನ್ನೆಯ ವರದಿ ಪ್ರಕಾರ 171 ಜನ ಶಂಕಿತರ ರಿಪೋರ್ಟ್ ಬರಬೇಕಿತ್ತು. ಒಟ್ಟು ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ೩೮೮ …

Read More »

ಕಲೆಯಲ್ಲಿ ಕೊರೋನಾ ಜಾಗೃತಿ

ಕಲೆಯಲ್ಲಿ ಕೊರೋನಾ ಜಾಗೃತ ಮೂಡಲಗಿ: ಕೊರೋನಾ ಸಾಂಕ್ರಾಮಿಕ ಕಾಇಲೆ ನಿಯಂತ್ರಿಸಲು ನಾನಾ ರೀತಿಯ ಜಾಗೃತಿಗಳು ನಡೆಯುತ್ತಿವೆ ಆ ನಿಟ್ಟಿನಲ್ಲಿ ಸ್ಥಳೀಯ ಮೂಡಲಗಿ ಶಿಕ್ಷಣ ಸಂಸ್ಥೆಯ ಫ್ರೌಡ ಶಾಲೆಯ ಚಿತ್ರಕಲಾ ಶಿಕ್ಷಕ ಎಸ್.ಎಸ್.ಕುರಣೆ ಅವರು ತಮ್ಮ ಕುಂಚದಿಂದ ವಿಷೇಷ ರೀತಿಯ ಚಿತ್ರ ಬಿಡಿಸಿ ಜಾಗೃತಿ ಮೂಡಿಸಿದ್ದಾರೆ. ಚಿತ್ರದಲ್ಲಿ ಮನೆ ರಚಿಸಿ ಹೊರಗೆ ಇದೆ ಕೊರೋನಾ ನಾವೆಲ್ಲಾ ಮನ್ಯಾಗ ಇರೋಣ ಎಂದು ಬರೆದು. ಮನೆಯಲ್ಲೆ ಸುರಕ್ಷಿತರಾಗಿರೋಣ ಎಂಬ ಸಂದೇಶ ನೀಡಿದ್ದಾರೆ.

Read More »

ಪ್ರಮುಖ ಸುದ್ದಿ ಮದ್ಯ ಮಾರಾಟ ಬೇಡವೇ ಬೇಡ : ಸಚಿವ ರಮೇಶ್ ಜಾರಕಿಹೊಳಿ

ಬೆಳಗಾವಿ, (ಏ.18): ಜಿಲ್ಲೆಯಲ್ಲಿ ಸೋಂಕಿನ ಪ್ರಮಾಣ ಹೆಚ್ಚಳವಾಗಿರುವುದರಿಂದ ಯಾವುದೇ ಕಾರಣಕ್ಕೂ ಅದು ಸಮುದಾಯಕ್ಕೆ ಹರಡದಂತೆ ಕ್ರಮ ಕೈಗೊಳ್ಳಬೇಕು. ಹೆಚ್ಚು ಮಾದರಿಗಳ ಪರಿಶೀಲನೆಗೆ ಅಗತ್ಯವಿರುವ ರ್ಯಾಪಿಡ್ ಟೆಸ್ಟಿಂಗ್ ಕಿಟ್ ಗಳನ್ನು ಬೆಳಗಾವಿ ಜಿಲ್ಲೆಗೂ ಒದಗಿಸಲು ಸರ್ಕಾರದ ಮಟ್ಟದಲ್ಲಿ ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್ ತಿಳಿಸಿದರು. ಕೋವಿಡ್ -19 ನಿಯಂತ್ರಣಕ್ಕೆ ಕೈಗೊಳ್ಳಲಾಗಿರುವ ಕ್ರಮಗಳ ಕುರಿತು ನಗರದ ಪ್ರವಾಸಿಮಂದಿರದಲ್ಲಿ ಶನಿವಾರ (ಏ.18) ಅಧಿಕಾರಿಗಳ ಜತೆ ಅವರು ಚರ್ಚೆ ನಡೆಸಿದರು. ಕ್ವಾರಂಟೈನ್ …

Read More »

ಬೆಳಗಾವಿಯಲ್ಲಿ ಮತ್ತೊಂದು ಕೊರೊನಾ ಸೋಂಕು ಪತ್ತೆ..ಬೆಚ್ಚಿ ಬಿದ್ದ ಕುಂದಾನಗರಿ ಜನ

ಬೆಳಗಾವಿಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇಂದು ಮತ್ತೊಂದು ಕೊರೊನಾ ಸೋಂಕು ಪತ್ತೆಯಾಗಿದ್ದು. ಹಿರೇಬಾಗೇವಾಡಿಯ ವ್ಯಕ್ತಿಯಲ್ಲಿ ಸೋಂಕು ದೃಢವಾಗಿದೆ. ಈ ಮೂಲಕ ಬೆಳಗಾವಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 42ಕ್ಕೆ ಏರಿಕೆಯಾಗಿದ್ದು ಸಧ್ಯ ತೀವ್ರ ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ. ಹಿರೇಬಾಗೇವಾಡಿಯ 45 ವರ್ಷದ ವ್ಯಕ್ತಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಈತನಿಗೆ 128ನೇ ಸೋಂಕಿತ ವ್ಯಕ್ತಿಯಿಂದ ಕೊರೊನಾ ಸೋಂಕು ಹರಡಿದೆ ಎಂಬ ಮಾಹಿತಿ ಲಭ್ಯವಾಗಿದೆ.

Read More »

ಕೊರೋನಾ,ಕರ್ತವ್ಯ ನಿರತರಿಗೆ ಪುರಿ,ಪಲ್ಯ ಊಟ ಬಡಿಸಿದ ಶ್ರೀನಾಥ

ಮೂಡಲಗಿ: ಕೊರೋನಾ ಸೋಂಕು ತಡೆಗಟ್ಟುವಿಕೆಯಲ್ಲಿ ಪ್ರಮುಖ ಪಾತ್ರ ವಹಿಸಿರುವ ಪೋಲಿಸ ಇಲಾಖೆ,ವೈದ್ಯಕೀಯ ಸೇವಾ ಸಿಬ್ಬಂದಿ,ಆಶಾ ಕಾರ್ಯಕರ್ತೆಯರು,ಪುರಸಭೆ ಸಿಬ್ಬಂದಿ ಹಾಗೂ ಪತ್ರಕರ್ತರಿಗೆ ಪಟ್ಟಣದ ಹೃದಯ ಸಿರಿವಂತ ಜನತೆ ದಿನಕ್ಕೊಬ್ಬರಂತೆ ವಿವಿಧ ಬಗೆಯ ಭೋಜನ ಉಣ ಬಡಿಸುತ್ತಿರುವುದು,ನೀರು ಪೊರೈಸುತ್ತಿರುವುದು ಶ್ಲಾಘನೀಯ ಎನ್ನುವುದಕ್ಕಿಂತ ಮಾನವೀಯತೆಗೆ ಮಾದರಿಯಾಗುತ್ತಿದ್ದಾರೆ ಆ ಸಾಲಿನಲ್ಲಿ ಇಲ್ಲಿಯ ಡಿ.ಕೆ.ಶಿವಕುಮರ ಅಸೋಸಿಯೇಷನ್ ಬೆಳಗಾವಿ ಜಿಲ್ಲಾದ್ಯಕ್ಷ ಶ್ರೀನಾಥ ಕರಿಹೊಳಿ ಎಂಬ ಯುವಕ ಸೇವಾ ನಿರತರಿಗೆ ಪುರಿ,ಪಲ್ಯ,ಮೈಸೂರು ಪಾಕ್ ಉಣಬಡಿಸಿ, “ಕೊರೋನಾ ಮಹಾಮಾರಿಯಿಂದ ಪರದಾಡಿತ್ತಿರುವ ಕೂಲಿ …

Read More »