Breaking News
Home / inmudalgi (page 9)

inmudalgi

*ಅಷ್ಟ ಬಂಧ ಪ್ರತಿಷ್ಠಾ, ಬ್ರಹ್ಮಕಲಶೋತ್ಸವ ಕಾರ್ಯಕ್ರಮಕ್ಕೆ ತೆರೆ*

ಗೋಕಾಕ: ಗೋಕಾವಿ ನಾಡಿನ ಶಕ್ತಿ ದೇವತೆಯಾದ ಶ್ರೀ ಮಹಾಲಕ್ಷ್ಮೀ ದೇವಿಯ ಮಹಾ ರಥೋತ್ಸವವು ಸಹಸ್ರಾರು ಭಕ್ತರ ಮಧ್ಯ ಸಡಗರ ಸಂಭ್ರಮದಿಂದ ಬುಧವಾರ ರಾತ್ರಿ ಜರುಗಿತು. ಏಪ್ರಿಲ್ ೩೦ ರಿಂದ ಆರಂಭಗೊಂಡಿರುವ ಅಷ್ಠ ಬಂಧ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಕಾರ್ಯಕ್ರಮವು ಮಹಾ ರಥೋತ್ಸವ ಕಾರ್ಯಕ್ರಮಕ್ಕೆ ಅಪಾರ ಭಕ್ತರು ಆಗಮಿಸಿ ದೇವಿಯರ ದರ್ಶನ ಪಡೆದರು. ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ವಿಶೇಷ ಮುಂದಾಳತ್ವದಲ್ಲಿ ಕಳೆದ ೮ ದಿನಗಳಿಂದ ಅತಿ ವಿಜೃಂಭಣೆಯಿಂದ ದೇವರುಗಳ ಮೂರ್ತಿ ಪ್ರತಿಷ್ಠಾಪನೆ, …

Read More »

‘ವಿದ್ಯಾರ್ಥಿಗಳಲ್ಲಿ ಶ್ರದ್ಧೆ, ಆತ್ಮವಿಶ್ವಾಸ ಇದ್ದರೆ ಯಶಸ್ಸು ಖಚಿತ’- ಸಾಹಿತಿ ಬಾಲಶೇಖರ ಬಂದಿ

ಮೂಡಲಗಿ: ‘ವಿದ್ಯಾರ್ಥಿಗಳು ಶ್ರದ್ಧೆ ಮತ್ತು ಆತ್ಮವಿಶ್ವಾಸದಿಂದ ಅಧ್ಯಯನ ಮಾಡಿದರೆ ಖಂಡಿತ ಯಶಸ್ಸು ದೊರೆಯುತ್ತದೆ’ ಎಂದು ಸಾಹಿತಿ, ಪತ್ರಕರ್ತ ಬಾಲಶೇಖರ ಬಂದಿ ಹೇಳಿದರು. ತಾಲ್ಲೂಕಿನ ಕಮಲದಿನ್ನಿಯ ಮಾರುತೇಶ್ವರ ಓಕುಳಿ, ರಥೋತ್ಸವ ಅಂಗವಾಗಿ ಮಹಾಲಕ್ಷ್ಮೀದೇವಿ ಸಮಿತಿಯ ಸಹಯೋಗದಲ್ಲಿ ಏರ್ಪಡಿಸಿದ್ದ ರಸಮಂಜರಿ ಕಾರ್ಯಕ್ರಮದ ಉದ್ಘಾಟನೆ ಮತ್ತು ಎಸ್‍ಎಸ್‍ಎಲ್‍ಸಿ, ದ್ವಿತೀಯ ಪಿಯುಸಿಯಲ್ಲಿ ಉತ್ತಮ ಅಂಕಗಳನ್ನು ಪಡೆದುಕೊಂಡು ಉತ್ತೀರ್ಣರಾಗಿರುವ ವಿದ್ಯಾರ್ಥಿಗಳ ಸನ್ಮಾನ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಮಾಡಿರುವ ಸಾಧನೆಯು ನಿಮ್ಮ ಸಾಧನೆ …

Read More »

ಇಂದು, ಬೀಜೋಪಚಾರ ಮತ್ತು ಬೀಜ ತಯಾರಿಕೆಯ ಮಹತ್ವದ ಕುರಿತು ಅಂತರ್ಜಾಲ ತರಬೇತಿ ಕಾರ್ಯಕ್ರಮ

ಮೂಡಲಗಿ: ಅರಭಾವಿಯ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ವತಿಯಿಂದ ಮೇ.7 ಬುಧವಾರದಂದು ಮುಂಗಾರು ಹಂಗಾಮಿನಲ್ಲಿ ಬೀಜೋಪಚಾರ ಮತ್ತು ಬೀಜ ತಯಾರಿಕೆಯ ಮಹತ್ವ ಕುರಿತು ಮು.11 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಅಂತರ್ಜಾಲ ತರಬೇತಿಯನ್ನು ಆಯೋಜಿಸಿದ್ದು ಅರಭಾವಿಯ ಕಿತ್ತೂರು ರಾಣಿ ಚೆನ್ನಮ್ಮ ತೋಟಗಾರಿಕಾ ಮಹಾವಿದ್ಯಾಲಯದ ಬೀಜ ತಂತ್ರಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ದೀಲಿಪಕುಮಾರ ಮಸೂತಿ ಅವರು ಉಪನ್ಯಾಸ ನೀಡುವರು. ಆಸಕ್ತರು https://meet.goole.com/vbd- nmmt- twn ಲಿಂಕ್ ಕ್ಲಿಕ್ ಮಾಡುವ ಮೂಲಕ …

Read More »

ಬುಧವಾರದಂದು ಮಹಾಲಕ್ಷ್ಮೀ ದೇವರ ಮಹಾ ರಥೋತ್ಸವ

ಗೋಕಾಕ್ – ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಈಗಾಗಲೇ ಅಷ್ಠ ಬಂಧ ಪ್ರತಿಷ್ಠಾ, ಬ್ರಹ್ಮಕಲಶೋತ್ಸವ ಧಾರ್ಮಿಕ ಕಾರ್ಯಕ್ರಮಗಳು ಕೆ. ವಿ. ರಾಘವೇಂದ್ರ ಉಪಾಧ್ಯಾಯರ ನೇತೃತ್ವದಲ್ಲಿ ನಡೆಯುತ್ತಿದ್ದು, ನಾಳೆ ಬುಧವಾರದಂದು ಮಹಾಲಕ್ಷ್ಮೀ ದೇವರ ಮಹಾ ರಥೋತ್ಸವ ಜರುಗಲಿದೆ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮಾತನಾಡಿದರು ಹೇಳಿದರು. ಮಂಗಳವಾರದಂದು ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆದ ಮಹಾಲಕ್ಷ್ಮೀ ಯಾಗ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಾಳೆ ನಡೆಯುವ ಮಹಾ ರಥೋತ್ಸವ ಕಾರ್ಯಕ್ರಮದಲ್ಲಿ ಅತೀ ಹೆಚ್ಚಿನ …

Read More »

೭೦೦ ವರ್ಷಗಳ ಭವ್ಯ ಇತಿಹಾಸ ಹೊಂದಿರುವ ಗೋಕಾವಿ ನೆಲದ ಶ್ರೀ ಮಹಾಲಕ್ಷ್ಮೀ ದೇವಸ್ಥಾನ

ಗೋಕಾಕ್ – ೭೦೦ ವರ್ಷಗಳ ಭವ್ಯ ಇತಿಹಾಸ ಹೊಂದಿರುವ ಗೋಕಾವಿ ನೆಲದ ಶ್ರೀ ಮಹಾಲಕ್ಷ್ಮೀ ದೇವಸ್ಥಾನವು ನವಿಕೃತವಾಗಿ ನೂತನ ಕಟ್ಟಡವು ಲೋಕಾರ್ಪನೆಗೊಂಡಿದ್ದು, ನೋಡುಗರನ್ನು ಆಕರ್ಷಿಸುತ್ತಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು ಭಾನುವಾರ ರಾತ್ರಿ ನಗರದ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಜರುಗಿದ ನಾಗತನುತರ್ಪಣ ಪೂಜಾ ಕಾರ್ಯಗಳನ್ನು ನೆರವೇರಿಸಿ ಮಾತನಾಡಿದ ಅವರು, ಏಪ್ರಿಲ್ ೩೦ ರಿಂದ ಆರಂಭಗೊಂಡಿರುವ ಮೂರ್ತಿ ಪ್ರತಿಷ್ಠಾಪನೆ, ಬ್ರಹ್ಮ ಕಲಶೋತ್ಸವ ಕಾರ್ಯಕ್ರಮಕ್ಕೆ ಭಕ್ತರು ಅಪಾರ ಸಂಖ್ಯೆಯಲ್ಲಿ ಪಾಲ್ಗೊಳ್ಳುತ್ತಿರುವುದಕ್ಕೆ ಹರ್ಷ …

Read More »

ಬೆಟಗೇರಿ ಚೈತನ್ಯ ಗ್ರುಪ್ಸ್‍ನಿಂದ ಎಸ್‍ಎಸ್‍ಎಲ್‍ಸಿ ಸಾಧಕರಿಗೆ ಸನ್ಮಾನ

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಚೈತನ್ಯ ಗ್ರುಪ್ಸ್‍ನ ಬೆಟಗೇರಿ ಕೃಷ್ಣಶರ್ಮ ಚೈತನ್ಯ ಕನ್ನಡ ಮಾಧ್ಯಮ ಮತ್ತು ಶ್ರೀಮತಿ ಸತ್ತೆವ್ವ ದೇಯಣ್ಣವರ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ಸಂಯುಕ್ತಾಶ್ರಯದಲ್ಲಿ ಇತ್ತೀಚೆಗೆ ಪ್ರಸಕ್ತ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಸಾಧನೆಗೈದ ವಿವಿಧ ಪ್ರೌಢ ಶಾಲೆಯ ಸಾಧನೆಗೈದ ವಿದ್ಯಾರ್ಥಿಗಳ ಸನ್ಮಾನ ಕಾರ್ಯಕ್ರಮ ನಡೆಯಿತು. ಸ್ಥಳೀಯ ವ್ಹಿ.ವ್ಹಿ.ಡಿ ಸರಕಾರಿ ಪ್ರೌಢ ಶಾಲೆಯ ಕುಮಾರಿ ರುಪಾ ಕುರಬೇಟ 97% ಅಂಕಗಳನ್ನು ಗಳಿಸಿ ಪ್ರಥಮ ಸ್ಥಾನ, ಕುಮಾರಿ ಸವಿತಾ ಮುಧೋಳ …

Read More »

ಕನ್ನಡ ಸಾಹಿತ್ಯಕ್ಕೆ ಸ್ಪೂರ್ತಿ ನೀಡಿದ ಸಾಹಿತ್ಯ ಜನಪದ ಸಾಹಿತ್ಯವಾಗಿದೆ: ಟಿ.ಎಸ್.ಒಂಟಗೊಡಿ

ಬೆಟಗೇರಿ:ಎಲ್ಲ ಸಾಹಿತ್ಯಗಳಲ್ಲಿ ಜನಪದ ಸಾಹಿತ್ಯ ಸರಳ ಸುಂದರ ಹಾಗೂ ಶ್ರೀಮಂತ ಸಾಹಿತ್ಯವಾಗಿದೆ. ಜನಪದವೆಂಬುವುದು ವಿದ್ವಾಂಸರ ಪೆನ್ನಿನಿಂದ ಬಂದ ಸಾಹಿತ್ಯವಲ್ಲ, ಮಣ್ಣಿನಲ್ಲಿ ಬೆವರು ಕಲಿಸಿ ದುಡಿಯುವ ಮಣ್ಣಿನ ಮಕ್ಕಳ ಸಮುದಾಯವೇ ಜನಪದವಾಗಿದೆ ಎಂದು ಹಾರೂಗೇರಿ ಶ್ರೀ ಸಿದ್ಧೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಕನ್ನಡ ಪ್ರಾಧ್ಯಾಪಕ ಹಾಗೂ ಸಾಹಿತಿ ಟಿ.ಎಸ್.ಒಂಟಗೊಡಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಜ್ಞಾನಜ್ಯೋತಿ ಬೇಸಿಗೆ ತರಬೇತಿ ಶಿಬಿರದ ಸಭಾಭವನದಲ್ಲಿ ಮೇ.4ರಂದು ನಡೆದ ಜನಪದ ಸಾಹಿತ್ಯ ಅಂದು …

Read More »

ಸರ್ಕಾರದಿಂದ ದೊರಕುವ ವಿವಿಧ ಯೋಜನೆಗಳ ಸದುಪಯೋಗಮಾಡಿಕೊಳ್ಳಿ: ಜಗದೀಶ ಜಾಧವ

ಬೆಟಗೇರಿ:ಗ್ರಾಮೀಣ ವಲಯದ ಕೆನರಾ ಬ್ಯಾಂಕ್ ಶಾಖೆಗಳಲ್ಲಿ ಸರ್ಕಾರದಿಂದ ದೊರಕುವ ವಿವಿಧ ಯೋಜನೆಗಳಡಿಯಲ್ಲಿ ದೊರಕುವ ಜೀವವಿಮಾ ಯೋಜನೆ ಸೇರಿದಂತೆ ವಿವಿಧ ಸಹಾಯ, ಸೌಲಭ್ಯಗಳನ್ನು ರೈತರು ಹಾಗೂ ಗ್ರಾಹಕರು ಸದುಪಯೋಗ ಮಾಡಿಕೊಳ್ಳಬೇಕು ಎಂದು ಬೆಟಗೇರಿ ಕೆನರಾ ಬ್ಯಾಂಕ್ ಶಾಖೆಯ ಮ್ಯಾನೇಜರ್ ಜಗದೀಶ ಜಾಧವ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಕೆನರಾ ಬ್ಯಾಂಕ್ ಕಾರ್ಯಾಲಯದಲ್ಲಿ ಮೇ.2ರಂದು ನಡೆದ ಪ್ರಧಾನ ಮಂತ್ರಿ ಸುರಕ್ಷಾ ಭೀಮಾ ಯೋಜನೆಯಡಿಯಲ್ಲಿ ತಪಸಿ ಗ್ರಾಮದ ರೈತ ಮಹಾದೇವ ತಿರಕನ್ನವರ ಅವರು ಇತ್ತೀಚೆಗೆ …

Read More »

ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಕುಶಲಕರ್ಮಿಯ ಮಗಳ ಅಪೂರ್ವ ಸಾಧನೆ

ವರದಿ: ಅಡಿವೇಶ ಮುಧೋಳ. ಬೆಟಗೇರಿ:ಪ್ರಸಕ್ತ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ಫಲಿತಾಂಶದಲ್ಲಿ, ಬಡತನದಲ್ಲಿ ಬೆಳೆದು ಬಂದ ಕುಶಲಕರ್ಮಿಯ ಮಗಳು ಅಮೃತಾ ಅಪೂರ್ವ ಸಾಧನೆ ಮಾಡಿದ್ದಾಳೆ. ಕೌಜಲಗಿ ಪಟ್ಟಣದ ಡಾ. ಮಹದೇವಪ್ಪ ಮಡ್ಯಪ್ಪ ದಳವಾಯಿ ಪ್ರೌಢಶಾಲೆಯಲ್ಲಿ ಎಸ್.ಎಸ್.ಎಲ್.ಸಿ ಓದುತ್ತಿದ್ದ ಬಡ ಕುಶಲಕರ್ಮಿ ಅನಿಲ ಕಂಬಾರ ಅವರ ಮಗಳು ಅಮೃತಾ ಕಂಬಾರ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 625 ರ ಪೈಕಿ 601, ಶೇ. 96.16 ಅಂಕಗಳನ್ನು ಗಳಿಸಿ ಉತ್ತೀರ್ಣಳಾಗಿದ್ದಾಳೆ. ಅಮೃತಾಳ ತಂದೆ ಅನಿಲ …

Read More »

ಬೆಟಗೇರಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಈ ಸಲವೂ ವಿದ್ಯಾರ್ಥಿನೀಯರ ಮೇಲುಗೈ

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರಕಾರಿ ಪ್ರೌಢ ಶಾಲೆಯು ಪ್ರಸಕ್ತ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಶೇ.85.94ರಷ್ಟು ಫಲಿತಾಂಶದ ಸಾಧನೆ ಮಾಡಿದೆ. ಶಾಲೆಯ ವಿದ್ಯಾರ್ಥಿ ಕುಮಾರಿ ರೂಪಾ ಕುರಬೇಟ 609(ಶೇ.97.42)ಅಂಕ ಪಡೆದು ಶಾಲೆಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾಳೆ. ಸವಿತಾ ಮುಧೋಳ 606(ಶೇ.96.96) ಅಂಕ ಪಡೆದು ದ್ವಿತೀಯ ಸ್ಥಾನ, ಕಾವ್ಯ ಮುರಗೋಡ 595( ಶೇ.95.02) ಅಂಕ ಪಡೆದು ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ. ಸ್ಥಳೀಯ ವಿವಿಡಿ ಸರ್ಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಯ, ಶಿಕ್ಷಕ ವೃಂದ …

Read More »